ಇಬ್ಬರು ಮಹಿಳೆಯರು ಸೇರಿ ಮೂವರ ಆತ್ಮಹತ್ಯೆ
Team Udayavani, Nov 18, 2018, 12:25 PM IST
ಬೆಂಗಳೂರು: ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಅನಾರೋಗ್ಯ ಹಿನ್ನೆಲೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಠಾಣಾ ವ್ಯಾಪ್ತಿಯ ಪಟ್ಟೆಗಾರ್ ಪಾಳ್ಯದಲ್ಲಿ ನಡೆದಿದೆ.
ನಿತ್ಯಾ(23) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ನಿತ್ಯಾ 5 ತಿಂಗಳ ಹಿಂದಷ್ಟೇ ವಿವಾಹವಾಗಿದ್ದು, ಕೆಲ ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಪ್ರಯೋಜನವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ವಿಜಯನಗರದ ಪಟ್ಟೆಗಾರ್ ಪಾಳ್ಯದಲ್ಲಿರುವ ತಮ್ಮ ತವರು ಮನೆಗೆ ಬಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.
ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ದೊಡ್ಡಬಾಣಸವಾಡಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ರತ್ನರಾಜು(33) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಕೆಲ ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡರು ಕಡಿಮೆ ಆಗಿರಲಿಲ್ಲ.
ಈ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು. ಪ್ರಕರಣ ರಾಮಮೂರ್ತಿನಗರ ಠಾಣೆಯಲ್ಲಿ ದಾಖಲಾಗಿದೆ. ಮತ್ತೂಂದು ಪ್ರಕರಣದಲ್ಲಿ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ರಾಜೇಶ್ವರಿ(35) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ಸಂಪಿಗೆಹಳ್ಳಿ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.