![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 20, 2018, 2:55 AM IST
ಬೆಳ್ತಂಗಡಿ: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತಕ್ಕೊಳಪಟ್ಟ ಮುಂಡಾಜೆ ಪ್ರೌಢಶಾಲೆಯಲ್ಲಿ ಕಾರ್ತಿಕ ದೀಪಾರಾಧನೆ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಅಧ್ಯಕ್ಷ ಶ್ರೀನಿವಾಸ ರಾವ್ ಕಲ್ಮಂಜ ಅವರು ಪ್ರಧಾನ ದೀಪ ಬೆಳಗಿಸಿ ಚಾಲನೆ ನೀಡಿದರು.
ಮುಖ್ಯಗುರು ಜಯಂತಿ ಮಾತಾಜಿ ಅವರು ದೇವರ ಮಂಟಪಕ್ಕೆ ದೀಪ ಬೆಳಗಿದರು. ವಿದ್ಯಾರ್ಥಿಗಳು ಶಾಲಾ ಆವರಣದ ದೀಪಗಳಿಗೆ ದೀಪದಿಂದ ದೀಪ ಹಚ್ಚಿ, ಪ್ರಾರ್ಥನೆಯನ್ನು ನೆರವೇರಿಸಿದರು. ಹಿರಿಯ ಶಿಕ್ಷಕ ಚಂದ್ರಶೇಖರ ಅವರು ದೀಪಾರಾಧನೆಯ ಮಹತ್ವದ ಕುರಿತು ಪ್ರಧಾನ ಭಾಷಣ ಮಾಡಿದರು. ವಿವೇಕಾನಂದ ವಿದ್ಯಾಸಂಸ್ಥೆಗಳ ಶಾಲಾ ಪರಿವೀಕ್ಷಣಾಧಿಕಾರಿ ರಘುರಾಜ್ ಉಬರಡ್ಕ ಅವರು ಶುಭಹಾರೈಸಿದರು. ಸಂಚಾಲಕ ಕೊರಗಪ್ಪ ನಾಯ್ಕ ಅವರು ಅಖಂಡ ಭಾರತದ ಕಲ್ಪನೆಯನ್ನು ಮುಂದಿಟ್ಟರು. ಪ್ರಸಾದ ನಿವೇದನೆಯ ಬಳಿಕ ಆರತಿಯನ್ನು ಬೆಳಗಲಾಯಿತು. ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಸಂಸ್ಥೆಯ ಆನಂದ ಜಿ. ನಿರೂಪಿಸಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.