ಮೇಳಕ್ಕೆ ಎರಡೂವರೆ ಲಕ್ಷ ಜನರ ಭೇಟಿ


Team Udayavani, Nov 17, 2018, 12:43 PM IST

melakke.jpg

ಬೆಂಗಳೂರು: ಎರಡನೇ ದಿನಕ್ಕೆ ಕಾಲಿಟ್ಟ ಬೆಂಗಳೂರು ಕೃಷಿ ಮೇಳಕ್ಕೆ ಒಟ್ಟಾರೆ ಮೂರೂವರೆ ಲಕ್ಷ ಜನ ಭೇಟಿ ನೀಡಿದ್ದು, ಎರಡೂವರೆ ಕೋಟಿ ರೂ. ವಹಿವಾಟು ನಡೆದಿದೆ. ಮೊದಲ ದಿನ ಮೇಳಕ್ಕೆ ಭೇಟಿ ನೀಡಿದವರ ಸಂಖ್ಯೆ ಕೇವಲ 1.10 ಲಕ್ಷ ಇತ್ತು. ಆದರೆ, ಶುಕ್ರವಾರ ಈ ಸಂಖ್ಯೆ ದುಪ್ಪಟ್ಟು ಅಂದರೆ 2.5 ಲಕ್ಷ ರೈತರು ಹರಿದುಬಂದರು.

ಅದೇ ರೀತಿ, ವಹಿವಾಟು ಕೂಡ ಹೆಚ್ಚಳವಾಗಿದ್ದು, ಗುರುವಾರ 97 ಲಕ್ಷ ಇದ್ದದ್ದು ಎರಡನೇ ದಿನದ ಸಂಜೆವರೆಗೆ 1.6 ಕೋಟಿ ರೂ. ತಲುಪಿತ್ತು. ಮುಂದಿನ ಎರಡು ದಿನಗಳು ಇದು ಮೂರುಪಟ್ಟು ಆಗುವ ನಿರೀಕ್ಷೆ ಇದೆ ಎಂದು ಕೃಷಿ ವಿಶ್ವವಿದ್ಯಾಲಯದ ಮೂಲಗಳು ತಿಳಿಸಿವೆ. 

ನಿರೀಕ್ಷೆಗೂ ಮೀರಿದ ಸ್ಪಂದನೆಯು ಕೃಷಿಯ ಬಗ್ಗೆ ಜನರಲ್ಲಿ ಇರುವ ಆಸಕ್ತಿಗೆ ಸಾಕ್ಷಿಯಾಯಿತು. ನಿತ್ಯ ಬೆಳಿಗ್ಗೆಯಿಂದ ಸಂಜೆವರೆಗೆ ಮೂಲೆ-ಮೂಲೆಗಳಿಂದ ಲಕ್ಷಾಂತರ ರೈತರು ಮೇಳಕ್ಕೆ ಬರುತ್ತಿದ್ದಾರೆ. ನಗರದ ನಿವಾಸಿಗಳು ಕೂಡ ಇದರಲ್ಲಿ ಹೆಚ್ಚಿನ ಸಂಖ್ಯೆಲ್ಲಿದ್ದರು. ಶನಿವಾರ ಐಟಿ-ಬಿಟಿ ಕಂಪನಿಗಳಿಗೆ ರಜೆ ಇರುತ್ತದೆ.

ಅಲ್ಲದೆ, ಸರ್ಕಾರಿ ಮತ್ತು ಖಾಸಗಿ ಸೇರಿದಂತೆ ನಗರದ ಉತ್ತರ ಹಾಗೂ ದಕ್ಷಿಣ ಭಾಗದ ಎಲ್ಲ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮೇಳಕ್ಕೆ ಆಗಮಿಸಲಿದ್ದಾರೆ. ಕಳೆದ ವರ್ಷದ ಮೇಳದಲ್ಲಿ ಶನಿವಾರ ನಾಲ್ಕು ಲಕ್ಷ ಜನ ಭೇಟಿ ನೀಡಿದ್ದರು. ಈ ಬಾರಿ ಕೂಡ ಇಷ್ಟೇ ಜನರನ್ನು ನಿರೀಕ್ಷಿಸಲಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಕೆ.ಶಿವರಾಂ ತಿಳಿಸಿದರು. 

ಭೇಟಿ ನೀಡಿದವರಲ್ಲಿ ಬಹುತೇಕರು ಯಂತ್ರೋಪಕರಣಗಳು, ಸ್ವ-ಸಹಾಯ ಸಂಘಗಳಲ್ಲಿನ ಉತ್ಪನ್ನಗಳ ವೀಕ್ಷಣೆ ಮತ್ತು ಖರೀದಿಗೆ ಮುಗಿಬಿದ್ದದ್ದು ಕಂಡುಬಂತು. ಅಷ್ಟೇ ಅಲ್ಲ, ಸಾವಿರಾರು ಜನ ಯಂತ್ರೋಪಕರಣಗಳ ಖರೀದಿಸಲು ಮುಂಗಡ ಹಣ ಪಾವತಿಸಿ, ವಿಳಾಸ ದಾಖಲಿಸಿದ್ದಾರೆ. ಸ್ಟಾರ್ಟ್‌ಅಪ್‌ಗ್ಳು, ಲೇಸರ್‌ ನೀರಾವರಿ, ನಗರ ಕೃಷಿ ಯಂತ್ರೋಪಕರಣಗಳು ಹೆಚ್ಚು ಜನರನ್ನು ಆಕರ್ಷಿಸಿದವು. 

ಟಾಪ್ ನ್ಯೂಸ್

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

police

Kumbala: ಸಂತ್ರಸ್ತೆಯ ತಾಯಿ ಆತ್ಮಹ*ತ್ಯೆ: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.