ಭಾರತೀಯ ಸಂಸ್ಕೃತಿ ವಿನಾಶ ಅಸಾಧ್ಯ: ಸ್ವಾಮೀಜಿ


Team Udayavani, Nov 21, 2018, 4:28 PM IST

21-november-19.gif

ಬ್ಯಾಡಗಿ: ಹರಪ್ಪ ಮತ್ತು ಮೆಹೆಂಜೋದಾರ ಸಂಸ್ಕೃತಿಯಲ್ಲಿ ಸಿಕ್ಕ ಶಿವನ ದೇವಾಲಯ ಹಾಗೂ ಶಿಲಾಮೂರ್ತಿಗಳು ನಮ್ಮ ಸಂಸ್ಕೃತಿ ಕುರಿತ ಇತಿಹಾಸ ಪರಿಚಯಿಸುತ್ತಿದೆ. ಅಂದೂ ಸಹ ಶಿವನನ್ನು ಆರಾಧಿ ಸುತ್ತಿದ್ದ ಕುರುಹುಗಳಿವೆ. ಹೀಗಾಗಿ ದೇವಾಲಯಗಳು ಸಂಸ್ಕೃತಿ ಮತ್ತು ಪರಂಪರೆಗಳಾಗಿವೆ ಎಂದು ನೆಗಳೂರು ಹಿರೇಮಠದ ಷ.ಬ್ರ. ಗುರುಶಾಂತೇಶ್ವರ ಶಿವಾಚಾರ್ಯಶ್ರೀ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕಿನ ಮಾಸಣಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಆಂಜನೇಯ ದೇವಸ್ಥಾನ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿ ಬಹಳ ವಿಭಿನ್ನ ಹಾಗೂ ವಿಶಿಷ್ಟವಾಗಿದ್ದು. ಇದನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ. ಎಲ್ಲ ಸಂಸ್ಕೃತಿಗಳಲ್ಲಿ ಬಹಳಷ್ಟು ವರ್ಷಗಳಿಂದ ಇಬ್ಭಾಗವಾಗಿವೆ. ಆದರೆ, ಭಾರತೀಯ ಸಂಸ್ಕೃತಿ ಮಾತ್ರ ಎಂದಿಗೂ ಬದಲಾಗಿಲ್ಲ. ಈ ಎಲ್ಲ ಕಾರಣಗಳಿಂದ ನಮ್ಮ ಪರಂಪರೆ ವಿಶ್ವದಲ್ಲಿಯೇ ಶ್ರೇಷ್ಠವಾಗಿದೆ ಎಂದರು.

ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಎಸ್‌.ಆರ್‌.ಪಾಟೀಲ ಮಾತನಾಡಿ, ನಾಸ್ತಿಕ ಮನೋಭಾವನೆ ಮತ್ತು ಧರ್ಮರಹಿತ ಬದುಕು ಎಂದೆಂದಿಗೂ ಅರ್ಥಹೀನ. ನಶ್ವರ ಮನೋಭಾವನೆಯುಳ್ಳ ವ್ಯಕ್ತಿಗಳಿಗೆ ಹುಟ್ಟು ಸಾವುಗಳಿಗೂ ಒಂದೇ ಅರ್ಥ ಎಂಬ ಮನೋಭಾವನೆ ತೋರುತ್ತಾರೆ. ಈ ಹಿನ್ನೆಲೆಯಲ್ಲಿ ದೇವಾಲಯಗಳನ್ನು ನಿರ್ಮಿಸುವ ಮೂಲಕ ಜನರಲ್ಲಿ ಆಸ್ತಿಕ ಮನೋಭಾವನೆ ಮೂಡಿಸುವ ಕಾರ್ಯವಾಗಬೇಕಾಗಿದೆ ಎಂದರು.

ಸನಾತನ ಸಂಸ್ಕೃತಿಯನ್ನು ಮರೆತು ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗುವ ಮೂಲಕ ಭಾರತೀಯ ಸಂಸ್ಕೃತಿ ಮರೆಯುತ್ತಿರುವ ಯುವಕರು ಕತ್ತಲೆ ಜಗತ್ತಿನ ಅಪರಾಧಗಳಿಗೆ ಸಾಕ್ಷಿಯಾಗುತ್ತಿದ್ದಾರೆ. ಆದರೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ನಿಂತಿರುವ ಸ್ಥಳೀಯ ಆಂಜನೇಯ ಸಂಸ್ಥೆಯ ಯುವಕರು, ಯುವ ಜನತೆಗೆ ಮಾದರಿಯಾಗಿದ್ದಾರೆ. ಇವರಂತೆ ನಮ್ಮ ಸನಾತನ ಸಂಸ್ಕೃತಿ, ಪರಂಪರೆ ಕಾಪಾಡಲು ಸಮಾಜದ ಪ್ರತಿಯೊಬ್ಬ ಯುವಕರು ಶ್ರಮಿಸಬೇಕಾಗಿದೆ ಎಂದರು.

ಶಂಕ್ರಪ್ಪ ಮಾತನವರ, ತಾಪಂ ಉಪಾಧ್ಯಕ್ಷೆ ಶಾಂತವ್ವ ದೇಸಾಯಿ, ಎಪಿಎಂಸಿ ಸದಸ್ಯರಾದ ಉಳಿವೆಪ್ಪ ಕುರುವತ್ತಿ, ವನಿತಾ ಗುತ್ತಲ, ಗ್ರಾಪಂ ಅಧ್ಯಕ್ಷೆ ಅಕ್ಕಮ್ಮ ಓಲೇಕಾರ, ಸದಸ್ಯರಾದ ಬಸಪ್ಪ ಬನ್ನಿಹಟ್ಟಿ, ಶಿವಪ್ಪ ಕುಮ್ಮೂರ, ಶಿವಮೂರ್ತೇಪ್ಪ ಬನ್ನಿಹಟ್ಟಿ, ನಿಂಗಪ್ಪ ಹೆಗ್ಗಣ್ಣನವರ, ಮಲ್ಲಪ್ಪ ದೇಸಾಯಿ, ಮಲಕಪ್ಪ ಮುಳಗುಂದ, ಚಂದ್ರಪ್ಪ ಬಿ.ಬಾರ್ಕಿ, ಮೃತ್ಯುಂಜಯಪ್ಪ ಮುಳಗುಂದ, ವಕೀಲರಾದ ಮಹದೇವಪ್ಪ ಬನ್ನಿಹಟ್ಟಿ, ಪ್ರಕಾಶ ಬನ್ನಿಹಟ್ಟಿ, ಬಸಪ್ಪ ವೀರನಗೌಡ್ರ, ಬಸವರಾಜ ಸಂಕಣ್ಣನವರ, ವೀರಯ್ಯ ಮಾನಿಹಳ್ಳಿಮಠ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.