ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಿಗೆ ಆಹ್ವಾನ
Team Udayavani, Nov 21, 2018, 4:54 PM IST
ಎಂ.ಕೆ.ಹುಬ್ಬಳ್ಳಿ: ಚಿಕ್ಕಮುನವಳ್ಳಿ ಗ್ರಾಮದಲ್ಲಿ ಡಿ. 8 ರಂದು ನಡೆಯಲಿರುವ ಖಾನಾಪುರ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಖ್ಯಾತ ಸಾಹಿತಿ ಸತೀಶ ಕುಲಕರ್ಣಿ ಅವರನ್ನು ಹಾವೇರಿಯ ಅವರ ನಿವಾಸಕ್ಕೆ ತೆರಳಿ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು, ಗ್ರಾಮಸ್ಥರು ತೆರಳಿ ಸತ್ಕರಿಸಿ ಆಹ್ವಾನಿಸಿದರು.
ತಾಲೂಕಾ ಅಧ್ಯಕ್ಷ ವಿಜಯ ಬಡಿಗೇರ ಮಾತನಾಡಿ, ಸತೀಶ ಕುಲಕರ್ಣಿಯವರು ಖಾನಾಪುರದಲ್ಲಿ 80 ರ ದಶಕದಲ್ಲಿ ಸೇವೆ ಸಲ್ಲಿಸಿ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಲೋಕದಲ್ಲಿ ಸಂಚಲನ ಮೂಡಿಸಿದವರು ಅವರ ಸಾಹಿತ್ಯಿಕ ಕೊಡುಗೆ ಅಪಾರವಾಗಿದ್ದು ಇಂಥವರನ್ನು ಸರ್ವಾಧ್ಯಕ್ಷರನ್ನಾಗಿ ಆಹ್ವಾನಿಸಲು ನಮಗೆ ಹೆಮ್ಮೆಯಾಗುತ್ತಿದೆ ಹಾಗೂ ಸಮ್ಮೇಳನದ ಉದ್ಘಾಟಕರಾಗಿ ಖ್ಯಾತ ಸಾಹಿತಿಗಳಾದ ಸರಜೂ ಕಾಟ್ಕರ ಆಗಮಿಸಲು ಒಪ್ಪಿದ್ದಾರೆ ಮತ್ತು ಗ್ರಾಮಸ್ಥರ ಹಾಗೂ ಪದಾಧಿಕಾರಿಗಳ ಸಹಕಾರದಿಂದ ಸಮ್ಮೇಳನದ ಸಕಲ ಸಿದ್ಧತೆಗಳು ನಡೆದಿವೆ ಎಂದರು.
ಸತೀಶ ಕುಲಕರ್ಣಿ ಮಾತನಾಡಿ, ಗಡಿಭಾಗದ ಜನ ನನ್ನನ್ನು ಸರ್ವಾಧ್ಯಕ್ಷನನ್ನಾಗಿ ಆಹ್ವಾನಿಸುತ್ತಿರುವುದು ಸುದೈವ ಅಲ್ಲಿನ ನಾಡು ನುಡಿ ಸೇವೆಗೆ ನಾನು ಸಹಕಾರ ನೀಡುತ್ತೇನೆ ಎಂದರು. ಚಿಕ್ಕಮುನವಳ್ಳಿಯ ಅಶೋಕ ಬೆಂಡಿಗೇರಿ, ಕಸಾಪ ಪದಾಧಿಕಾರಿ ಬಿ.ಎನ್. ಬನೋಶಿ ಹಾಗೂ ಸಾಹಿತಿಗಳು ಮಾತನಾಡಿದರು. ನಾರಾಯಣ ಜೋಶಿ, ಎಸ್.ಎಸ್.ಹಿರೇಮಠ, ಆರ್.ಬಿ.ಹುಣಶೀಕಟ್ಟಿ ಹಾಗೂ ಹಾವೇರಿ ಜಿಲ್ಲಾ ಕಾರಾಗೃಹ ಅಧಿ ಕಾರಿ ಟಿ.ಬಿ.ಭಜಂತ್ರಿ, ತಾಲೂಕಾ ಕಸಾಪ ಮಾಜಿ ಅಧ್ಯಕ್ಷ ವಿ.ಎಂ.ಪತ್ರಿ ಮತ್ತು ಸಾಹಿತ್ಯ ಬಳಗದ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.