ಪ್ರಾಮಾಣಿಕವಾಗಿ ಮತದಾನದ ಹಕ್ಕು ಚಲಾಯಿಸಿ

Team Udayavani, Nov 20, 2018, 12:05 PM IST

pramanika.jpg

ಬೆಂಗಳೂರು: ಮತದಾನದ ಸಮಯದಲ್ಲಿ ಒತ್ತಡ ಹಾಗೂ ಯಾವುದೇ ಆಮಿಷಗಳಿಗೆ ಒಳಗಾಗದೆ ಪ್ರಾಮಾಣಿಕವಾಗಿ ಹಾಗೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ನಿಮ್ಮ ಹಕ್ಕು ಚಲಾಯಿಸಿ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಡಾ. ಪಿ. ಸಂಜೀವ್‌ಕುಮಾರ್‌ ಹೇಳಿದ್ದಾರೆ.

ಯಲಹಂಕ ಬಳಿಯ ರೇವಾ ವಿಶ್ವವಿದ್ಯಾಲಯದಲ್ಲಿ ರೇವಾ ಎಲೆಕ್ಟೋಲ್‌ ಮತದಾನ ಸಾಕ್ಷರತಾ ಸಂಘಟನೆ ಆಯೋಜಿಸಿದ್ದ ಮತ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಸುಮಾರು 200 ಕೋಟಿ ರೂ. ಮೌಲ್ಯದ ಸೀರೆ, ಮದ್ಯ ಸೇರಿದಂತೆ ಇನ್ನಿತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆಧುನಿಕತೆಯತ್ತೆ ಮುಖ ಮಾಡಿರುವ ರಾಷ್ಟ್ರದಲ್ಲಿ ಇಂತಹ ಆಮಿಷಗಳಿಗೆ ಯಾರೂ ಒಳಗಾಗಬಾರದು ಎಂದು ಸಲಹೆ ನೀಡಿದರು.

ಸಾರ್ವಜನಿಕರು ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದನ್ನು ಪ್ರೋತ್ಸಾಹಿಸಲು ಹಾಗೂ ಪ್ರತಿ ಚುನಾವಣೆಯಲ್ಲಿ ನೈತಿಕವಾಗಿ ಮತದಾನ ಮಾಡಲು ಜಾಗೃತಿ ಮೂಡಿಸುವ ಕೆಲಸ ರೇವಾ ವಿವಿ ಮಾಡುತ್ತಿದೆ. ದೇಶದಲ್ಲಿ ಸುಮಾರು 75 ಸಾವಿರ ಕೋಟಿಗೂ ಅಧಿಕ ಮತದಾರರಿದ್ದು, ನಗರ ಪ್ರದೇಶದಲ್ಲಿ ಶೇ.50, ಗ್ರಾಮೀಣ ಪ್ರದೇಶದಲ್ಲಿ ಶೇ.85 ರಷ್ಟು ಮತದಾನದ ನಡೆಯುತ್ತಿದೆ.

ಇದರ ಪ್ರಮಾಣ ಹೆಚ್ಚಾಗಬೇಕಿದೆ. ಇಂದು ನಗರ ಪ್ರದೇಶದ ವಿದ್ಯಾವಂತರು ಮತದಾನ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ನಿವೃತ್ತ ಮುಖ್ಯ ಚುನಾವಣಾಧಿಕಾರಿ ಶ್ರೀನಿವಾಸಾಚಾರಿ, ರೇವಾ ವಿವಿ ಕುಲಪತಿ ಡಾ. ಎಸ್‌.ವೈ. ಕುಲಕರ್ಣಿ, ಕುಲಸಚಿವ ಡಾ. ಎಂ. ಧನಂಜಯ, ಬಿಬಿಎಂಪಿ ವಿಶೇಷ ಆಯುಕ್ತ ರವೀಂದ್ರ ಇತರರು ಭಾಗವಹಿಸಿದ್ದರು.

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ 800 ವಿದ್ಯಾರ್ಥಿಗಳಿಂದ ಪ್ರಾಯೋಗಿಕವಾಗಿ ಮತದಾನ ಜಾಗೃತಿ ಆರಂಭಿಸಲಾಗಿದೆ. ಇಲ್ಲಿ ಶೇ.85 ರಷ್ಟು ಮತದಾನವಾಗುತ್ತಿದೆ. ಈ ಅಭಿಯಾನದಿಂದ ಶೇ.100 ರಷ್ಟು ಮತದಾನ ಆಗುವಂತೆ ಮಾಡುವುದು ನಮ್ಮ ಗುರಿ. ಇದಕ್ಕಾಗಿ 15 ದಿನಗಳವರೆಗೆ ಕ್ಷೇತ್ರದ ಮನೆ ಮನೆಗೆ ತೆರಳಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಮತ ಪಟ್ಟಿಗೆ ಹೆಸರು ಸೇರಿಸುವಂತೆ ಮನವಿ ಮಾಡಲಾಗುವುದು.
-ಡಾ. ಪಿ. ಶ್ಯಾಮರಾಜು, ರೇವಾ ವಿವಿ ಕುಲಾಧಿಪತಿ

ಟಾಪ್ ನ್ಯೂಸ್

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

1-skk

Cricket; ವೇಗಿ ಸಿದ್ದಾರ್ಥ್ ಕೌಲ್‌ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.