ಹಿರಿಯ ಚಿತ್ರ ನಿರ್ದೇಶಕ ಶಂಕರ್ ಸುಗ್ನಳ್ಳಿ ನಿಧನ
Team Udayavani, Nov 17, 2018, 6:05 AM IST
ಶಿರಹಟ್ಟಿ/ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಶಂಕರ್ ಸುಗ್ನಳ್ಳಿ (56 )ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ನಿಧನರಾಗಿದ್ದಾರೆ.
ಮೃತರು ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಎಚ್1ಎನ್1 ರೋಗದಿಂದ ಬಳಲುತ್ತಿದ್ದ ಶಂಕರ್ ಸುಗ್ನಳ್ಳಿ, ಕಳೆದ ಹಲವು ದಿನಗಳಿಂದ ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಂಕು ಶ್ವಾಸಕೋಶಕ್ಕೂ ತಗುಲಿದ್ದರಿಂದ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು. ಮೃತರ ಅಂತ್ಯಕ್ರಿಯೆ ಗುರುವಾರ ಸಂಜೆ ಸ್ವಗ್ರಾಮ ಸುಗ್ನಳ್ಳಿಯಲ್ಲಿ ಜರುಗಿತು.
ಶಿರಹಟ್ಟಿ ತಾಲೂಕಿನ ಸುಗ್ನಳ್ಳಿ ಗ್ರಾಮದವರಾದ ಶಂಕರಲಿಂಗ ಅವರು, ಹಲವಾರು ಚಿತ್ರಗಳಲ್ಲಿ ನಟಿಸಿದ್ದರಲ್ಲದೇ ನಿರ್ದೇಶನವನ್ನೂ ಮಾಡಿದ್ದರು. ಮಹಾ ದಾಸೋಹಿ ಶರಣ ಬಸವ, ಏಳುಕೋಟಿ ಮಾರ್ತಾಂಡ ಭೈರವ, ವಿಜಯ ಕಂಕಣ, ಕಡ್ಲಿಮಟ್ಟಿ ಸ್ಟೇಷನ್ ಮಾಸ್ತರ, ಪ್ರೇಮ ದೇವತೆ, ಕತೆಯಾದ ಕಾಳ (ರಾಜ್ಯ ಪ್ರಶಸ್ತಿ ವಿಜೇತ ಚಿತ್ರ), ಹೋಳಿ, ಅದ್ನಾಡಿ ಅಳಿಯ, ಶ್ರೀ ಕಾಡಸಿದ್ದೇಶ್ವರ ಮಹಿಮೆ, ಫಕ್ಕಿರೇಶ್ವರ ಮಹಾತೆ¾, ಮಹಾಯೋಗಿ ಮಹಾದೇವ ವಿಜಯ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದರು. ಕಾಡು ನಮ್ಮ ನಾಡು, ಶ್ರೀ ಗುರು ಕೊಟ್ಟೂರೇಶ್ವರ ಚಿತ್ರಗಳನ್ನೂ ನಿರ್ದೇಶಿಸಿದ್ದು, ಅವು ಬಿಡುಗಡೆಯಾಗಬೇಕಿವೆ. ನಟಿ ರಾಗಿಣಿ ದ್ವಿವೇದಿ ಅವರನ್ನು “ಹೋಳಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪರಿಚಯಿಸಿದ ಖ್ಯಾತಿ ಅವರಿಗಿದೆ. ನಿರ್ದೇಶಕ, ನಿರ್ಮಾಪಕ ಅಷ್ಟೇ ಅಲ್ಲದೆ ಛಾಯಾಗ್ರಹಕ ಮತ್ತು ನಟನಾಗಿಯೂ ಗುರುತಿಸಿಕೊಂಡಿದ್ದ ಶಂಕರಲಿಂಗ ಸುಗ್ನಳ್ಳಿ ಅವರ ನಿಧನಕ್ಕೆ ಚಿತ್ರರಂಗದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.