ಅತ್ಯಾಚಾರ ಆರೋಪಿಯ ಸೆರೆ
Team Udayavani, Nov 17, 2018, 12:43 PM IST
ಬೆಂಗಳೂರು: ಒಂಟಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. ಕುರುಬರಹಳ್ಳಿ ನಿವಾಸಿ ದೇವರಾಜ್ (21) ಬಂಧಿತ. ಆರೋಪಿ ನ.8ರಂದು ಉತ್ತರ ಭಾರತ ಮೂಲದ 33 ವರ್ಷದ ಸಂತ್ರಸ್ತೆ ಮೇಲೆ ದೌರ್ಜನ್ಯವೆಸಗಿದ್ದ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಸಂತ್ರಸ್ತೆ ಬಸವೇಶ್ವರನಗರದ ಸ್ನೇಹಿತರ ಜತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಈಕೆಯ ಸ್ನೇಹಿತರು ಊರಿಗೆ ಹೋಗಿದ್ದರು. ಈ ವೇಳೆ ಆರೋಪಿ ಸಂತ್ರಸ್ತೆಯ ಮನೆ ಬಳಿಯೇ ಎರಡು ದಿನಗಳಿಂದ ಓಡಾಡುತ್ತಿದ್ದ.
ನ.8ರ ರಾತ್ರಿ 10 ಗಂಟೆ ಸುಮಾರಿಗೆ ಈಕೆ ಮನೆಯ ಕಾಲಿಂಗ್ ಬೆಲ್ ಒತ್ತಿದ್ದಾನೆ. ಯಾರು ಎಂದು ಬಾಗಿಲು ತೆರೆಯುತ್ತಿದ್ದಂತೆ ಬಲವಂತವಾಗಿ ಆಕೆಯನ್ನು ಒಳಗೆ ತಳ್ಳಿ ಕೊಠಡಿಯ ಬಾಗಿಲು ಹಾಕಿಕೊಂಡಿದ್ದಾನೆ. ಇದನ್ನು ವಿರೋಧಿಸಿ ಆಕೆ ಜೋರಾಗಿ ಕೂಗಿಕೊಂಡಾಗ ಆಕೆಯ ಬಾಯಿ ಮುಚ್ಚಿ ಎಳೆದಾಡಿದ್ದಾನೆ.
ಗಾಬರಿಗೊಂಡ ಆಕೆ ಆತನ ಕೈ ಕಚ್ಚಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಇದರಿಂದ ಕೋಪಗೊಂಡ ಆರೋಪಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ ಎಂದು ಪೊಲೀಸರು ಹೇಳಿದರು. ಆರೋಪಿ ಕೃತ್ಯವೆಸಗಿ ಸಂತ್ರಸ್ತೆಯ ಮೊಬೈಲ್ ಕಳವು ಮಾಡಿ ಪರಾರಿಯಾಗಿದ್ದ. ಈ ಹಿನ್ನೆಲೆಯಲ್ಲಿ ಆಕೆಯ ಮೊಬೈಲ್ ನೆಟ್‌ವರ್ಕ್ ಪರಿಶೀಲಿಸಿದಾಗ ಆರೋಪಿ ಸಿಕ್ಕಿ ಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!
BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್
Podcast: ಗಾಂಧೀಜಿ ಎಂದೂ ಟೋಪಿ ಧರಿಸುತ್ತಿರಲಿಲ್ಲ, ಆದರೆ ದೇಶದಲ್ಲಿ “ಗಾಂಧಿ ಟೋಪಿ’ ಜನಜನಿತ!
ಅಂದು ಪ್ರತಾಪ್ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?
New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.