ಡೊಂಬಿವಲಿ ಕರ್ನಾಟಕ ಸಂಘದ 51ನೇ ವಾರ್ಷಿಕ ಮಹಾಸಭೆ

Team Udayavani, Nov 21, 2018, 4:46 PM IST

2011mum03.jpg

ಡೊಂಬಿವಲಿ: ಐದು ದಶಕಗಳ ಹಿಂದೆ ನಮ್ಮ ಹಿರಿಯರು ನೆಟ್ಟ  ಡೊಂಬಿವಲಿ ಕರ್ನಾಟಕ ಸಂಘ ಎಂಬ ಪುಟ್ಟ ಸಸಿ ಇವತ್ತು ಶಿಕ್ಷಣ ಕ್ಷೇತ್ರದಲ್ಲಿ  ಜ್ಞಾನ ದಾಸೋಹದ ಮೂಲಕ ಮುಂಬಯಿ ಹಾಗೂ ಉಪನಗರಗಳಲ್ಲಿ ಗಮನ ಸೆಳೆದಿದ್ದರೂ, ಮುಂಬರುವ ದಿನಗಳಲ್ಲಿ ತಮ್ಮೆಲ್ಲರ ಸಹಾಯ, ಸಹಕಾರದಿಂದ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆಯುವಂತೆ ಮಾಡಬೇಕು. ಸಂಘಟ ನೆಯನ್ನು ಇನ್ನಷ್ಟು ಬಲಗೊಳಿಸಿ ತುಳು-ಕನ್ನಡಿಗರ ಆಶೋತ್ತರಗಳಿಗೆ ಸ್ಪಂದಿಸುವತ್ತ ದಿಟ್ಟ ಹೆಜ್ಜೆ ಇಡಬೇಕು ಎಂದು ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷ ಇಂದ್ರಾಳಿ ದಿವಾಕರ ಶೆಟ್ಟಿ ನುಡಿದರು.

ನ. 18 ರಂದು ಸಂಜೆ ಡೊಂಬಿವಲಿ ಪೂರ್ವದ ಕರ್ನಾಟಕ ಸಂಘ ಡೊಂಬಿವಲಿ ಸಂಚಾಲಕತ್ವದ ಮಂಜುನಾಥ ವಿದ್ಯಾಲಯದ ಸಭಾಗೃಹದಲ್ಲಿ ನಡೆದ ಸಂಘದ 51 ನೇ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಾಜದ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಯೋಚನೆ ಸಂಘದ್ದಾಗಿದ್ದು, ಕರ್ನಾಟಕ ಸಂಘ ಸಂಚಾ ಲಿತ ಮಂಜುನಾಥ ವಿದ್ಯಾಲಯ ಹಾಗೂ ಮಹಾವಿದ್ಯಾ ಲಯದ ಸಾಧನೆ ಅಭಿನಂದನೀ ಯವಾಗಿದೆ. ಕಳೆದ ವರ್ಷ ಸಂಘದ ಸುವರ್ಣ ಮಹೋತ್ಸವದಲ್ಲಿ 15 ಸರಣಿ ಕಾರ್ಯಕ್ರಮಗಳನ್ನು ಆಯೋಜಿಸುವ ನಿಟ್ಟಿನಲ್ಲಿ ಕಾರ್ಯಕಾರಿ ಸಮಿತಿಯ ಶ್ರಮ ಅಪಾರವಾಗಿದೆ. ಯಾವುದೇ ಸಂಸೆœಯ ಕಾರ್ಯಗಳು ನಿಂತ ನೀರಾಗದೆ, ಹರಿಯುವ ನದಿಯಾಗಬೇಕು. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯ ಕಾರ್ಯಕಾರಿ ಸಮಿತಿಯು ಶ್ರದ್ಧೆಯಿಂದ ಕಾರ್ಯನಿರ್ವಹಿಸಿ ಸಂಘದ ಹೆಸರನ್ನು ಮತ್ತಷ್ಟು ಬೆಳೆಯುವಂತೆ ಮಾಡಬೇಕು ಎಂದರು.

ಸಂಘದ ಕಾರ್ಯಾಧ್ಯಕ್ಷ ಸುಕುಮಾರ್‌ ಎನ್‌. ಶೆಟ್ಟಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಗುಣಮಟ್ಟದ ಶಿಕ್ಷಣದ ಮೂಲಕ ಚಿರಪರಿಚಿತವಾಗಿರುವ ನಮ್ಮ ಶಿಕ್ಷಣ ಸಂಸ್ಥೆಗಳ ಸಾಧನೆಗೆ ವಿಶೇಷವಾಗಿ ಕನ್ನಡ ಮಾಧ್ಯಮದ ಶಿಕ್ಷಕರ ಪರಿಶ್ರಮ ಅಪಾರವಾಗಿದೆ. ಮುಂಬರುವ ದಿನಗಳಲ್ಲಿ ಕ್ರೀಡಾಂಗಣಕ್ಕಾಗಿ ನಿವೇಶನ ಖರೀದಿಸುವ ಯೋಜನೆ ಸಂಘದ್ದಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಪ್ರಯತ್ನ ನಡೆದಿದೆ. ಡೊಂಬಿವಲಿ ಕರ್ನಾಟಕ ಸಂಘದ ಸಾಮಾಜಿಕ, ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಅಪಾರ ಸಾಧನೆಗೈದು ನಾಡು-ನುಡಿಯ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಸಂಘದ ಅಭಿವೃದ್ಧಿಯ ಹರಿಕಾರರಾದ ಸದಸ್ಯ ಬಾಂಧವರ ಸಹಕಾರ ನಿರಂತರವಾಗಿಲಿ ಎಂದು ನುಡಿದರು.

ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ದೇವದಾಸ್‌ ಎಲ್‌. ಕುಲಾಲ್‌ ಅವರು  ಗತ ಸಾಲಿನ ವರದಿ ವಾಚಿಸಿದರು. ಜತೆ ಕೋಶಾಧಿಕಾರಿ ರಮೇಶ್‌ ಕಾಖಂಡಕಿ ಅವರು ಆಯವ್ಯಯ ಪಟ್ಟಿಯನ್ನು ಮಂಡಿಸಿದರು. ಸಂಘದ ಹಿರಿಯ ಸದಸ್ಯರಾದ ವಸಂತ ಕಲಕೋಟಿ, ರವಿ ಸನಿಲ್‌, ಹೇಮಾ ಹೆಗ್ಡೆ, ಶೇಖರ್‌ ಅಮೀನ್‌, ಜಿ. ವಿ. ಹೆಗ್ಡೆ, ಮೋಹನ್‌ ಪೈ, ಮುರಳಿ ಶೆಟ್ಟಿ, ರವಿ ಸುವರ್ಣ ಮೊದಲಾದವರು ಮಾತನಾಡಿ ಸಲಹೆ ಸೂಚನೆಗಳನ್ನು ನೀಡಿದರು.

ಹೇಮಾ ಹೆಗ್ಡೆ ಪ್ರಾರ್ಥನೆಗೈದರು. ಪದಾಧಿ ಕಾರಿಗಳು ದೀಪಪ್ರಜ್ವಲಿಸಿ ಮಹಾಸಭೆಗೆ ಚಾಲನೆ ನೀಡಿದರು. ವೇದಿಕೆಯಲ್ಲಿ ಅಧ್ಯಕ್ಷ ಇಂದ್ರಾಳಿ ದಿವಾಕರ ಶೆಟ್ಟಿ, ಕಾರ್ಯಾಧ್ಯಕ್ಷ ಸುಕುಮಾರ್‌ ಎನ್‌. ಶೆಟ್ಟಿ, ಕೋಶಾಧಿಕಾರಿ ಲೋಕನಾಥ ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಡಾ| ವಿಜಯ ಎಂ. ಶೆಟ್ಟಿ, ಕಾರ್ಯ ದರ್ಶಿ ದೇವದಾಸ್‌ ಎಲ್‌. ಕುಲಾಲ್‌, ಲೆಕ್ಕ ಪರಿ ಶೋಧಕ ವಸಂತ ಕುಮಾರ್‌,ಯು. ಪಿ. ಪೈ, ಜತೆ ಕಾರ್ಯದರ್ಶಿ ರಮೇಶ್‌ ಕಾಖಂಡಕಿ ಉಪಸ್ಥಿತರಿದ್ದರು.

ಸಂಘದ ಪದಾಧಿಕಾರಿಗಳಾದ ಮಹಿಳಾ ವಿಭಾದಗ ಕಾರ್ಯಾಧ್ಯಕ್ಷೆ ಸುಷ್ಮಾ ಡಿ. ಶೆಟ್ಟಿ, ಪ್ರಭಾಕರ ಶೆಟ್ಟಿ, ಸನತ್‌ ಕುಮಾರ್‌ ಜೈನ್‌, ಎಸ್‌. ಎನ್‌. ಸೋಮಾ, ಮಾಧುರಿಕಾ ಬಂಗೇರ, ರಾಜೀವ ಭಂಡಾರಿ, ಆಶಾ ಶೆಟ್ಟಿ, ಯೋಗಿನಿ ಶೆಟ್ಟಿ, ವಸಂತ ಸುವರ್ಣ, ಸತೀಶ್‌ ಆಲಗೂರ ಮೊದಲಾದವರು ಸಹಕರಿಸಿದರು. ಸಂಘದ ಗೌರವ ಕಾರ್ಯದರ್ಶಿ  ದೇವದಾಸ್‌ ಎಲ್‌. ಕುಲಾಲ್‌ ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಸದಸ್ಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 

ಚಿತ್ರ-ವರದಿ : ಗುರುರಾಜ ಪೋತನೀಸ್‌.

ಟಾಪ್ ನ್ಯೂಸ್

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.