ಎಚ್ಡಿಕೆ ಹೇಳಿಕೆ ಖಂಡಿಸಿ ಪ್ರತಿಭಟನೆ
Team Udayavani, Nov 20, 2018, 12:45 PM IST
ಮೈಸೂರು: ರೈತರು ಹಾಗೂ ರೈತ ಮಹಿಳೆ ಕುರಿತು ಲಘುವಾಗಿ ಮಾತನಾಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಯನ್ನು ಖಂಡಿಸಿ ಕನ್ನಡ ಕ್ರಾಂತಿ ದಳದ ಸದಸ್ಯರು ನಗರದ ಅಗ್ರಹಾರ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ರಾಜ್ಯದ ಜವಾಬ್ದಾರಿಯುತ ಸ್ಥಾನದಲ್ಲಿರುವ ಎಚ್.ಡಿ.ಕುಮಾರಸ್ವಾಮಿ ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ. ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಯಾವುದೇ ನೋವುಗಳಿಲ್ಲದಂತೆ ಮಾಡುವುದಾಗಿ ಹೇಳುವ ಕುಮಾರಸ್ವಾಮಿ ಅವರು ರೈತ ಮಹಿಳೆಯ ಬಗ್ಗೆ ಕೇವಲವಾಗಿ ಮಾತನಾಡಿರುವುದು ಸರಿಯಲ್ಲ.
ಹೀಗಾಗಿ ಕೂಡಲೇ ರೈತರ ಕ್ಷಮೆಯಾಚಿಸಬೇಕು. ಜತೆಗೆ ಅನ್ನದಾತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರ ಸತ್ಯಪ್ಪ, ಕನ್ನಡ ಕ್ರಾಂತಿದಳ ಯುವ ಘಟಕದ ಅಧ್ಯಕ್ಷ ತೇಜಸ್ವಿ ಕುಮಾರ್, ಶ್ರೀಧರ್, ಭಾನುಮೋಹನ್, ಮಾಲಿನಿ ಪಾಲಾಕ್ಷ ಪರಮೇಶ್ ಇನ್ನಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.