ಜಾಗತಿಕ ಶೇರು ದುರ್ಬಲ : ಮುಂಬಯಿ ಶೇರು 300 ಅಂಕ ಕುಸಿತ
Team Udayavani, Nov 20, 2018, 4:46 PM IST
ಮುಂಬಯಿ : ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿಕೆ ಮತ್ತು ರೂಪಾಯಿ ಬಲವರ್ಧನೆಯ ಹೊರತಾಗಿಯೂ, ಜಾಗತಿಕ ಮಾರುಕಟ್ಟೆಗಳಲ್ಲಿ ಕಂಡು ಬಂದ ವಿಪರೀತ ಶೇರು ಮಾರಾಟವನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು, ಮೂರು ದಿನಗಳ ನಿರಂತರ ಏರುಗತಿಯ ಬಳಿಕ, 300.37 ಅಂಕಗಳ ನಷ್ಟದೊಂದಿಗೆ 35,474.51 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 107.20 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,656.20 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.
ಇಂದಿನ ವಹಿವಾಟಿನಲ್ಲಿ ಎಸ್ ಬ್ಯಾಂಕ್ ಶೇರುಗಳು ಶೇ.6.10ರ ತೀವ್ರ ಕುಸಿತವನ್ನು ಕಂಡವು. ಭಾರೀ ನಷ್ಟ ಕಂಡ ಇತರ ಶೇರುಗಳೆಂದರೆ ಟಾಟಾ ಸ್ಟೀಲ್, ವೇದಾಂತ, ಎನ್ಟಿಪಿಸಿ, ಭಾರ್ತಿ ಏರ್ಟೆಲ್, ಎಸ್ಬಿಐ, ಎಚ್ ಡಿ ಎಫ್ ಸಿ, ಐಸಿಐಸಿಐ ಬ್ಯಾಂಕ್, ಮಾರುತಿ ಸುಜುಕಿ.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,741 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 864 ಕಂಪೆನಿಗಳು ಮುನ್ನಡೆ ಸಾಧಿಸಿದವು; 1,728 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 149 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.