ಬಿಜೆಪಿ ವಿರುದ್ಧ ಮಾಜಿ ಸಿಎಂ ಟ್ವೀಟ್ ದಾಳಿ
Team Udayavani, Nov 17, 2018, 6:05 AM IST
ಬೆಂಗಳೂರು: “ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯದಲ್ಲಿ ಮನೆ ಮಾಡಿದರೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ರಾಜ್ಯದ ಜನತೆ ಬೆಂಬಲ ನೀಡುವುದಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸರಣಿ ಟ್ವೀಟ್‌ಗಳ ಮೂಲಕ ಬಿಜೆಪಿ ನಾಯಕರ ವಿರುದ್ಧ ವಾಗ್ಧಾಳಿ ನಡೆಸಿರುವ ಅವರು, “ಕರ್ನಾಟಕದ ಕರಾವಳಿಯನ್ನು ಬಿಜೆಪಿ ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿದೆ. ಹಾಗಾಗಿ ಬಿಜೆಪಿ ರಾಷ್ಟ್ರೀಯ ನಾಯಕರು ಮೇಲಿಂದ ಮೇಲೆ ಕರಾವಳಿಗೆ ಭೇಟಿ ನೀಡುತ್ತಿದ್ದಾರೆ.
ಅವರು ರಾಜ್ಯದಲ್ಲಿಯೇ ಮನೆ ಮಾಡಿದರೂ ರಾಜ್ಯದ ಜನತೆ ಬಿಜೆಪಿ ಬೆಂಬಲಿಸುವುದಿಲ್ಲ’ ಎಂದು ಹೇಳಿದ್ದಾರೆ. ಬಿಜೆಪಿಗೆ ಅಯೋಧ್ಯೆಯ ವಿವಾದ ಜೀವಂತವಾಗಿರುವುದು ಬೇಕಿದೆಯೇ ವಿನಹ ರಾಮಮಂದಿರ ನಿರ್ಮಾಣ ಮಾಡುವುದಲ್ಲ. ಚುನಾವಣೆ ಸಮೀಪಿಸುತ್ತಿರುವ ವೇಳೆಯಲ್ಲಿ ರಾಮ ಜನ್ಮ ಭೂಮಿ ವಿವಾದ ಮತ್ತೆ ಜೀವ ಪಡೆದಿರುವುದು ಬಿಜೆಪಿ ಜನರನ್ನು ಭಾವನಾತ್ಮಕವಾಗಿ ತಮ್ಮತ್ತ ಹಿಡಿದಿಡುವ ಪ್ರಯತ್ನದ ಒಂದು ಭಾಗವಷ್ಟೇ. ಇದು ಜನತೆಗೂ ಗೊತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಮತ್ತೂಂದು ಟ್ವೀಟ್‌ನಲ್ಲಿ ನಾನು ರಾಜಕೀಯದಲ್ಲಿರುವವರೆಗೂ ಅಹಿಂದ ವರ್ಗದ ಹಿತ ರಕ್ಷಣೆಗೆ ಬದಟಛಿನಿದ್ದೇನೆ. ಅಹಿಂದ ಒಂದು ಸಂಘಟನೆಯಷ್ಟೇ ಅಲ್ಲ. ಅದೊಂದು ಚಳವಳಿ. ಅವರ ಬೇಡಿಕೆಗಳು ಪೂರ್ಣವಾಗಿ ಈಡೇರುವವರೆಗೂ ಚಳವಳಿ ನಿರಂತರವಾಗಿರುತ್ತದೆ. ಅದಕ್ಕೆ ನನ್ನ ಸಂಪೂರ್ಣ ಬೆಂಬಲ ಕೂಡ ಇದೆ. ಈಗಲೂ ನಾನು ಅಹಿಂದ ವರ್ಗದ ಧ್ವನಿಯಾಗಿದ್ದೇನೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.