ಶೌಚಾಲಯ ಬಳಕೆಗೆ ಪ್ರತಿ ಮನೆ ಮನೆಗೆ ಭೇಟಿ


Team Udayavani, Nov 21, 2018, 12:13 PM IST

m5-shoucha.jpg

ಹುಣಸೂರು: ಹಳ್ಳಿಗಳಲ್ಲಿ ಬಹುತೇಕ ಮನೆಗಳಲ್ಲಿ ಶೌಚಾಲಯ ನಿರ್ಮಿಸಿದ್ದರೂ ಅವುಗಳನ್ನು ಬಳಸುತ್ತಿಲ್ಲ. ಇದರಿಂದ ಯೋಜನೆಯ ಉದ್ದೇಶವೇ ವಿಫಲವಾಗುತ್ತಿದ್ದು, ಪ್ರತಿಯೊಬ್ಬರೂ ಆರೋಗ್ಯ ದೃಷ್ಟಿಯಿಂದ ಕಡ್ಡಾಯವಾಗಿ ಶೌಚಾಲಯ ಬಳಸಬೇಕು ಎಂದು ತಾಲೂಕು ಪಂಚಾಯ್ತಿ ಇಒ ಕೃಷ್ಣಕುಮಾರ್‌ ಮನವಿ ಮಾಡಿದರು.

ತಾಲೂಕಿನ ಕಟ್ಟೆಮಳಲವಾಡಿ ಪ್ರೌಢಶಾಲಾ ಆವರಣದಲ್ಲಿ ನಡೆದ ವಿಶ್ವ ಶೌಚಾಲಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಶೌಚಾಲಯ ನಿರ್ಮಾಣದಲ್ಲಿ ದೊಡ್ಡ ಕ್ರಾಂತಿಯೇ ನಡೆದಿದೆ. ಆದರೆ, ಬಹುತೇಕ ಹಳ್ಳಿಗಳಲ್ಲಿ ಬಳಕೆ ಮಾಡದಿರುವುದು ಕಂಡಬರುತ್ತಿದೆ. ಅದರಲ್ಲೂ ಸುಮಾರು 8 ಸಾವಿರ ಜನಸಂಖ್ಯೆ ಹೊಂದಿರುವ ಕಟ್ಟೆಮಳಲವಾಡಿ ಗ್ರಾಮದಲ್ಲಿ ಶೇ.30ರಷ್ಟು ಮಂದಿ ಬಯಲಿಗೆ ತೆರಳುತ್ತಿರುವ ಬಗ್ಗೆ ದೂರು ಬಂದಿದ್ದು,

ಇದರಿಂದಾಗಿ ಈ ಗ್ರಾಮವನ್ನು ಆಯ್ಕೆಮಾಡಿಕೊಳ್ಳಲಾಗಿದೆ. ಬಯಲು ಶೌಚಾಲಯದಿಂದ ಸಾಂಕ್ರಾಮಿಕ ರೋಗ ಹರಡುವ ಮತ್ತು ಪರಿಸರ ಹಾಳಾಗುವ ಹಿನ್ನೆಲೆಯಲ್ಲಿ ಅಂಗನವಾಡಿ-ಆಶಾ, ಆರೋಗ್ಯ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿಗಳು ಜಾಥಾ ಮತ್ತು ಮನೆ-ಮನೆ ಭೇಟಿ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಅರಿವು ಮೂಡಿಸಿ: ತಾಪಂ ಉಪಾಧ್ಯಕ್ಷ ಪ್ರೇಮಕುಮಾರ್‌ ಮಾತನಾಡಿ, ಸ್ವತ್ಛ ಭಾರತ ಅಭಿಯಾನ, ಶೌಚಾಲಯ ಬಳಕೆ ಪರಿಕಲ್ಪನೆ ಉತ್ತಮವಾಗಿದ್ದು, ಆದರೆ ಇನ್ನೂ ಕೂಡ ಹಳ್ಳಿಗಳಲ್ಲಿ ಶೌಚಾಲಯ ಬಳಕೆ ಮಾಡಿಕೊಳ್ಳುತ್ತಿಲ್ಲ. ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಹಾಗೂ ಇತರರಿಗೂ ಬಳಕೆ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಚಿಲ್ಕುಂದ ಸೇರಿದಂತೆ ಎಲ್ಲೆಡೆ ಇಂತಹ ಜಾಗೃತಿ ಕಾರ್ಯಕ್ರಮ ನಡೆಸಬೇಕೆಂದು ಕೋರಿದರು.

ಜಾಥಾಕ್ಕೆ ಚಾಲನೆ: ಕಾರ್ಯಕ್ರಮದ ನಂತರ ಶಾಲಾ ಆವರಣದಿಂದ ಹೊರಟ ಜಾಥಾಕ್ಕೆ ಕಟ್ಟೆಮಳಲವಾಡಿ ಹಾಗೂ ಬಿಳಿಗೆರೆ ಗ್ರಾಪಂ.ಅಧ್ಯಕ್ಷರು ಬ್ಯಾಂಡ್‌ ಬಾರಿಸುವ ಮೂಲಕ ಚಾಲನೆ ನೀಡಿದರು. ಜಾಥಾದಲ್ಲಿ ಶಾಲಾ ಮಕ್ಕಳು, ಆಶಾ, ಅಂಗನವಾಡಿ, ಆರೋಗ್ಯ ಕಾರ್ಯಕರ್ತೆಯರು ಫಲಕ ಹಿಡಿದು, ಘೋಷಣೆ ಕೂಗುತ್ತಾ ಗ್ರಾಮದ ಎಲ್ಲಾ ಬೀದಿಗಳಲ್ಲೂ ಜಾಗೃತಿ ಮೂಡಿದರು.

ಈ ವೇಳೆ ಗ್ರಾಪಂ ಸದಸ್ಯರಾದ ದೇವರಾಜ್‌, ಸುಂದರಮ್ಮ, ಪ್ರೌಢಶಾಲಾ ಮುಖ್ಯಶಿಕ್ಷಕ ನಾಗಯ್ಯ ಎಸ್‌ಡಿಎಂಸಿ ಅಧ್ಯಕ್ಷ ಅಶೋಕ್‌, ಅಂಗನವಾಡಿ ಮೇಲ್ವಿಚಾರಕಿ ಶೋಭಾ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪ್ರೌಢಶಾಲಾ ಮುಖ್ಯಶಿಕ್ಷಕ ನಾಗಯ್ಯ, ಶಿಕ್ಷಕರು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.