ಬರೀ ಓದಿಗೆ ಸೀಮಿತರಾಗದಿರಿ
Team Udayavani, Nov 20, 2018, 4:54 PM IST
ದಾವಣಗೆರೆ: ಮಕ್ಕಳು ಕೇವಲ ಪುಸ್ತಕಕ್ಕೆ ಸೀಮಿತವಾಗದೇ ತಮ್ಮ ಆಸಕ್ತಿ ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಪ್ರತಿಭಾ ಕಾರಂಜಿಯಂತಹ ವೇದಿಕೆ ಸಹಕಾರಿ ಎಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ| ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಸೋಮವಾರ, ಪಿ.ಜೆ ಬಡಾವಣೆಯ ಬಾಪೂಜಿ ಪ್ರೌಢಶಾಲೆಯಲ್ಲಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸಮಾರಂಭ ಉದ್ಘಾಟಿಸಿ, ಮಾತನಾಡಿದ ಅವರು, ಎಲ್ಲಾ ಮಕ್ಕಳಲ್ಲೂ ವಿಭಿನ್ನವಾದ ಆಸಕ್ತಿ, ಕೌಶಲ್ಯ ಇರುತ್ತದೆ. ಅದನ್ನ ಹೊರ ಹೊಮ್ಮಿಸಲು ಸರ್ಕಾರ ಶಾಲಾ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ, ಸಾಹಿತ್ಯಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶ
ಮಾಡಿಕೊಡುತ್ತಿದೆ. ಮಕ್ಕಳು ಇಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ದೇಶದಲ್ಲಿ ಅವಿದ್ಯಾವಂತರೇ ಇರಬಾರದು ಎಂಬ ಸದುದ್ದೇಶದಿಂದ ಸರ್ಕಾರ ಶಾಲೆಗಳಿಗೆ ಉತ್ತೇಜನ ನೀಡುತ್ತಿದೆ. ಶಾಲೆಗಳಲ್ಲಿ ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ, ಸೈಕಲ್, ಬಿಸಿಯೂಟ ಮುಂತಾದ ಸೌಲಭ್ಯ ಕಲ್ಪಿಸಿ, ಮಕ್ಕಳ ಶಿಕ್ಷಣಕ್ಕೆ ವಿಶೇಷ ಒತ್ತು ನೀಡುತ್ತಿದೆ ಎಂದರು.
ಈ ಹಿಂದೆ ಸಂಗೀತ ಕಾರ್ಯಕ್ರಮ ಕೆಲವೇ ಜನರಿಗೆ ಮಾತ್ರ ಸಿಮೀತವಾಗಿತ್ತು. ಈಗ ಟಿ.ವಿ ಬಂದ ಮೇಲೆ ಎಲ್ಲಾ ಪ್ರತಿಭಾನ್ವಿತ ಪುಟ್ಟ ಮಕ್ಕಳು ಕೂಡ ರಿಯಾಲಿಟಿ ಶೋ ಹಾಗೂ ಇತರೆ ಸಂಗೀತ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನೃತ್ಯ, ಗೀತೆಗಳ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸುತ್ತಿದ್ದಾರೆ ಎಂದು ಹೇಳಿದರು.
ಅದೇ ರೀತಿ ಈ ಪ್ರತಿಭಾ ಕಾರಂಜಿಯಲ್ಲಿ ಕೋಲಾಟ, ಜಾನಪದ ಗೀತೆ, ಗಜಲ್, ಆಶುಭಾಷಣ, ಚರ್ಚಾ ಸ್ಪರ್ಧೆ ಒಳಗೊಂಡಂತೆ 75 ಬಗೆಯ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶವಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಜಿಲ್ಲಾಮಟ್ಟದಲ್ಲಿ ವಿಜೇತರಾಗುವ
ಮಕ್ಕಳು ರಾಜ್ಯಮಟ್ಟದಲ್ಲೂ ಉತ್ತಮ ಪ್ರದರ್ಶನದ ಮೂಲಕ ಜಿಲ್ಲೆಗೆ, ಶಾಲೆಗೆ ಕೀರ್ತಿ ತರಬೇಕು ಎಂದು ಆಶಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಸ್.ಬಸವಂತಪ್ಪ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ಮೊಬೈಲ್ ಬಳಕೆಯ ಮೂಲಕ ಮಕ್ಕಳು ಸಾಹಿತ್ಯ, ಕಲೆಗಳಿಂದ ವಿಮುಖರಾಗುತ್ತಿದ್ದಾರೆ. ವಿದ್ಯಾರ್ಥಿ ದಿಸೆಯಲ್ಲಿ ಸ್ಮಾರ್ಟ್ ಪೋನ್‌ಗಳ ಬಳಕೆಯ ಅವಶ್ಯಕತೆ ಆದರೂ ಏನಿದೆ?. ಮಕ್ಕಳು ಮೊಬೈಲ್‌ನಿಂದ ದೂರವಿದ್ದು, ತಮ್ಮ ಜೀವನದ ಗುರಿ ಸಾಧನೆಗೆ ಮುಂದಾಗಬೇಕು. ಈ ನಿಟ್ಟಿನಲ್ಲಿ ಪೋಷಕರು
ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ ಪ್ರಾಸ್ತಾವಿಕ ಮಾತನಾಡಿ, ಮಕ್ಕಳು ಕೇವಲ ಪಠ್ಯ ಚಟುವಟಿಕೆಗೆ ಸೀಮಿತರಾಗಬಾರದು. ಮಕ್ಕಳಲ್ಲಿ ಪಠ್ಯ ಮತ್ತು ಪಠ್ಯೇತರ ವಿಷಯಗಳಲ್ಲಿ ಆಸಕ್ತಿ ಇರುತ್ತದೆ. ಅದನ್ನು ಪ್ರೋತ್ಸಾಹಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಶೈಲಜಾ ಬಸವರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ನಿರಂಜನ್, ಉಪ ಸಮನ್ವಯಾಧಿಕಾರಿ ಬಿ. ಆರ್. ಬಸವರಾಪ್ಪ, ಪಾಲಿಕೆ ಸದಸ್ಯ ದಿನೇಶ್ ಕೆ.ಶೆಟ್ಟಿ, ಸಾಕಮ್ಮ ಗಂಗಾಧರಪ್ಪ, ಸಿದ್ದೇಶ್ ಇತರರು ಉಪಸ್ಥಿತರಿದ್ದರು.
ಪ್ರತಿಭಾ ಕಾರಂಜಿ ಹಾಗು ಕಲೋತ್ಸವ ಸ್ಪರ್ಧೆಯಲ್ಲಿ ದಾವಣಗೆರೆ ಜಿಲ್ಲೆಯ ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಂದ 1000 ಮಕ್ಕಳು, 300 ಶಿಕ್ಷಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.