ಇಂದು ಕೊಂಡೆವೂರಿನಲ್ಲಿ ಕನ್ನಡ ರಾಜ್ಯೋತ್ಸವ, ಪ್ರಶಸ್ತಿ ಪ್ರದಾನ
Team Udayavani, Nov 17, 2018, 3:15 AM IST
ಬದಿಯಡ್ಕ: ಗಡಿನಾಡು ಕಾಸರಗೋಡಿನ ಕನ್ನಡ ಅಸ್ಮಿತೆಯ ಉಳಿಸುವಿಕೆಗಾಗಿ ಸನ್ನದ್ದವಾಗಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕದ ನೇತೃತ್ವದಲ್ಲಿ ನ. 17ರಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಇವುಗಳ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಗಾಯತ್ರಿ ಮಂಟಪದಲ್ಲಿ ಬೆಳಗ್ಗೆ 10 ರಿಂದ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಸಮಾರಂಭದಲ್ಲಿ ಗಡಿನಾಡ ಕಲಾ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷ ಪ್ರಭಾಕರ ಕಲ್ಲೂರಾಯ ಬನದಗದ್ದೆ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸರಕಾರದ ಕುಡಿಯುವ ನೀರು ಹಾಗೂ ನೈರ್ಮಲ್ಯ ಖಾತೆಯ ಸಚಿವ ರಮೇಶ್ ಸಿ. ಜಿಗಜಿಣಗಿ ಉದ್ಘಾಟಿಸುವರು. ಕರ್ನಾಟಕ ಸರಕಾರದ ಅರಣ್ಯ ಸಚಿವ ಎಸ್.ಆರ್. ಶಂಕರ್ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಪ್ರಶಸ್ತಿ ಪ್ರದಾನಗೈಯುವರು. ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು, ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷ ಟಿ. ತಿಮ್ಮೇಗೌಡ, ಉಪಸ್ಥಿತರಿರುವರು.
ಕರ್ನಾಟಕ ಸರಕಾರದ ದಿಲ್ಲಿ ವಿಶೇಷ ಪ್ರತಿನಿಧಿ ಸಯ್ಯದ್ ಮೊಯ್ದಿ ಅಲ್ತಾಫ್, ಕೇರಳ ಜವುಳಿ ನಿಗಮದ ಅಧ್ಯಕ್ಷ ಸಿ.ಆರ್. ವಲ್ಸನ್, ಜಿಲ್ಲಾ ಪಂಚಾಯತ್ ಸದಸ್ಯ ನ್ಯಾಯವಾದಿ ಕೆ. ಶ್ರೀಕಾಂತ್, ಮಂಜೇಶ್ವರ ಬ್ಲಾ.ಪಂ. ಅಧ್ಯಕ್ಷ ಎ.ಕೆ.ಎಂ. ಅಶ್ರಫ್, ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಉಪಸ್ಥಿತರಿದ್ದು ಶುಭಹಾರೈಸುವರು. ವಿಶೇಷ ಆಹ್ವಾನಿತರಾಗಿ ಮಂಗಲ್ಪಾಡಿ ಗ್ರಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಬಿ.ಎಂ.ಮುಸ್ತಫಾ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಚೇತನಾ ಎಂ., ಉದ್ಯಮಿ ಯು.ಕೆ. ಯೂಸುಫ್ ಮೊದಲಾದವರು ಉಪಸ್ಥಿತರಿರುವರು.
ಉದ್ಘಾಟನಾ ಸಮಾರಂಭದ ಬಳಿಕ ಕವಿ, ಪತ್ರಕರ್ತ ಕೆ. ರಾಧಾಕೃಷ್ಣ ಉಳಿಯತ್ತಡ್ಕ ಅವರ ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ನಡೆಯಲಿದೆ. ಆ ಬಳಿಕ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಕತ್ವದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು,ನಿವೃತ್ತ ಉಪ ಜಿಲ್ಲಾಧಿಕಾರಿ ಬಾಲಕೃಷ್ಣ ಅಗ್ಗಿತ್ತಾಯ ಮಧೂರು, ಶ್ರೀಕಾಂತ್ ನಾರಾಯಣ್ ನೆಟ್ಟಣಿಗೆ, ಸಂಧ್ಯಾಗೀತಾ ಬಾಯಾರು, ವಿದ್ಯಾಗಣೇಶ್ ಅಣಂಗೂರು ನಿರ್ವಹಿಸುವರು.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗುವ ಸಾಧಕರು
ಸಮಾರಂಭದ ಉದ್ಘಾಟನಾ ವೇದಿಕೆಯಲ್ಲಿ ವಿಶೇಷ ಸಾಧನೆ- ಕೊಡುಗೆಗಳ ಮೂಲಕ ವಿವಿಧ ವಿಭಾಗಗಳ ಸಾಧಕರಿಗೆ ಪ್ರಶಸ್ತಿ ಪ್ರದಾನಗೈದು ಗೌರವಿಸಲಾಗುವುದು. ಸಾಮಾಜಿಕ ಹಸಿರು ಅರಿವಿನ ರೂವಾರಿ ನಾಡೋಜ ಸಾಲುಮರದ ತಿಮ್ಮಕ್ಕ, ದೀನಬಂಧು ಸಾಯಿರಾಂ ಗೋಪಾಲಕೃಷ್ಣ ಭಟ್, ಶಾ.ಮಂ.ಕೃಷ್ಣರಾಯ, ಜಾನಪದ ಕಲಾವಿದ ಕುಟ್ಟಿ ಬಜಕ್ಕೂಡ್ಲು, ಹಿರಿಯ ಪತ್ರಕರ್ತ, ಕವಿ-ಸಾಹಿತಿ ಮಲಾರು ಜಯರಾಮ ರೈ, ಮುನಿಯಾಲು ಉದಯ ಶೆಟ್ಟಿ, ಸಂಕೀರ್ತನಕಾರ ಜಯಾನಂದಕುಮಾರ್ ಹೊಸದುರ್ಗ, ತೋನ್ಸೆ ವಿಜಯಕುಮಾರ್ ಶೆಟ್ಟಿ, ಎಸ್. ಜಗದೀಶ್ಚಂದ್ರ ಅಂಚನ್, ಮೊಹಮ್ಮದ್ ಆಸೀಫ್ ಸವಣೂರು, ಮಡಿಕೇರಿ ಸುಳ್ಳಿಮಾಡದ ಗೌರಿ ನಂಜಪ್ಪ ಅವರನ್ನು ಗೌರವಿಸಲಾಗುವುದು.
ಪ್ರಶಸ್ತಿ ಸ್ವೀಕರಿಸಲಿರುವ ಗಣ್ಯರು: ಸಾಲುಮರದ ತಿಮ್ಮಕ್ಕ, ಸಾಯಿರಾಂ ಗೋಪಾಲಕೃಷ್ಣ ಭಟ್, ಶಾ.ಮಂ. ಕೃಷ್ಣರಾಯ, ಜಾನಪದ ಕಲಾವಿದ ಕುಟ್ಟಿ ಬಜಕ್ಕೂಡ್ಲು, ಹಿರಿಯ ಪತ್ರಕರ್ತ, ಕವಿ-ಸಾಹಿತಿ ಮಲಾರು ಜಯರಾಮ ರೈ, ಮುನಿಯಾಲು ಉದಯ ಶೆಟ್ಟಿ, ಸಂಕೀರ್ತನಕಾರ ಜಯಾನಂದಕುಮಾರ್ ಹೊಸದುರ್ಗ, ತೋನ್ಸೆ ವಿಜಯಕುಮಾರ್ ಶೆಟ್ಟಿ, ಎಸ್.ಜಗದೀಶ್ಚಂದ್ರ ಅಂಚನ್, ಮೊಹಮ್ಮದ್ ಆಸೀಫ್ ಸವಣೂರು, ಮಡಿಕೇರಿ ಸುಳ್ಳಿಮಾಡದ ಗೌರಿ ನಂಜಪ್ಪ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.