ನಗರ ಕೇಂದ್ರ ಗ್ರಂಥಾಲಯಕ್ಕೆ ಹೊಸರೂಪ 


Team Udayavani, Nov 22, 2018, 11:02 AM IST

22-november-5.gif

ಮಹಾನಗರ: ಸಾರ್ವಜನಿಕರನ್ನು ಗ್ರಂಥಾಲಯದತ್ತ ಸೆಳೆಯುವುದರೊಂದಿಗೆ ಓದಿನ ಅಭಿರುಚಿ ಬೆಳೆಸುವ ನಿಟ್ಟಿನಲ್ಲಿ ಮಂಗಳೂರು ನಗರ ಕೇಂದ್ರ ಗ್ರಂಥಾಲಯವು ಹಲವು ಓದುಗಸ್ನೇಹಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದೆ. ಇದೀಗ ಪಾಲಿಕೆಯ ಗ್ರಂಥಾಲಯ ಕರವನ್ನು ಉಪಯೋಗಿಸಿಕೊಂಡು ಸುಮಾರು 98 ಲಕ್ಷ ರೂ. ವೆಚ್ಚದ ವಿಸ್ತರಿತ ಹೊಸ ಕಟ್ಟಡವನ್ನು ನಿರ್ಮಿಸಲು ಮುಂದಾಗಿದೆ.

ನಗರದ ಬಾವುಟಗುಡ್ಡೆ ಲೈಟ್‌ಹೌಸ್‌ ಹಿಲ್‌ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಕೇಂದ್ರ ಗ್ರಂಥಾಲಯವು ಸುಮಾರು 65 ವರ್ಷಗಳ ಇತಿಹಾಸ ಹೊಂದಿದೆ. ಹದಿನೈದು ವರ್ಷಗಳ ಹಿಂದೆ ತೀರಾ ದುಃಸ್ಥಿತಿಯಲ್ಲಿದ್ದ ನಗರ ಕೇಂದ್ರ ಗ್ರಂಥಾಲಯವು ಬಳಿಕದ ದಿನಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಸೌಲಭ್ಯಗಳನ್ನು ದೊರಕಿಸಿ ಕೊಡುವಲ್ಲಿ ಸಫಲವಾಗಿತ್ತು. ಪಾಲಿಕೆಯಿಂದ ಗ್ರಂಥಾಲಯ ನಿಧಿಗೆ ಸಲ್ಲಿಕೆಯಾಗುವ ಗ್ರಂಥಾಲಯ ಕರವನ್ನು ಉಪಯೋಗಿಸಿಕೊಂಡು ಓದುಗ ಸ್ನೇಹಿ ತಾಣವನ್ನಾಗಿ ಮಾಡುವ ನಿಟ್ಟಿನಲ್ಲಿ ನಗರ ಕೇಂದ್ರ ಗ್ರಂಥಾಲಯ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ.

ಹೊಸ ಕಟ್ಟಡದಲ್ಲಿ ಏನೇನಿರಲಿದೆ ?
ಇದೀಗ ಗ್ರಂಥಾಲಯ ನಿಧಿಯಲ್ಲಿ ಸಂಗ್ರಹವಾದ ಹಣವನ್ನು ಬಳಸಿಕೊಂಡು ಎರಡು ಮಹಡಿಯ ಹೊಸ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ. ‘ನೂತನ ಕಟ್ಟಡವು ಈಗಿನ ಹಳೆಯ ಕಟ್ಟಡಕ್ಕೆ ಹೊಂದಿಕೊಂಡಿರಲಿದೆ. ಹೊಸ ಕಟ್ಟಡದ ತಳ ಮಹಡಿಯಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಮತ್ತು ಮೊದಲ ಮಹಡಿಯಲ್ಲಿ ಸುಸಜ್ಜಿತ ಅಡಿಟೋರಿಯಂ ಇರಲಿದೆ. ಆಡಿಟೋರಿಯಂನಲ್ಲಿ ಸ್ಟೇಜ್‌, ಆಸನ ವ್ಯವಸ್ಥೆ ಸಹಿತ ಇತರ ಸೌಲಭ್ಯಗಳನ್ನು ಕೂಡ ಈ ಗ್ರಂಥಾಲಯ ಹೊಂದಲಿದೆ. ಆದರೆ, ಇನ್ನೂ ಕೂಡ ಕಟ್ಟಡದ ಅಂತಿಮ ನೀಲನಕ್ಷೆ ಸಿದ್ಧಗೊಂಡಿಲ್ಲ. ಹೀಗಾಗಿ, ಕಟ್ಟಡದ ವಿನ್ಯಾಸದ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಹಳೆ ಗ್ರಂಥಾಲಯದಲ್ಲಿದ್ದ ಮಕ್ಕಳ ಆಟ ಮತ್ತು ಸಾಹಿತ್ಯ ವಿಭಾಗವನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವ ಯೋಜನೆಯಿದೆ’ ಎಂದು ನಗರ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕ ರಾಘವೇಂದ್ರ ಅವರು ಸುದಿನಕ್ಕೆ ತಿಳಿಸಿದ್ದಾರೆ.

2012-13ನೇ ಸಾಲಿನ ಗ್ರಂಥಾಲಯ ನಿಧಿಯ 18.45 ಲಕ್ಷ ರೂ. ಅನುದಾನದಲ್ಲಿ ನೆಲ ಮತ್ತು ಗೋಡೆಗೆ ಫ್ಲೋರಿಂಗ್‌ ನಡೆಸಲಾಗಿತ್ತು. 2013-14ನೇ ಸಾಲಿನಲ್ಲಿ 11 ಲಕ್ಷ ರೂ. ಅನುದಾನವನ್ನು ಬಳಸಿಕೊಂಡು ಮೊದಲ ಮಹಡಿಗೆ ಫಾಲ್‌ ಸೀಲಿಂಗ್‌ ಮಾಡಲಾಗಿತ್ತು. ಮೊದಲಿದ್ದ ಅಲ್ಯೂಮಿನಿಯಂ ಶೀಟ್‌ನ್ನು ತೆಗೆದು ಹಾಕಿ ಫಾಲ್‌ ಸೀಲಿಂಗ್‌ನ್ನು ಅಳವಡಿಸಲಾಗಿತ್ತು. ಮಕ್ಕಳಲ್ಲಿ ಆಟದ ಜತೆಗೆ ಸಾಹಿತ್ಯಾಭಿರುಚಿ ಬೆಳೆಸುವ ಉದ್ದೇಶದಿಂದ ಮಕ್ಕಳ ಆಟ ಮತ್ತು ಸಾಹಿತ್ಯ ವಿಭಾಗ ತೆರೆಯಲಾಗಿತ್ತು. ದಾಖಲೆಗಳನ್ನು ಕಂಪ್ಯೂಟರೀಕರಣಗೊಳಿಸಲಾಗಿತ್ತು. ಪುಸ್ತಕ ಪಡೆದುಕೊಳ್ಳುವ ಸಂದರ್ಭ ಸದಸ್ಯತ್ವ ಕಾರ್ಡ್‌ ಮತ್ತು ಪುಸ್ತಕವನ್ನು ಸ್ಕ್ಯಾನ್ ಮಾಡಿ ನೀಡುವ ರಾಜ್ಯದ ಕೆಲವೇ ಸರಕಾರಿ ಗ್ರಂಥಾಲಯಗಳ ಪೈಕಿ ಮಂಗಳೂರು ನಗರ ಕೇಂದ್ರ ಗ್ರಂಥಾಲಯವೂ ಒಂದಾಗಿದೆ. ಅಲ್ಲದೆ ಇನ್ನೂ ಅನೇಕ ಸೌಲಭ್ಯಗಳನ್ನು ಈ ಗ್ರಂಥಾಲಯದಲ್ಲಿ ಕಲ್ಪಿಸಿ ಕೊಡಲಾಗಿದೆ.

ಬಹು ಉದ್ದೇಶಕ್ಕೆ ಬಳಕೆ 
ಹೊಸ ಕಟ್ಟಡದಲ್ಲಿ ನಿರ್ಮಾಣಗೊಳ್ಳಲಿರುವ ಆಡಿಟೋರಿಯಂ ಅನ್ನು ಬಹು ಉದ್ದೇಶಕ್ಕೆ ಬಳಸಿಕೊಳ್ಳಲು ಗ್ರಂಥಾಲಯ ಪ್ರಮುಖರು ನಿರ್ಧರಿಸಿದ್ದಾರೆ. ಗ್ರಂಥಾಲಯ ಸಂಬಂಧಿ ಕಾರ್ಯಕ್ರಮಗಳು, ಮಕ್ಕಳಿಗೆ ಗ್ರಂಥಾಲಯ ತರಬೇತಿ, ವಿವಿಧ ತರಗತಿಗಳನ್ನು ನಡೆಸಲು ಇದು ಸಹಕಾರಿಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಇನ್ನು, ಹೊಸ ಕಟ್ಟಡದ ಕಾಮಗಾರಿಗೆ ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್‌ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಶೀಘ್ರದಲ್ಲೇ ನಿರ್ಮಾಣ ಕೆಲಸ ಪ್ರಾರಂಭವಾಗುವ ಸಾಧ್ಯತೆಯಿದೆ.

ಓದುಗರಿಗೆ ಹೆಚ್ಚಿನ ಸೌಲಭ್ಯ
ಮಂಗಳೂರು ನಗರ ಕೇಂದ್ರ ಗ್ರಂಥಾಲಯಕ್ಕೆ ದಿನಕ್ಕೆ ಕನಿಷ್ಠ 400-500 ಮಂದಿ ಬರುತ್ತಾರೆ. ಓದುಗರಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕಟ್ಟಡ ಹೊಸದಾಗಿ ನಿರ್ಮಾಣವಾಗುತ್ತಿದೆ. ಗ್ರಂಥಾಲಯ ನಿಧಿಯನ್ನು ಬಳಸಿಕೊಂಡು ಹೊಸ ಕಟ್ಟಡ ನಿರ್ಮಾಣಗೊಳ್ಳುತ್ತಿದೆ.
– ಡಿ. ವೇದವ್ಯಾಸ ಕಾಮತ್‌,
 ಶಾಸಕರು

ವಿಶೇಷ ವರದಿ

ಟಾಪ್ ನ್ಯೂಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.