ಮರಾಠರಿಗೆ 16% ಮೀಸಲು?
Team Udayavani, Nov 16, 2018, 7:31 AM IST
ಮುಂಬಯಿ: ಮಹಾರಾಷ್ಟ್ರ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಮರಾಠ ಸಮುದಾಯಕ್ಕೆ ಶೇ.16ರಷ್ಟು ಮೀಸಲು ನೀಡಲು ಶಿಫಾರಸು ಮಾಡಿದೆ. ಈ ಕ್ರಮ ಹಾಲಿ ಇರುವ ಮೀಸಲು ಪ್ರಮಾಣ ಶೇ.52ಕ್ಕೆ ಹೊರತಾಗಿದೆ. ಒಂದು ವೇಳೆ ಸರಕಾರ ಅದನ್ನು ಅಂಗೀಕರಿಸಿದರೆ ಒಟ್ಟು ಪ್ರಮಾಣ ಶೇ.68 ಆಗಲಿದೆ. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಮರಾಠರಿಗೆ ಈ ವ್ಯವಸ್ಥೆ ಅನ್ವಯವಾಗಲಿದೆ.
ಮೀಸಲು ನೀಡುವ ಬಗ್ಗೆ ಅಧ್ಯಯನ ನಡೆಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಎಂ.ಡಿ.ಗಾಯಕ್ವಾಡ್ ನೇತೃತ್ವದ ಸಮಿತಿ ಮಹಾರಾಷ್ಟ್ರದ ಒಟ್ಟು ಜನಸಂಖ್ಯೆಯ ಶೇ.30 ಮಂದಿ ಮರಾಠರು ಸಾಮಾಜಿಕವಾಗಿಯೂ, ಆರ್ಥಿಕ ವಾಗಿಯೂ ಹಿಂದುಳಿದಿದ್ದಾರೆ ಎಂದು ಅಭಿಪ್ರಾಯಪಟ್ಟಿದೆ ಎಂದು ಮೂಲಗಳು ಹೇಳಿವೆ. ಗುರುವಾರ ಮುಖ್ಯ ಕಾರ್ಯದರ್ಶಿ ಡಿ.ಕೆ.ಜೈನ್ ಅವರಿಗೆ ವರದಿಯನ್ನು ಸಮಿತಿ ಸಲ್ಲಿಸಿದೆ.
ಮೀಸಲು ನೀಡಬೇಕು ಎಂದು ಹಿಂಸಾತ್ಮಕ ಹೋರಾಟವೇ ನಡೆದಿತ್ತು. ಹೀಗಾಗಿ ಫಡ್ನವೀಸ್ ಸರಕಾರ 2017ರ ಜೂನ್‌ನಲ್ಲಿ ವಿಚಾರವನ್ನು ಹಿಂದುಳಿದ ವರ್ಗಗಳ ಆಯೋಗಕ್ಕೆ ಶಿಫಾರಸು ಮಾಡಿತ್ತು. 2017ರ ಆಗಸ್ಟ್‌ನಿಂದ ಆಯೋಗ ಈ ಬಗ್ಗೆ ಅಧ್ಯಯನ ನಡೆಸಲು ಆರಂಭಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ
Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kundapura: ಹೆಮ್ಮಾಡಿ; 4 ರಸ್ತೆ ಸೇರುವಲ್ಲಿ ಒಂದೂ ತಂಗುದಾಣವಿಲ್ಲ!
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.