5 ವರ್ಷಗಳ ನಂತರ ಕಾಂಗ್ರೆಸ್‌ಗೆ ಮೇಯರ್‌ ಸ್ಥಾನ


Team Udayavani, Nov 17, 2018, 12:07 PM IST

m1-5varshada.jpg

ಮೈಸೂರು: ದೋಸ್ತಿ ಪಕ್ಷಗಳ ನಡುವೆ ತೀವ್ರ ಪೈಪೋಟಿಗೆ ಕಾರಣವಾಗಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್‌ ಸ್ಥಾನ ಕಡೆಗೂ “ಕೈ’ ವಶವಾಗಿದ್ದು, ಇದರೊಂದಿಗೆ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಯೊಂದಿಗೆ ಮೇಯರ್‌ ಸ್ಥಾನಕ್ಕೇರಲು ಕಾಂಗ್ರೆಸ್‌ ಸಜ್ಜಾಗಿದೆ. 

ಈ ಬಾರಿಯ ನಗರ ಪಾಲಿಕೆ ಮೇಯರ್‌ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪ ಮೇಯರ್‌ ಸ್ಥಾನ ಬಿಸಿಎಗೆ ಮೀಸಲಾಗಿದೆ. ಹೀಗಾಗಿ ಎರಡು ಪಕ್ಷಗಳೂ ಮೇಯರ್‌ ಸ್ಥಾನ ಪಡೆಯಲು ತಂತ್ರ-ಪ್ರತಿತಂತ್ರ ರೂಪಿಸಿದ್ದವು, ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವ ಉಭಯ ಪಕ್ಷಗಳು ಪಾಲಿಕೆ ಅಧಿಕಾರ ಹಿಡಿಯಲು ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿವೆ.

ಆದರೆ ಮೇಯರ್‌ ಪಟ್ಟಕ್ಕಾಗಿ ಎರಡೂ ಪಕ್ಷಗಳಲ್ಲೂ ಪೈಪೋಟಿ ಜೋರಾಗಿತ್ತು. ಅಂತಿಮವಾಗಿ ಮೈಸೂರು ಮಹಾನಗರ ಪಾಲಿಕೆ ಮೊದಲ ಅವಧಿಯನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲಾಗಿದ್ದು, ಇದರೊಂದಿಗೆ 5 ವರ್ಷಗಳ ನಂತರ ಕಾಂಗ್ರೆಸ್‌ ಮೇಯರ್‌ ಸ್ಥಾನ ಅಲಂಕರಿಸಲಿದೆ. 

ಮಾತುಕತೆ ಯಶಸ್ವಿ: ಪಾಲಿಕೆ ಚುನಾವಣೆ ಮುಗಿದು, ಮೀಸಲಾತಿ ಘೋಷಣೆಯಾದ ದಿನದಿಂದಲೂ ಮೇಯರ್‌ ಸ್ಥಾನಕ್ಕಾಗಿ ಎರಡು ಪಕ್ಷದಲ್ಲಿ ಭಾರೀ ಪೈಪೋಟಿ ಏರ್ಪಟ್ಟಿತ್ತು. ಇದಕ್ಕಾಗಿ ಉಭಯ ಪಕ್ಷಗಳ ಮುಖಂಡರು ಪಕ್ಷದ ಪಾಲಿಕೆ ಸದಸ್ಯರೊಂದಿಗೆ ನಿರಂತರ ಸಭೆಗಳನ್ನು ನಡೆಸುವ ಮೂಲಕ ಮೇಯರ್‌ ಪಟ್ಟವನ್ನು ಗಿಟ್ಟಿಸಲು ತಂತ್ರಗಾರಿಕೆ ರೂಪಿಸಿದ್ದರು.

ಈ ನಡುವೆ ಮೇಯರ್‌ ಸ್ಥಾನದ ಹಂಚಿಕೆ ಕುರಿತು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರೊಂದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು, ಸಿದ್ದರಾಮಯ್ಯ ಅವರ ಮನವಿಯಂತೆ ಮೇಯರ್‌ ಸ್ಥಾನ ಬಿಟ್ಟುಕೊಡಲು ಜೆಡಿಎಸ್‌ ವರಿಷ್ಠರು ಒಪ್ಪಿಗೆ ನೀಡಿದರು. 

ಸದಸ್ಯರ ಬಲಾಬಲ: ಈ ಬಾರಿ ಪಾಲಿಕೆಯಲ್ಲಿ ಬಿಜೆಪಿ-22, ಕಾಂಗ್ರೆಸ್‌-19, ಜೆಡಿಎಸ್‌-18, ಬಿಎಸ್ಪಿ-1 ಹಾಗೂ 5 ಪಕ್ಷೇತರ ಸದಸ್ಯರಿದ್ದಾರೆ. ಇದರಲ್ಲಿ 18 ಸ್ಥಾನವನ್ನು ಪಡೆದಿರುವ ಜೆಡಿಎಸ್‌ ಮಿತ್ರ ಪಕ್ಷ ಬಿಸ್ಪಿ ಜತೆ ಸೇರಿ 19 ಸ್ಥಾನಗಳನ್ನು ಹೊಂದಿದೆ. ಜತೆಗೆ ಓರ್ವ ಶಾಸಕ ಹಾಗೂ ಮೂವರು ವಿಧಾನಪರಿಷತ್‌ ಸದಸ್ಯರ ಬೆಂಬಲದೊಂದಿಗೆ 23 ಸ್ಥಾನಗಳನ್ನು ಪಡೆದಿದೆ.

ಇನ್ನೂ 19 ಸ್ಥಾನವನ್ನು ಗಳಿಸಿರುವ ಕಾಂಗ್ರೆಸ್‌ ಮೂವರು ಪಕ್ಷೇತರರು ಓರ್ವ ವಿಧಾನಪರಿಷತ್‌ ಸದಸ್ಯ ಹಾಗೂ ಓರ್ವ ಶಾಶಕರ ನೆರವಿನಿಂದ 24 ಚುನಾಯಿತ ಸದಸ್ಯರ ಬೆಂಬಲ ಹೊಂದಿದೆ. ಆದರೆ ಪಾಲಿಕೆಯಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ 22 ಸದಸ್ಯರ ಜತೆಗೆ ಇಬ್ಬರು ಶಾಸಕರು,

ಓರ್ವ ಸಂಸದರ ಬೆಂಬಲದಿಂದ 25 ಸ್ಥಾನ ಹೊಂದಿದೆ. ನಗರ ಪಾಲಿಕೆ ಸದಸ್ಯರು ಹಾಗೂ ಚುನಾಯಿತ ಸದಸ್ಯರು ಸೇರಿ 74 ಮಂದಿ ಮತದಾನದ ಅರ್ಹತೆ ಪಡೆದಿದ್ದು, ಬಹುಮತಕ್ಕೆ 38 ಸದಸ್ಯರ ಬೆಂಬಲ ಅಗತ್ಯವಿದೆ. ಹೀಗಾಗಿ ಮೈತ್ರಿ ಪಕ್ಷಗಳಿಂದ 47 ಸದಸ್ಯರ ಬಲ ಆಗಲಿದೆ.

ಸಾ.ರಾ-ತನ್ವೀರ್‌ ಭೇಟಿ: ಪಾಲಿಕೆ ಮೇಯರ್‌ ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಸಾ.ರಾ. ಮಹೇಶ್‌ ಹಾಗೂ ಕಾಂಗ್ರೆಸ್‌ ಶಾಸಕ ತನ್ವೀರ್‌ ಸೇಠ್ ಪರಸ್ಪರ ಭೇಟಿಯಾಗಿದ್ದರು. ಶುಕ್ರವಾರ ಬೆಳಗ್ಗೆ ಸಚಿವ ಸಾ.ರಾ. ಮಹೇಶ್‌ ಕಚೇರಿಗೆ ಆಗಮಿಸಿದ ಶಾಸಕ ತನ್ವೀರ್‌ ಸೇಠ್, ಮೇಯರ್‌ ಸ್ಥಾನದ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು.

ಈ ವೇಳೆ ಮೊದಲ ಅವಧಿಯಲ್ಲಿ ಮೇಯರ್‌ ಸ್ಥಾನ ಪಡೆದವರಿಗೆ ಎರಡು ವರ್ಷ ಅಧಿಕಾರ ಹಾಗೂ 2ನೇ ಅವಧಿಗೆ ಮೇಯರ್‌ ಸ್ಥಾನ ಪಡೆದವರಿಗೆ ಮೂರು ವರ್ಷ ಅಧಿಕಾರ ಸಿಗಲಿದ್ದು, ಮುಡಾ ಅಧ್ಯಕ್ಷ ಸ್ಥಾನದ ಹಂಚಿಕೆಯಲ್ಲೂ ಇದೇ ನಿಯಮ ಅನುಸರಿಸುವ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದರು. 

ರೆಸಾರ್ಟ್‌ ರಾಜಕಾರಣ: ಪಾಲಿಕೆ ಮೇಯರ್‌ ಮತ್ತು ಉಪಮೇಯರ್‌ ಚುನಾವಣೆ ಹಿನ್ನೆಲೆಯಲ್ಲಿ ತಮ್ಮಪಕ್ಷದ ಸದಸ್ಯರನ್ನ ರಕ್ಷಿಸಿಕೊಳ್ಳಲು ಜೆಡಿಎಸ್‌ ತನ್ನ ಸದಸ್ಯರನ್ನು  ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಇರಿಸಿದೆ. ಜೆಡಿಎಸ್‌ನ ನಗರಾಧ್ಯಕ್ಷ ಕೆ.ಟಿ. ಚೆಲುವೇಗೌಡ ನೇತೃತ್ವದಲ್ಲಿ ಜೆಡಿಎಸ್‌ನ 18 ನಗರ ಪಾಲಿಕೆ ಸದಸ್ಯರು ರೆಸಾರ್ಟ್‌ನತ್ತ ತೆರಳಿದ್ದಾರೆ. 

ಕಾಂಗ್ರೆಸ್‌ಗೆ ಬೆಂಬಲ: ಪಾಲಿಕೆ ಮೇಯರ್‌ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷೇತರ ನಗರಪಾಲಿಕೆ ಸದಸ್ಯ ಕೆ.ವಿ.ಶ್ರೀಧರ್‌ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಕೆ.ವಿ.ಶ್ರೀಧರ್‌, ರಾಮಕೃಷ್ಣನಗರದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಕಾಣಿಸಿಕೊಂಡ ಅವರು, ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ “ಕೈ’ಗೆ ಬೆಂಬಲ ನೀಡುವುದಾಗಿ ಹೇಳಿದರು.

ಕೆಪಿಸಿಸಿ ಅಧ್ಯಕ್ಷರ ಸಭೆ: ನಗರ ಪಾಲಿಕೆ ಮೇಯರ್‌ ಸ್ಥಾನ ಕಾಂಗ್ರೆಸ್‌ ಪಾಲಾಗುವುದು ಬಹುತೇಕ ಖಚಿತವಾಗಿದೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡುರಾವ್‌ ಮತ್ತು ಸಚಿವ ಕೃಷ್ಣ ಭೈರೇಗೌಡ ಅವರು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಅವರೊಂದಿಗೆ ಮಾತುಕತೆ ನಡೆಸಿದರು.

ಜತೆಗೆ ನಗರದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ರಾತ್ರಿ ಸಭೆ ನಡೆಸಿದ ಕಾಂಗ್ರೆಸ್‌ ವರಿಷ್ಠರು, ಪಕ್ಷದಲ್ಲಿನ ಮೇಯರ್‌ ಆಕಾಂಕ್ಷಿಗಳ ಆಯ್ಕೆ ಕುರಿತು ಚರ್ಚೆ ನಡೆಸಿದರು. ಕಾಂಗ್ರೆಸ್‌ನಿಂದ ಮಾಜಿ ಉಪ ಮೇಯರ್‌ ಶಾಂತಕುಮಾರಿ ಹಾಗೂ ಶೋಭಾ ಸುನೀಲ್‌ ಮೇಯರ್‌ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. 

ಕಾದು ನೋಡುವ ತಂತ್ರ: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯೊಂದಿಗೆ ಪಾಲಿಕೆ ಅಧಿಕಾರ ಹಿಡಿಯಲು ಸಜ್ಜಾಗಿರುವ ಹಿನ್ನೆಲೆಯಲ್ಲಿ ಪಾಲಿಕೆಯಲ್ಲಿ 22 ಸದಸ್ಯ ಬಲದೊಂದಿಗೆ ದೊಡ್ಡ ಪಕ್ಷವಾಗಿರುವ ಬಿಜೆಪಿ ಕಾದು ನೋಡುವ ತಂತ್ರಕ್ಕೆ ಮುಂದಾಗಿದೆ. ಮೇಯರ್‌-ಉಪ ಮೇಯರ್‌ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಬಿಜೆಪಿ ಕೋರ್‌ ಕಮಿಟಿ ಸಭೆ ನಡೆಸಲಿದ್ದು, ಮೇಯರ್‌ ಹಾಗೂ ಉಪ ಮೇಯರ್‌ ಆಯ್ಕೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. 

ಇಂದು ಚುನಾವಣೆ: ಮೈಸೂರು ಮಹಾನಗರ ಪಾಲಿಕೆಯ ಮೇಯರ್‌-ಉಪ ಮೇಯರ್‌ ಹಾಗೂ ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಇಂದು(ನ.17) ಬೆಳಗ್ಗೆ 11.30ಕ್ಕೆ ಚುನಾವಣೆ ನಡೆಯಲಿದೆ. ನಗರ ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್‌ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತ ನೇತೃತ್ವದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಬೆಳಗ್ಗೆ 7 ರಿಂದ 9.30 ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ನಂತರ 11.30ಕ್ಕೆ ಚುನಾವಣಾ ವಿಶೇಷ ಸಭೆ ಆರಂಭವಾಗಲಿದೆ. 

ಟಾಪ್ ನ್ಯೂಸ್

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

rape

Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.