ಫೋಟೋ ಶೂಟ್ ಪ್ರಕರಣ: ವರದಿ ಕೇಳಿದ ನ್ಯಾಯಾಲಯ
Team Udayavani, Nov 17, 2018, 12:43 PM IST
ಬೆಂಗಳೂರು: ಚಿತ್ರೀಕರಣಕ್ಕೆ ಅವಕಾಶವಿಲ್ಲದಿದ್ದರೂ ಭದ್ರತಾ ನಿಯಮಗಳನ್ನು ಉಲ್ಲಂ ಸಿ ಹೈಕೋರ್ಟ್ ಆವರಣದಲ್ಲಿ ನಟ ರಾಘವೇಂದ್ರ ರಾಜ್‌ಕುಮಾರ್ ಅವರ ಪುತ್ರ ವಿನಯ್‌ರಾಜ್ ಅವರ ಸಿನಿಮಾ ಫೋಟೋ ಶೂಟ್‌ಗೆ ಅವಕಾಶ ನೀಡಿದ ಸಂಬಂಧ ನೀಡಿರುವ ದೂರಿನ ಕುರಿತು ಕೈಗೊಂಡಿರುವ ಕ್ರಮಗಳ ಸದ್ಯದ ವಸ್ತುಸ್ಥಿತಿಯ ವಿವರಗಳನ್ನು ಸಲ್ಲಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶಿಸಿದೆ.
ಈ ಕುರಿತಂತೆ ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರಿದ್ದ ವಿಭಾಗೀಯ ನ್ಯಾಯಪೀಠ, ಅರ್ಜಿದಾರರ ಮೇಲೆ ಯಾವೆಲ್ಲಾ ಕ್ರಮಗಳನ್ನು ಕೈಗೊಂಡಿದ್ದೀರಿ ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಡಿ.12ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್. ಮೋಹನ್ “ಹೈಕೋರ್ಟ್‌ನಲ್ಲಿ ಚಿತ್ರೀಕರಣ ಮಾಡಿದ ದೃಶ್ಯಾವಳಿಗಳನ್ನು ಸಿನಿಮಾದಲ್ಲಿ ಬಳಸುವುದಿಲ್ಲ ಎಂದು ಚಿತ್ರ ತಂಡ ಹೇಳಿತ್ತು. ಆದರೆ, ಇತ್ತೀಚಿಗೆ ಬಿಡುಗಡೆ ಮಾಡಿರುವ ಚಿತ್ರದ ಟ್ರೇಲರ್‌ನಲ್ಲಿ ಹೈಕೋರ್ಟ್ ಆವರಣದಲ್ಲಿ ನಡೆದ ಫೋಟೋ ಶೂಟ್ ದೃಶ್ಯಗಳನ್ನು ತೋರಿಸಲಾಗುತ್ತಿದೆ.
ಹಾಗಾಗಿ ಚಿತ್ರತಂಡದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಪೀಠಕ್ಕೆ ಕೋರಿದರು. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ದೂರಿಗೆ ಪೊಲೀಸರು ನೋಟಿಸ್ ಕೊಟ್ಟು ಸುಮ್ಮನಾಗಿದ್ದಾರೆ. ಎಫ್ಐಆರ್ ದಾಖಲು ಮಾಡಿಲ್ಲ, ವಿಚಾರಣೆಯನ್ನೂ ನಡೆಸಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.