‘ಹೊಗೆ ಮುಕ್ತ ಉದ್ದೇಶದಿಂದ ಪ್ರಧಾನಿಯಿಂದ ಉಜ್ಜಲ ಯೋಜನೆ’
Team Udayavani, Nov 22, 2018, 2:46 PM IST
ಬೆಳ್ತಂಗಡಿ : ಸ್ವಚ್ಛ ಭಾರತ ಕಲ್ಪನೆ ಜತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉಜ್ವಲ ಯೋಜನೆಯನ್ನು ಪ್ರಾರಂಭಿಸಿ, ಪ್ರತಿ ಹಳ್ಳಿಯನ್ನೂ ಹೊಗೆ ಮುಕ್ತಗೊಳಿಸುವ ಉದ್ದೇಶದಿಂದ ಜಾರಿಗೊಳಿಸಿದ್ದಾರೆ. ಅದನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಅವರು ಬುಧವಾರ ನಿಡಿಗಲ್ನ ಶ್ರೀ ಸತ್ಯನಾರಾಯಣ ಭಜನ ಮಂದಿರದಲ್ಲಿ ಕಲ್ಮಂಜ ಗ್ರಾಮದ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಅಡುಗೆ ಅನಿಲ ಸೌಲಭ್ಯ ವಿತರಿಸಿ, ಮಾತನಾಡಿದರು. ಬೆಳ್ತಂಗಡಿ ಬಿಜೆಪಿ ಕಾರ್ಯದರ್ಶಿ ಸೀತಾರಾಮ ಬೆಳಾಲು, ಬೆಳ್ತಂಗಡಿ ತಾ.ಪಂ. ಸದಸ್ಯ ಶಶಿಧರ ಎಂ.ಕಲ್ಮಂಜ, ಕಲ್ಮಂಜ ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮೀ, ಉಪಾಧ್ಯಕ್ಷ ದಿನೇಶ್ ಗೌಡ, ಗ್ರಾ.ಪಂ. ಸದಸ್ಯರು ಮತ್ತಿತರರಿದ್ದರು.
70 ಮಂದಿ ಫಲಾನುಭವಿಗಳಿಗೆ ಅಡುಗೆ ಅನಿಲ ಸೌಲಭ್ಯ ವಿತರಿಸಲಾಯಿತು. ಗ್ರಾ.ಪಂ. ಸದಸ್ಯ ಕೃಷ್ಣಪ್ಪ ಗುಡಿಗಾರ್ ಸ್ವಾಗತಿಸಿ, ಬಿಜೆಪಿ ಕಲ್ಮಂಜ ಗ್ರಾಮ ಸಮಿತಿ ಅಧ್ಯಕ್ಷ ವಿಜಯ್ ವಂದಿಸಿದರು. ಮೋನಪ್ಪ ಟಿ. ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.