ಪುಣೆ ಬಂಟರ ಸಂಘದ ಪ್ರಾದೇಶಿಕ ಸಮಿತಿ: ಸಮ್ಮಾನ ಕಾರ್ಯಕ್ರಮಕ್ಕೆ ಚಾಲನೆ
Team Udayavani, Nov 18, 2018, 5:23 PM IST
ಪುಣೆ: ಪುಣೆ ಬಂಟರ ಸಂಘದ ಉತ್ತರ ಹಾಗೂ ದಕ್ಷಿಣ ಎರಡು ಪ್ರಾದೇಶಿಕ ಸಮಿತಿಗಳ ವತಿಯಿಂದ ನ. 17 ರಂದು ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಬಂಟರ ಭವನ ಲತಾ ಸುಧೀರ್ ಶೆಟ್ಟಿ ವೇದಿಕೆಯಲ್ಲಿ ಸಂಘದ ಮಹತ್ವಾಕಾಂಕ್ಷೆಯ ಬಂಟರ ಭವನವನ್ನು ತನ್ನ ನೇತೃತ್ವದಲ್ಲಿ ನಿರ್ಮಿಸಿ ಲೋಕಾರ್ಪಣೆಗೊಳಿಸಿದ ಪುಣೆಯ ಅದ್ವಿತೀಯ ಸಾಧಕ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಸಂತೋಷ್ ಶೆಟ್ಟಿಯವರನ್ನು ಸಮ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ದೀಪ ಪ್ರಜ್ವಲಿಸಿ ಚಾಲನೆ ನೀಡಲಾಯಿತು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ಯುವ ಶಾಸಕರಾದ ಹರೀಶ್ ಪೂಂಜಾ, ಮಂಗಳೂರು ಉತ್ತರದ ಶಾಸಕ ಡಾ| ಭರತ್ ಶೆಟ್ಟಿ ಹಾಗೂ ಮುಂಬಯಿ ಬಂಟರ ಸಂಘದ ಪೊವಾಯಿ ಎಸ್‌ಎಂ ಶೆಟ್ಟಿ ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಶೆಟ್ಟಿ, ಉಡುಪಿ ಪರಿಸರದಲ್ಲಿ ತನ್ನ ಅಪ್ರತಿಮ ಮಾನವೀಯ ಸೇವೆಯ ಮೂಲಕ ಆಪತಾºಂಧವನೆಂದೇ ಗುರುತಿಸಿಕೊಳ್ಳುವ ಶ್ರೇಷ್ಠ ಸಮಾಜಸೇವಕ ಸೂರಿ ಶೆಟ್ಟಿ ಕಾಪು, ಎಂಟಿ ಎಜುಕೇರ್ ಇದರ ಸಿಎಂಡಿ ಮಹೇಶ್ ಶೆಟ್ಟಿ ಉಪಸ್ಥಿತರಿದ್ದರು. ಪುಣೆ ಬಂಟರ ಸಂಘದ ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ದಿನೇಶ್ ಶೆಟ್ಟಿ ಕಳತ್ತೂರು, ಉಪಕಾರ್ಯಾಧ್ಯಕ್ಷ ಸತೀಶ್ ಶೆಟ್ಟಿ, ರೂಪೇಶ್ ಶೆಟ್ಟಿ, ಕಾರ್ಯದರ್ಶಿ ಗಣೇಶ್ ಪೂಂಜಾ, ಕೋಶಾಧಿಕಾರಿ ರಘು ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಂಪಾ ಎಸ್. ಶೆಟ್ಟಿ, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ವಸಂತ್ ಶೆಟ್ಟಿ ಬೈಲೂರು, ಉಪ ಕಾರ್ಯಾಧ್ಯಕ್ಷ ಸುಭಾಷ್ ಶೆಟ್ಟಿ, ರವಿ ಕೆ. ಶೆಟ್ಟಿ, ಕಾರ್ಯದರ್ಶಿ ಶೇಖರ್ ಸಿ. ಶೆಟ್ಟಿ, ಕೋಶಾಧಿಕಾರಿ ಜಗದೀಶ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಗೀತಾ ಬಿ. ಶೆಟ್ಟಿ ಉಪಸ್ಥಿತರಿದ್ದರು.
ಚಿತ್ರ-ವರದಿ: ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desiswara: ನ್ಯೂಯಾರ್ಕ್ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ
Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…
Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ
Kannada Alphanbets: “ಕ’ ಕಾರದಲ್ಲಿನ ವಿಶೇಷ: ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ
ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ
MUST WATCH
ಹೊಸ ಸೇರ್ಪಡೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.