ಆಹಾರ ಧಾನ್ಯಗಳಿಗೆ ಸೆಣಬಿನ ಚೀಲದ ಪ್ಯಾಕಿಂಗ್ ಕಡ್ಡಾಯ
Team Udayavani, Nov 23, 2018, 6:00 AM IST
ಹೊಸದಿಲ್ಲಿ: ಎಲ್ಲಾ ಬಗೆಯ ಆಹಾರ ಧಾನ್ಯಗಳ ಸಂಗ್ರಹಣೆಗೆ ಹಾಗೂ ಸಾಗಣೆಗೆ ಸೆಣಬಿನ ಚೀಲಗಳನ್ನೇ ಬಳಸಬೇಕೆಂಬ ಪ್ರಸ್ತಾವನೆಗೆ ಕೇಂದ್ರ ಸಂಪುಟ ಗುರುವಾರ ಅನುಮೋದನೆ ನೀಡಿದೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ವಿತ್ತೀಯ ವ್ಯವ ಹಾರಗಳಿಗೆ ಸಂಬಂಧಿಸಿದ ಸಂಪುಟ ಸಮಿತಿ (ಸಿಸಿಇಎ) ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 1987ರ ಸೆಣಬಿನ ಪ್ಯಾಕೇಜಿಂಗ್ ಸಾಮಗ್ರಿ (ಜೆಪಿಎಂ) ಕಾಯ್ದೆಯ ಪ್ರಕಾರ, ಧಾನ್ಯಗಳಲ್ಲಿ ಶೇ.90ರಷ್ಟು ಧಾನ್ಯಗಳನ್ನು ಸೆಣಬಿನ ಚೀಲದಲ್ಲಿ ಪ್ಯಾಕ್ ಮಾಡುವುದು ಕಡ್ಡಾಯವಾಗಿತ್ತು. ಇದನ್ನು ಈಗ ಶೇ.100ರಷ್ಟು ಧಾನ್ಯಗಳ ಸಂಗ್ರಹಣೆಗೆ ಗೋಣಿಚೀಲ ಕಡ್ಡಾಯ ಎಂದು ಬದಲಿಸಲಾಗಿದೆ. ಈ ಮೂಲಕ, ಪ್ಲಾಸ್ಟಿಕ್ ಸೇರಿ ದಂತೆ ಪರಿಸರಕ್ಕೆ ಮಾರಕವಾಗುವ ಪ್ಯಾಕಿಂಗ್ ಮಾದರಿ ಗಳ ಬದಲಿಗೆ ಜೈವಿಕ ಉತ್ಪನ್ನವಾದ ಗೋಣಿ ಚೀಲಗಳನ್ನು ಬಳ ಸಲು ಉತ್ತೇಜನ ನೀಡುವುದರ ಜತೆಗೆ, ಸೆಣಬು ಬೆಳೆಯುವ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ. ಆದರೆ, ಸಕ್ಕರೆಯ ವಿಚಾರ ದಲ್ಲಿ ಶೇ.20ರಷ್ಟು ಗೋಣಿ ಚೀಲದ ಪ್ಯಾಕಿಂಗ್ ಸಾಕು ಎಂಬ ಜೆಪಿಎಂ ಕಾಯ್ದೆಯ ನಿಯಮವನ್ನು ಹಾಗೇ ಉಳಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್ ನಿಲ್ದಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.