ಕಾರ್ಮಿಕರು ಮುಷ್ಕರ ನಡೆಸಿದರೆ ಕ್ರಮ


Team Udayavani, Nov 23, 2018, 10:57 AM IST

ray-2.jpg

ಹಟ್ಟಿ ಚಿನ್ನದ ಗಣಿ: ಹೊಸ ವೇತನ ಒಪ್ಪಂದ ಜಾರಿಗಾಗಿ ಒತ್ತಾಯಿಸಿ ಟಿಯುಸಿಐ ನೇತೃತ್ವದ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘವು ನ.23ರಂದು ಹಮ್ಮಿಕೊಂಡಿರುವ ಮುಷ್ಕರ ಕಾನೂನು ಬಾಹಿರವಾಗಿದೆ. ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸಿ ಉತ್ಪಾದನೆಗೆ ಧಕ್ಕೆ ಉಂಟಾದರೆ ಕಂಪನಿ ಆಡಳಿತ ಮಂಡಳಿ ತನ್ನ ಸ್ಥಾಯಿ ಆದೇಶದ ಪ್ರಕಾರ ಕಾರ್ಮಿಕರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲವೆಂದು ಕಂಪನಿ ಮುಖ್ಯ ಆಡಳಿತಾಧಿಕಾರಿ ಡಾ| ಕೆ. ಜಗದೀಶ ನಾಯ್ಕ
ಎಚ್ಚರಿಸಿದ್ದಾರೆ.

ಗುರುವಾರ ಕಂಪನಿ ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2016ರ ಮಾರ್ಚಗೆ ಅಂತ್ಯಗೊಂಡ ವೇತನ ಒಪ್ಪಂದ ಜಾರಿಗೆ ಆಡಳಿತ ಮಂಡಳಿ ಉಪ ಸಮಿತಿ ಮೂಲಕ ಹಗಲಿರುಳು ಅವಿರತ ಶ್ರಮದಿಂದ ಕಾರ್ಯೋನ್ಮುಖವಾಗಿದೆ. ನ.9ರಂದು 14 ದಿನದ ನೋಟಿಸ್‌ನ್ನು ಕಾರ್ಮಿಕ ಸಂಘ ನೀಡಿದೆ. ಆದರೆ ಕಂಪನಿ ಕಾರ್ಮಿಕ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಅವರ ಹೋರಾಟಕ್ಕೆ
ಅರ್ಥವಿರುತ್ತಿತ್ತು, ಆದರೆ ನಿರಂತರ ಪ್ರಯತ್ನದಲ್ಲಿದ್ದಾಗ್ಯೂ ಕೂಡಾ ಈ ರೀತಿ ಮುಷ್ಕರಕ್ಕೆ ಮುಂದಾಗುವುದು ಸರಿಯಲ್ಲ ಎಂದರು.

ಪಟ್ಟು ಸರಿಯಲ್ಲ: ದ್ವಿಪಕ್ಷೀಯ ಮಾತುಕತೆ ನಡೆದಿದೆ. ನ.27ಕ್ಕೆ ಉಪ ಪ್ರಾದೇಶಿಕ ಕಾರ್ಮಿಕ ಆಯುಕ್ತರು ಕಂಪನಿಗೆ ಆಗಮಿಸುತ್ತಿದ್ದು, ಕಂಪನಿ ಅಧ್ಯಕ್ಷರಾದ ಗಣಿ ಸಚಿವ ರಾಜಶೇಖರ ಪಾಟೀಲ ಹುಮನಾಬಾದ್‌ ಅವರು ಶಾಸಕರ ಮೂಲಕ ಸಂಧಾನಕ್ಕೆ ಕ್ಷೇತ್ರದ ಶಾಸಕರನ್ನು ಕರೆಸಿ ಮಾತುಕತೆ ನಡೆಸಿದರೂ ಸಹಿತ ಕಾರ್ಮಿಕ ಸಂಘ ಮಾತು ಕೇಳುತ್ತಿಲ್ಲ. ಗಣಿ ಆಡಳಿತ ವರ್ಗವು ಸದಾಕಾಲ ಕಾರ್ಮಿಕರ ಸಮಸ್ಯೆ ಕುರಿತು ಚರ್ಚೆಗೆ ಸಿದ್ಧವಿದೆ ಆದರೆ ಕಾರ್ಮಿಕ ಸಂಘಕ್ಕೆ ಇದು ಬೇಕಿಲ್ಲ. 

ಮುಷ್ಕರ ನೋಟಿಸ್‌ ನೀಡಿದ ಮೇಲೆ ನಾಲ್ಕು ಬಾರಿ ತುಕತೆ ನಡೆಸಿದರೂ ಸಹಿತ ಮುಷ್ಕರ ಹಿಂಪಡೆಯಲು ಒಪ್ಪಿಲ್ಲ. ಲಿಖೀತ ಭರವಸೆಗೆ ಪಟ್ಟು ಹಿಡಿದಿರುವುದು ಸರಿಯಲ್ಲ. ಕಂಪನಿ ನಿಯಮದ ಪ್ರಕಾರ ಉಪ ಸಮಿತಿ ಒಪ್ಪಿದ ನಂತರ ಹಣಕಾಸಿನ ಅನುಮೋದನೆ ಪಡೆಯಬೇಕು, ನಂತರ ಜಾರಿಯಾಗಬೇಕು. ಇದು ಒಂದೆರಡು ದಿನದಲ್ಲಿ ಆಗುವುದಲ್ಲ. ಹೀಗಿರುವಾಗ ಹೇಗೆ ಬರವಣಿಗೆಯಲ್ಲಿ ಕೊಡಲು ಸಾಧ್ಯ ಎಂದು ಪ್ರಶ್ನಿಸಿದ ಅವರು, ಕಾರ್ಮಿಕರು ತಾಳ್ಮೆಯಿಂದ ಇರಬೇಕು. ಮುಷ್ಕರದಿಂದ ಕಂಪನಿ ಬೆಳವಣಿಗೆ ಹಾಗೂ ಉತ್ಪಾದಕತೆಗೆ ಮಾರಕವಾಗಲಿದೆ ಎಂದರು.

20ರಷ್ಟು ಹೆಚ್ಚಳ: ಕಂಪನಿ ಈಗ ಅನುಮೋದನೆ ನೀಡಿದರೆ ಎಷ್ಟು ಪ್ರತಿಶತ ದೊರೆಯಲಿದೆ ಎಂಬ ಪತ್ರಕರ್ತರ ಪ್ರಶ್ನೆಗೆ
ಉತ್ತರಿಸಿದ ಪ್ರಧಾನ ವ್ಯವಸ್ಥಾಪಕ (ಗಣಿ) ಪ್ರಕಾಶ ಬಹದ್ದೂರ್‌ ಒಟ್ಟಾರೆ ವೇತನಕ್ಕೆ ಶೇ.20 ಹೆಚ್ಚಳವಾಗಲಿದೆ. ಉತ್ತಮ ವೇತನ ಒಪ್ಪಂದಕ್ಕೆ ಕಾರ್ಮಿಕ ಸಂಘ ಸಹಕರಿಸಬೇಕೆಂದು ಮನವಿ ಮಾಡಿದರು.

ಪಿಎಸ್‌ಐ ಗಂಗಪ್ಪ ಬುರ್ಲಿ, ಅಧಿಕಾರಿಗಳಾದ ರಮೇಶ, ಸುರೇಶ, ಜಗನಮೋಹನ್‌, ದಾಮೋದರರಾವ್‌ ಇದ್ದರು.

ಟಾಪ್ ನ್ಯೂಸ್

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.