ಅರ್ಜಿಗೆ ಮಧ್ಯವರ್ತಿ ಹಾವಳಿ

Team Udayavani, Nov 22, 2018, 3:42 PM IST

22-november-17.gif

ಗಂಗಾವತಿ: ಸರಕಾರಿ ಭೂಮಿಯನ್ನು ದಶಕಗಳಿಂದ ಸಾಗುವಳಿ ಮಾಡುವ ಬಡ ಮತ್ತು ಮಧ್ಯಮ ವರ್ಗದ ರೈತರು, ಕೃಷಿ ಕೂಲಿಕಾರರಿಗೆ ಸಮಿಶ್ರ ಸರಕಾರ ಸಾಗುವಳಿ ಚೀಟಿ ನೀಡಲು ಅರ್ಜಿ ಸ್ವೀಕಾರ ಮಾಡುವ ಆದೇಶ ಹೊರಡಿಸಿದೆ. ಈಗಾಗಲೇ ಸರಕಾರದ ಮುಖ್ಯಕಾರ್ಯದರ್ಶಿಗಳು ಆಯಾ ಜಿಲ್ಲಾಧಿಕಾರಿಗೆ ಸುತ್ತೋಲೆ ಹೊರಡಿಸಿ ಸತತವಾಗಿ ಸರಕಾರಿ ಭೂಮಿ ಸಾಗುವಳಿ ಮಾಡುವ ಭೂ ರಹಿತ ಕೃಷಿಕೂಲಿಕಾರರಿಗೆ, ಕೃಷಿಕರಿಗೆ 5 ಎಕರೆ ಒಳಗೆ ಭೂಮಿ ಪಟ್ಟಾ ನೀಡಲು ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ.

ಅರ್ಜಿ ಸ್ವೀಕಾರ ಕ್ರಮ ಕುರಿತು ಕೆಲ ಸಲಹೆಗಳನ್ನು ನೀಡಿದ್ದು ನೇರವಾಗಿ ಸಾಗುವಳಿ ಚೀಟಿ ಪಡೆಯಲು ತಹಶೀಲ್ದಾರ್‌ ಕಚೇರಿಯಿಂದ ಹಣ ಪಾವತಿಸಿ ಅರ್ಜಿ ಪಡೆದು ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಪುನಃ ತಹಶೀಲ್ದಾರ್‌ ಕಚೇರಿಗೆ ಅರ್ಜಿ ಸಲ್ಲಿಸಲು ಕ್ರಮ ವಹಿಸುವಂತೆ ಸಲಹೆ ನೀಡಲಾಗಿದೆ. ಆದರೆ ಫಾರಂ 57 ಅರ್ಜಿ ಸಲ್ಲಿಸಲು ಕೆಲ ಮಧ್ಯವರ್ತಿಗಳು ಖಾಸಗಿ ಟೈಪಿಂಗ್‌ ಸೆಂಟರ್‌ ಮತ್ತು ಅರ್ಜಿ ಮಾರಾಟ ಮಾಡುವ ಅಂಗಡಿಗಳಲ್ಲಿ ಫಾರಂ 57 ಪಡೆದು, ಭರ್ತಿ ಮಾಡಿ ಅಫಿಡವಿಟ್‌ ಸೇರಿ ಅಗತ್ಯ ದಾಖಲಾತಿಗಳೊಂದಿಗೆ ತಹಶೀಲ್ದಾರ್‌ ಕಚೇರಿಗೆ ಅರ್ಜಿ ಸಲ್ಲಿಸಲು 5-10 ಸಾವಿರ ರೂ. ವಸೂಲಿ ಮಾಡುತ್ತಿರುವ ಆರೋಪಗಳು ಕೇಳಿಬರುತ್ತಿವೆ. 

ಸೂಕ್ತ ಮಾರ್ಗದರ್ಶನ ಮಾಡಬೇಕಾದ ಕಂದಾಯ ಇಲಾಖೆಯ ಅಧಿಕಾರಿಗಳು ಜವಾಬ್ದಾರಿಯಿಂದ ನುಣಿಚಿಕೊಳ್ಳುತ್ತಿರುವುದು ಕಂಡುಬರುತ್ತಿದೆ. ಇನ್ನೂ ಕೆಲವೆಡೆ ಸಾಗುವಳಿ ಚೀಟಿ ಪಡೆಯಲು ಅರ್ಜಿ ಸಲ್ಲಿಸುವ  ಮಾಹಿತಿಯೇ ಇಲ್ಲ. ಪ್ರತಿ ಗ್ರಾಮದಲ್ಲಿ ಸ್ಥಳೀಯ ಗ್ರಾಮಲೆಕ್ಕಾಧಿಕಾರಿ ಕಂದಾಯ ನಿರೀಕ್ಷಕರು ವ್ಯಾಪಕ ಪ್ರಚಾರ ನಡೆಸಬೇಕೆಂಬ ನಿಯಮವಿದ್ದರೂ ಇದುವರೆಗೂ ಎಲ್ಲಿಯೂ ಅರ್ಜಿ ಸಲ್ಲಿಸುವಂತೆ ಪ್ರಚಾರ ನಡೆಸಿಲ್ಲ ಎನ್ನಲಾಗುತ್ತಿದೆ.

ಭೂಮಿ ರಹಿತ ಕೃಷಿಕೂಲಿಕಾರರು ಸರಕಾರದ ಭೂಮಿಯನ್ನು ಹಲವು ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದರೆ ಅದನ್ನು ಬಗರ್‌ ಹುಕುಂ ಸಾಗುವಳಿ ಎಂದು ಪರಿಗಣಿಸಲಾಗುತ್ತದೆ. ತಹಶೀಲ್ದಾರ್‌ ಕಚೇರಿಯಿಂದ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಸರಕಾರ ಸೂಚನೆ ನೀಡಿದೆ. ಮಧ್ಯವರ್ತಿಗಳ ಹಾವಳಿಯಿಂದ ಸಾಗುವಳಿದಾರರು ಸಾವಿರಾರು ರೂ. ಕಳೆದುಕೊಳ್ಳುವ ಭೀತಿ ಇದ್ದು ಆಯಾ ತಹಶೀಲ್ದಾರ್‌ರು ಮುನ್ನೆಚ್ಚರಿಕೆಯಿಂದ ಅರ್ಜಿ ವಿತರಣೆ-ಸ್ವೀಕರಿಸುವ ವ್ಯವಸ್ಥೆ ಮಾಡಬೇಕಿದೆ.

ಬಗರ್‌ಹುಕುಂ ಸಾಗುವಳಿದಾರರು ಸಾಗುವಳಿ ಚೀಟಿ (ಪಟ್ಟಾ) ಪಡೆಯಲು ತಹಶೀಲ್ದಾರ್‌ ಕಚೇರಿಗೆ ನಿಗದಿತ ಶುಲ್ಕ ಪಾವತಿಸಿ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಸಾಗುವಳಿದಾರರು ಅರ್ಜಿ ಸಲ್ಲಿಸಬೇಕು. ಮಧ್ಯವರ್ತಿಗಳ ಹಾವಳಿಯನ್ನು ತಪಿಸಲು ಕಂದಾಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಹಣವಸೂಲಿ ಮಾಡುವ ಆರೋಪಗಳಿದ್ದು ಸಾಗುವಳಿದಾರರು ನಿಗದಿತ ಶುಲ್ಕ ಮಾತ್ರ ಪಾವತಿಬೇಕು. ತಹಶೀಲ್ದಾರ್‌ ಕಚೇರಿಯಲ್ಲಿ ಪಡೆದ ಫಾರಂ 57ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಪ್ರತಿ ತಹಶೀಲ್ದಾರ್‌ ಕಚೇರಿಯಲ್ಲಿ ಬಗರ್‌ಹುಕುಂ ಸಾಗುವಳಿ ಚೀಟಿ ಪಡೆಯಲು ಅರ್ಜಿ ಸಲ್ಲಿಸುವ ಪ್ರತೇಕ ಕೌಂಟರ್‌ ಆರಂಭಿಸಿ ಏಕಗವಾಕ್ಷ ಪದ್ಧತಿಯಂತೆ ಅರ್ಜಿ ಸ್ವೀಕರಿಸಬೇಕು.
-ಕುಮಾರ ಸಮತಳ,
ಸದಸ್ಯರು ಭೂಮಿ ವಸತಿ ಮೇಲ್ವಿಚಾರಣಾ
ಉನ್ನತ ಮಟ್ಟದ ಸಮಿತಿ.

ಕೆ. ನಿಂಗಜ್ಜ

ಟಾಪ್ ನ್ಯೂಸ್

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

8-gangavathi

Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.