ಅರಮನೆ ಅಂಗಳದಲ್ಲಿ ದಿ ರಾಯಲ್ ಕಿಡ್ಸ್ ಫೆಸ್ಟ್
Team Udayavani, Nov 19, 2018, 12:08 PM IST
ಮೈಸೂರು: ಪ್ರವಾಸಿಗರಿಂದ ತುಂಬಿರುತ್ತಿದ್ದ ಮೈಸೂರು ಅರಮನೆಯಲ್ಲಿ ಭಾನುವಾರ ಮಕ್ಕಳದೇ ಕಲರವ. ಮಕ್ಕಳ ದಿನಾಚರಣೆ ಅಂಗವಾಗಿ ಭೇರುಂಡ ಸಂಸ್ಥೆಯು ಅರಮನೆ ಅಂಗಳದಲ್ಲಿ ಏರ್ಪಡಿಸಿದ್ದ ರಾಯಲ್ ಕಿಡ್ಸ್ ಫೆಸ್ಟ್‌ನಲ್ಲಿ ಭಾಗವಹಿಸಿದ ಮಕ್ಕಳು, ಹಾಳೆಯ ಮೇಲೆ ಅರಮನೆ, ಆನೆಯ ಮೇಲೆ ಅಂಬಾರಿ, ರಾಜ-ಮಹಾರಾಜರ ಚಿತ್ರಗಳನ್ನು ಬಿಡಿಸಿ ನೋಡುಗರ ಗಮನ ಸೆಳೆದರು.
ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಚಿತ್ರಪಟವೊಂದರ ಟೋಪಿಗೆ ಬಣ್ಣ ಹಚ್ಚುವ ಮೂಲಕ ಮಕ್ಕಳ ಹಬ್ಬಕ್ಕೆ ಚಾಲನೆ ನೀಡಿ, ಮೈಸೂರಿನ ಪರಂಪರೆಯನ್ನು ಮಕ್ಕಳಿಗೆ ತಿಳಿಸುವ ನಿಟ್ಟಿನಲ್ಲಿ ಈ ರೀತಿಯ ಕಾರ್ಯಕ್ರಮಗಳು ಪೂರಕವಾಗಿವೆ. ಇಂದಿನ ಕಾರ್ಯಕ್ರಮಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಮಕ್ಕಳು ಆಗಮಿಸಿರುವುದು ಸಂತಸ ತಂದಿದೆ ಎಂದರು.
ಉದ್ಯಮಿ ಆರ್.ಗುರು ಮಾತನಾಡಿ, ಈ ರೀತಿಯ ಕಾರ್ಯಕ್ರಮಗಳ ಮೂಲಕ ಮಕ್ಕಳನ್ನು ಸಂತೋಷಗೊಳಿಸುವುದರ ಜೊತೆಗೆ ಅವರಿಗೆ ಪರಂಪರೆಯ ಕುರಿತ ಮಾಹಿತಿ ತಲುಪಿಸಬಹುದಾಗಿದೆ. ಮುಂಬರುವ ದಿನಗಳಲ್ಲಿ ಈ ರೀತಿಯ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಲಿ ಎಂದು ಆಶಿಸಿದರು.
ದಿ ರಾಯಲ್ ಕಿಡ್ಸ್ ಫೆಸ್ಟ್ ಸ್ಪರ್ಧೆಯಲ್ಲಿ ನಗರದ ವಿವಿಧ ಶಾಲೆಗಳಿಂದ 100ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಚಿತ್ರ ಕಲಾವಿದ ಬಾದಲ್ ನಂಜುಂಡಸ್ವಾಮಿ, ಕಲಿಸು ಫೌಂಡೇಷನ್‌ನ ನಿಖೀಲೇಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.