ಕಡತ ವಿಲೇವಾರಿಗೆ ನಿರಾಸಕ್ತಿ


Team Udayavani, Nov 23, 2018, 3:05 PM IST

cta-1.jpg

ಚಿತ್ರದುರ್ಗ: ದೇಶಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟು ಪರಕೀಯರಿಂದ ಅಹಿಂಸಾತ್ಮಕ ಹೋರಾಟದ ಮೂಲಕ ಸ್ವಾತಂತ್ರ್ಯಾ ತಂದು ಕೊಟ್ಟ ಮಹಾನ್‌ ವ್ಯಕ್ತಿ ಮಹಾತ್ಮ ಗಾಂಧೀಜಿ ಎಂದು ಸಂಸದ ಬಿ.ಎನ್‌. ಚಂದ್ರಪ್ಪ ಹೇಳಿದರು.

ನಗರದ ತರಾಸು ರಂಗ ಮಂದಿರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ “ಪಾಪು ಬಾಪು’ ಗಾಂಧಿ ರಂಗಪಯಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗಾಂಧೀಜಿ ಯವರ ಬಾಲ್ಯಾವಸ್ಥೆಯಲ್ಲಿ ಭಾರತೀಯ ಸಂಸ್ಕೃತಿ ವಿಶೇಷವಾಗಿ ಶ್ರವಣ ಮತ್ತು ಹರಿಶ್ಚಂದ್ರ ಮಹಾರಾಜರ ಕಥೆಗಳು ಪ್ರಭಾವ ಬೀರಿದವು. ಧರ್ಮ, ಸತ್ಯ, ಪ್ರಮಾಣಿಕತೆಯೊಂದಿಗೆ ಸರಳ ಜೀವನ ನಡೆಸುವುದನ್ನು ರೂಢಿಸಿಕೊಂಡರು. ಸತ್ಯ ಹರಿಶ್ಚಂದ್ರನ ಕಥೆ ಬಾಲಕ ಗಾಂಧಿಯ ಮನವನ್ನು ಪದೇ ಪದೇ ಕಾಡುತ್ತಿತ್ತು. ಅದು ತಮ್ಮ ಮನದಲ್ಲಿ ಅಳಿಸಲಾಗದ ಛಾಪು ಒತ್ತಿತೆಂದು ಗಾಂಧೀಜಿ ಯವರು ತಮ್ಮ ಆತ್ಮಚರಿತ್ರೆಯಲ್ಲಿ ಬರೆದುಕೊಂಡಿದ್ದಾರೆ. ಆ ಕಥೆ ನನ್ನನ್ನು ಸದಾ ಕಾಡಿಸಿದ ಪರಿಣಾಮ ಎಷ್ಟೋ ಬಾರಿ ಹರೀಶ್ಚಂದ್ರನಂತೆ ವರ್ತಿಸುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ.

ಸತ್ಯ ಮತ್ತು ಪ್ರೇಮದಂತಹ ಸರ್ವೋತ್ಛ ಮೌಲ್ಯಗಳೊಂದಿಗೆ ಗಾಂಧೀಜಿಯವರು ಗುರುತಿಸಿಕೊಂಡಿದ್ದರಿಂದ ಅವರಿಂದ
ಮಹಾನ್‌ ಸಾಧನೆ ಸಾಧ್ಯವಾಗಿದೆ ಎಂದರು. ಸರಳವಾಗಿ ಬದುಕಿದ ಗಾಂಧೀಜಿ, ತಮ್ಮ ಕೆಲಸಗಳನ್ನು ತಾವೇ ಮಾಡಿಕೊಳ್ಳಬೇಕು, ಪರರ ಮೇಲೆ ಅವಲಂಬನೆ ಬಿಟ್ಟು ಸ್ವತಂತ್ರ ಬದುಕು ಕಟ್ಟಿಕೊಳ್ಳಿ ಎಂಬ ಸಂದೇಶ ನೀಡಿದ್ದಾರೆ. ಮಕ್ಕಳು ತಮ್ಮ ಚಿಕ್ಕ ವಯಸ್ಸಿನಲ್ಲಿ ಗಾಂಧಿ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ಆದರೆ ಇಂದಿನ ದಿನಗಳಲ್ಲಿ ಗಾಂಧೀಜಿಯವರ ಮಹತ್ವ ಕಡಿಮೆಯಾಗುತ್ತಿರುವುದು ಬೇಸರದ ಸಂಗತಿ ಎಂದು ವಿಷಾದಿಸಿದರು.

ಗಾಂಧೀಜಿಯವರ ಉತ್ತಮ ವ್ಯಕ್ತಿತ್ವ ಹಾಗೂ ಸರಳ ಜೀವನ ಶೈಲಿಯನ್ನು ಜನರು ಹಾಸ್ಯ ಮಾಡುತ್ತಿರುವುದು ಮನಸ್ಸಿಗೆ
ನೋವುಂಟು ಮಾಡುತ್ತದೆ. ಭ್ರಷ್ಟಾಚಾರ ವಿರೋಧ ಮಾಡುವವರು ಮೊದಲು ಸರಿಯಾಗಿ ಇರಬೇಕು. ಇಲ್ಲದೇ ಹೋದರೆ “ಮಾಡುವುದು ಆಚಾರ ಮನೆ ಮುಂದೆ ಬೃಂದಾವನ’ ಎಂಬ ಗಾದೆ ನೆನಪಾಗುತ್ತದೆ ಎಂದರು.

ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿಯವರಿಗೆ ಎರಡು ಬಾರಿ ಪ್ರಧಾನಮಂತ್ರಿ ಆಗುವ ಯೋಗ ಒದಗಿ ಬಂದಿತ್ತು. ಆದರೆ ಅದನ್ನು ನಯವಾಗಿ ತಿರಸ್ಕರಿಸಿದ ಅವರು ದೇಶದ ಶ್ರೇಷ್ಠ ಆರ್ಥಿಕ ತಜ್ಞ ಡಾ| ಮನಮೋಹನ ಸಿಂಗ್‌ ಅವರನ್ನು ಪ್ರಧಾನಿಯನ್ನಾಗಿ ಮಾಡಿದರು. ಇಂದು ಗ್ರಾಮ ಪಂಚಾಯತ್‌ ಅಧ್ಯಕ್ಷ ಹುದ್ದೆಯನ್ನೇ ಬಿಡಲು ಸಿದ್ಧರಿಲ್ಲದೆ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ಇತಿಹಾಸ ಸಂಶೋಧಕ ಡಾ| ಬಿ. ರಾಜಶೇಖರಪ್ಪ, ವಾರ್ತಾಧಿಕಾರಿ ಧನಂಜಯಪ್ಪ ಮತ್ತಿತರರು ಇದ್ದರು.

ಕೊನೇ ದಿನ ಜಾಸ್ತಿ “ಕಡತ ವಿಲೇವಾರಿ ಸಪ್ತಾಹ’ ನವೆಂಬರ್‌ 13 ರಿಂದ 18ರವರೆಗೆ ನಡೆದಿದ್ದು, ನ. 13 ಮತ್ತು 14 ರಂದು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಶೂನ್ಯ ಸಾಧನೆ ಮಾಡಲಾಗಿದೆ. 15 ರಂದು 883 ಕಡತ, 16 ರಂದು 1113 ಕಡತ, 17 ರಂದು 885 ಕಡತ, ಕೊನೆ ದಿನವಾದ ನ. 18 ರಂದು 2034 ಕಡತಗಳ ವಿಲೇ ಮಾಡಲಾಗಿದೆ.

ಪ್ರತಿ ದಿನ ಬೆಳಿಗ್ಗೆ 9 ಗಂಟೆಗೆ ಸಿಬ್ಬಂದಿಗಳು ಆಗಮಿಸಿ ಕೆಲಸ ಮಾಡಿ ಬಾಕಿ ಕಡತಗಳ ವಿಲೇ ಮಾಡಿದ್ದಾರೆ. ಕೆಲವು ಕಡತಗಳು ನ್ಯಾಯಾಲಯದಲ್ಲಿವೆ. ಸರ್ವೆ ಇಲಾಖೆಯಲ್ಲಿ ಬಹಳ ದಿನಗಳಿಂದ ಕಡತಗಳು ಬಾಕಿ ಇವೆ. ಕಡತ ವಿಲೇವಾರಿ ಸಪ್ತಾಹದ ಹೊರತಾಗಿಯೂ ಕಡತಗಳನ್ನು ಬಾಕಿ ಉಳಿಸಬೇಡಿ ಎಂದು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
 ಆರ್‌. ಗಿರೀಶ್‌, ಜಿಲ್ಲಾಧಿಕಾರಿ.

ಟಾಪ್ ನ್ಯೂಸ್

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.