ಗೊಂದಿ ಮನೆತನದ ಲಗ್ನ ಪತ್ರಿಕೆ ವಿಶ್ವ  ದಾಖಲೆ ಸೇರ್ಪಡೆ 


Team Udayavani, Nov 22, 2018, 4:00 PM IST

22-november-19.gif

ಅಕ್ಕಿಆಲೂರು: ಪಟ್ಟಣದ ಕುಮಾರ ನಗರದ ನಿವಾಸಿ ಪೊಲೀಸ್‌ ಪೇದೆ ಕರಬಸಪ್ಪ ಗೊಂದಿ, ವಿನುತಾ ಗೊಂದಿಯವರ ಮದುವೆ ಆಮಂತ್ರಣ ಪ್ರತಿಕೆಯನ್ನು ಇನ್‌ಕ್ರೆಡಿಬಲ್‌ ಬುಕ್‌ ಆಫ್‌ ರೆಕಾರ್ಡ್ಸ್‌ ಸಂಸ್ಥೆ ಸಾಂಪ್ರದಾಯಕ, ಸಾಂಸ್ಕೃತಿಕ ಮತ್ತು ಮೌಲ್ಯಯುತ ಪತ್ರಿಕೆ ಎಂದು ಪರಿಗಣಿಸಿ ವಿಶ್ವದಾಖಲೆಗೆ ಸೇರ್ಪಡೆ ಮಾಡಿದೆ.

ನೇತ್ರದಾನ, ರಕ್ತದಾನ ಮತ್ತು ದೇಹದಾನ ಜಾಗೃತಿಯಲ್ಲಿ ಹಾವೇರಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ವಿಶೇಷ ಛಾಪು ಮೂಡಿಸಿ ಈ ಭಾಗದ ಜನತೆ ಹೆಮ್ಮೆಗೆ ಕಾರಣವಾಗಿರುವ ಪೊಲೀಸ್‌ ಪೇದೆ ಕರಬಸಪ್ಪ ಗೊಂದಿ, 2014ರಲ್ಲಿ ವಿನುತಾ ಎಂಬುವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಸ್ವತಃ ತಾವೇ ತಮ್ಮ ಕೈಬರಹದೊಂದಿಗೆ ರಚಿಸಿದ್ದ ಕರಬಸಪ್ಪ ಗೊಂದಿ, ಸಪ್ತಪದಿ, ಮಾಂಗಲ್ಯ ಧಾರಣೆ, ಅಕ್ಷತೆ ಹಾಕುವುದು, ಕನ್ಯಾದಾನ, ಕಂಕಣ ಧಾರಣೆಗಳ ಮಹತ್ವ, ಹಾಗೂ ಸನಾತನ ಹಿಂದೂ ಧರ್ಮದ ಮದುವೆ ಸಾಂಪ್ರದಾಯಿಕ ವಿಧಿ ವಿಧಾನಗಳ ಹಿಂದೆ ಇರುವ ವೈಜ್ಞಾನಿಕ ವಿವರಣೆಗಳನ್ನು ಸಹ ನೀಡಿ ಒಟ್ಟು 8 ಪುಟದ ವಿವಾಹ ಆಮಂತ್ರಣ ಪತ್ರಿಕೆ ರಚಿಸಿದ್ದರು. ಅಷ್ಟೆ ಅಲ್ಲದೇ ಮದುವೆ ದಿನ ನೂತನ ದಂಪತಿ ನೇತ್ರದಾನ ಒಪ್ಪಿಗೆ ಪತ್ರ ಬರೆದುಕೊಟ್ಟು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ನಂತರದ ದಿನದಲ್ಲಿ ಪತ್ನಿ ವಿನುತಾ ಅವರ ಸೀಮಂತ ಕಾರ್ಯವನ್ನು ಅಂಧ ಮಕ್ಕಳಿಂದ ನೆರವೇರಿಸಿ ಗಮನ ಸೆಳೆದಿದ್ದ ಕರಬಸಪ್ಪ, ಈವರೆಗೂ ಪ್ರತಿ ತಿಂಗಳು ತಮಗೆ ಬರುವ ವೇತನದಲ್ಲಿ ಅವರ ಮನೆ ಎದುರು ಉಚಿತ ನೇತ್ರ ತಪಾಸಣೆ ಶಿಬಿರ ಏರ್ಪಡಿಸುತ್ತಾರೆ. ಈ ವರೆಗೂ ಹಲವಾರು ಭಾರಿ ನೇತ್ರದಾನ ಶಿಬಿರಗಳನ್ನು ಆಯೋಜನೆ ಮಾಡಿದ್ದಾರೆ. ಅಕ್ಕಿಆಲೂರು ಹಾಗೂ ಸುತ್ತಲಿನ ಭಾಗದಲ್ಲಿ ನಿಧನ ಹೊಂದಿದವರ ಪೈಕಿ 20ಕ್ಕೂ ಹೆಚ್ಚು ಜನರ ನೇತ್ರವನ್ನು ದಾನವಾಗಿ ಪಡೆದು ಅಂಧರ ಬಾಳಿಗೆ ಬೆಳಕಾಗಿರುವ ಕರಬಸಪ್ಪ ಅವರ ವಿಶಿಷ್ಟ ಮದುವೆ ಆಮಂತ್ರಣ ವಿಶ್ವದಾಖಲೆಗೆ ಸೇರ್ಪಡೆಯಾಗಿ ಜನತೆಯ ಪ್ರಶಂಸೆಗೆ ಪಾತ್ರವಾಗಿದೆ.

ನಮ್ಮ ಇಲಾಖೆಯಲ್ಲಿರುವ ಪ್ರತಿಯೊಬ್ಬರು ಒತ್ತಡ ಬದುಕಿನಲ್ಲಿ ಜೀವಿಸುತ್ತಾರೆ. ಸಮರ್ಥ ಕಾರ್ಯ ನಿರ್ವಹಿಸಿ ಕರಬಸಪ್ಪ ಗೊಂದಿ ಸದಾ ನೇತ್ರದಾನ, ರಕ್ತದಾನ ಜಾಗೃತಿಯಂತಹ ಸಾಮಾಜಿಕ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದರಿಂದ ನಮ್ಮ ಇಲಾಖೆ ಹೆಮ್ಮೆ ಪಡುತ್ತದೆ.
. ಕೆ.ಪರಶುರಾಮ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಟಾಪ್ ನ್ಯೂಸ್

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.