ರಾಜ್ಯದಲ್ಲಿ ಬಲ ಕಳೆದುಕೊಂಡ ರಾಹುಲ್ ಶಕ್ತಿ
Team Udayavani, Nov 17, 2018, 6:00 AM IST
ಬೆಂಗಳೂರು: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ತಳ ಮಟ್ಟದ ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಹೊಂದುವ ಉದ್ದೇಶದಿಂದ ಶುರು ಮಾಡಲಾಗಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ರಾಜ್ಯದಲ್ಲಿ ಹಿನ್ನಡೆಯಾಗಿದೆ.
ಐವತ್ತು ಲಕ್ಷ ಸದಸ್ಯತ್ವ ಗುರಿ ಇಟ್ಟುಕೊಂಡು ಜುಲೈನಲ್ಲಿ ಶಕ್ತಿ ಯೋಜನೆಗೆ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಚಾಲನೆ ನೀಡಿದ್ದರು. ಆದರೆ, ಮೂರು ತಿಂಗಳಲ್ಲಿ ಆಗಿರುವುದು ಒಂದೂವರೆ ಲಕ್ಷ ಸದಸ್ಯತ್ವ ಮಾತ್ರ.
ಶಕ್ತಿ ಯೋಜನೆ ನಮ್ಮ ನಿರೀಕ್ಷೆಯಂತೆ ನಡೆಯುತ್ತಿದೆ. ನವೆಂಬರ್ 30 ರೊಳಗೆ ಯೋಜನೆ ಪೂರ್ಣಗೊಳಿಸುವ ಗುರಿಯಿದೆ. ಕೆಲವು ಕ್ಷೇತ್ರಗಳಲ್ಲಿ ಚುನಾವಣೆ ನಡೆದ ಹಿನ್ನೆಲೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ. ಮೈಸೂರು ಭಾಗದಲ್ಲಿ ಸ್ವಲ್ಪ ಕಡಿಮೆಯಾಗಿದೆ. ಆ ಕ್ಷೇತ್ರಗಳಲ್ಲಿ ವೇಗ ಹೆಚ್ಚಿಸುತ್ತೇವೆ, ಎಂದು ಶಕ್ತಿ ಯೋಜನೆ ರಾಜ್ಯ ಸಂಯೋಜಕ ಸೂರಜ್ ಹೆಗಡೆ ತಿಳಿಸಿದ್ದಾರೆ.
ರಾಜ್ಯದ ಮೂವತ್ತು ಜಿಲ್ಲೆಗಳ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಸ್ವಲ್ಪ ಮಟ್ಟಿಗೆ ಪ್ರಗತಿ ಕಂಡಿದ್ದು, ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಅಸ್ತಿತ್ವವನ್ನೇ ಪ್ರಶ್ನಿಸುವಂತೆ ಮಾಡಿದೆ. ಬೆಂಗಳೂರು ಉತ್ತರ ಜಿಲ್ಲೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 2854 ಜನರು ಸದಸ್ಯರಾಗಿದ್ದರೆ, ಮಂಡ್ಯದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೇವಲ 98 ಜನ ಸದಸ್ಯರಾಗಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ 20 ಸಾವಿರ ಸದಸ್ಯತ್ವ ನೋಂದಣಿ ಮಾಡಲಾಗಿದ್ದು, ಮಂಡ್ಯದ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಕೇವಲ 20 ಜನ ನೋಂದಣಿಯಾಗಿದ್ದಾರೆ.
ಪಕ್ಷದ ಸಂಘಟನೆಯ ದೃಷ್ಟಿಯಿಂದ ಕಾಂಗ್ರೆಸ್ 37 ಜಿಲ್ಲೆಗಳನ್ನಾಗಿ ವಿಂಗಡಿಸಲಾಗಿದ್ದು, ಬೆಂಗಳೂರು ಉತ್ತರ, ಹುಬ್ಬಳ್ಳಿ-ಧಾರವಾಡ, ಬೀದರ್, ವಿಜಯಪುರ, ಗದಗ, ಬೆಂಗಳೂರು ಕೇಂದ್ರÅ, ಮೈಸೂರು ನಗರ, ಚಿಕ್ಕಬಳ್ಳಾಪುರ ಹಾಗೂ ಧಾರವಾಡ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸಾವಿರ ಸದಸ್ಯತ್ವವನ್ನು ದಾಟಿದ್ದು ಉಳಿದ ವಿಧಾನಸಭಾ ಕ್ಷೇತ್ರಗಳಲ್ಲಿ 104 ರಿಂದ 898 ರ ವರೆಗೆ ಸದಸ್ಯತ್ವ ಮಾಡಲಾಗಿದೆ.
ನಾಯಕರ ನಿರಾಸಕ್ತಿ
ಸ್ಥಳೀಯವಾಗಿ ಕೆಳ ಹಂತದ ಕಾರ್ಯಕರ್ತರು ನೇರವಾಗಿ ರಾಹುಲ್ ಗಾಂಧಿಯೊಂದಿಗೆ ಸಂಪರ್ಕ ಕಲ್ಪಸಲು ಶಕ್ತಿ ಯೋಜನೆ ಜಾರಿಗೆ ತಂದಿದ್ದು, ಕಾರ್ಯಕರ್ತರು ತಮ್ಮ ಮೊಬೈಲ್ ನಂಬರ್‌ನಿಂದ ತಮ್ಮ ಓಟರ್ ಐಡಿ ನಮೂದಿಸಿ ಸಂದೇಶ ರವಾನಿಸಿದರೆ ರಾಹುಲ್ ಗಾಂಧಿಯಿಂದ ಧನ್ಯವಾದದ ಧ್ವನಿ ಮುದ್ರಿತ ಮಾಹಿತಿ ಬರುತ್ತದೆ. ಕೆಳ ಹಂತದ ಕಾರ್ಯಕರ್ತರು ನೇರವಾಗಿ ರಾಹುಲ್ ಗಾಂಧಿಯೊಂದಿಗೆ ಸಂಪರ್ಕ ಹೊಂದಿದರೆ, ತಮ್ಮನ್ನು ನಿರ್ಲಕ್ಷ್ಯ ಮಾಡುತ್ತಾರೆ. ಅಲ್ಲದೇ ಕಾರ್ಯಕರ್ತರು ತಮ್ಮ ಮಾತಿಗೆ ಬೆಲೆ ಕೊಡುವುದಿಲ್ಲ ಎನ್ನುವ ಕಾರಣಕ್ಕೆ ಈ ಯೋಜನೆಯನ್ನು ಗಂಭೀರವಾಗಿ ಪರಿಗಣಿಸದೇ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿವೆ.
ರಾಜ್ಯ ನಾಯಕರ ಸಭೆ:
ನೋಂದಣಿ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿಭಾಗವಾರು ಸಭೆ ನಡೆಸುತ್ತಿದ್ದು, ಶುಕ್ರವಾರ ಮೈಸೂರು ವಿಭಾಗದ ಪದಾಧಿಕಾರಿಗಳ ಸಭೆ ನಡೆಸಿ ಯೋಜನೆಯ ವೇಗ ಹೆಚ್ಚಿಸುವಂತೆ ಸೂಚಿಸಿದ್ದಾರೆ. ಶನಿವಾರ ಬೆಳಗಾವಿ ಹಾಗೂ ಬೆಂಗಳೂರು ವಿಭಾಗದ ಪದಾಧಿಕಾರಿಗಳ ಸಭೆ ಹಾಗೂ ನವೆಂಬರ್ 20 ರಂದು ಕಲಬುರಗಿ ವಿಭಾಗದ ಜಿಲ್ಲಾಧ್ಯಕ್ಷರು ಹಾಗೂ ಉಸ್ತುವಾರಿ ಪದಾಧಿಕಾರಿಗಳ ಸಭೆ ನಡೆಸಲಿದ್ದಾರೆ.
– ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.