ಭೂಮಿ ಸಕ್ರಮಗೊಳಿಸಿ ಪಟ್ಟಾ ನೀಡಲು ಆಗ್ರಹ


Team Udayavani, Nov 23, 2018, 5:42 PM IST

hav-1.jpg

ಹಾವೇರಿ: ಬಗರ್‌ ಹುಕುಂ ಸಾಗುವಳಿ ಭೂಮಿಯನ್ನು ಸಕ್ರಮಗೊಳಿಸಿ, ಪಟ್ಟಾ ನೀಡಲು ಆಗ್ರಹಿಸಿ ಕರ್ನಾಟಕ ಭೂ ಹಕ್ಕುದಾರ ವೇದಿಕೆ, ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕ, ನವೋದಯ ಶಿಕ್ಷಣ ಪರಿಸರ ಅಭಿವೃದ್ಧಿ ಸೇವಾ ಸಂಸ್ಥೆಯ ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸ್ಥಳೀಯ ಕಾಗಿನಲೆ ರಸ್ತೆಯ ಮುರುಘರಾಜೇಂದ್ರ ಮಠದ ಆವರಣದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪಿ.ಬಿ. ರಸ್ತೆ ಮಾರ್ಗವಾಗಿ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸಮಾವೇಶಗೊಂಡಿತು. ನಂತರ ಪ್ರತಿಭಟನಾ ರೈತರು ಮಾನವ ಸರಪಳಿ ನಿರ್ಮಿಸಿ ಕೆಲಹೊತ್ತು ರಸ್ತೆ ಬಂದ್‌ ಮಾಡಿ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಾತನಾಡಿದ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ ಬಾರ್ಕಿ, ಸುಮಾರು 40 ವರ್ಷಗಳಿಂದ ಅರಣ್ಯ ಭೂಮಿಯನ್ನು ರೈತರು ಸಾಗುವಳಿ ಮಾಡುತ್ತ ಬಂದಿದ್ದು ರೈತರಿಗೆ ಸಂಬಂಧಿಸಿದ ಇಲಾಖೆಗಳಿಂದ ಈ ವರೆಗೂ ಸಾಗುವಳಿ ಚೀಟಿ, ಭೂಮಿ ಹಿಡುವಳಿ ಹಕ್ಕು ಪತ್ರವನ್ನು ನೀಡಿಲ್ಲ. ಹಕ್ಕುಪತ್ರ ವಿತರಣೆಗೆ ಫಾರ್ಮ್ ನಂ. 50 ಮತ್ತು 53ರಲ್ಲಿ ಅರಣ್ಯ ಕಾಯ್ದೆ 2006ರ ಅಡಿಯಲ್ಲಿ ಅರ್ಜಿಗಳನ್ನು ಸಲ್ಲಿಸಿದರೂ ಹಕ್ಕುಪತ್ರ ನೀಡಿಲ್ಲ. ಹೀಗಾಗಿ ಹಲವಾರು ಕುಟುಂಬಗಳು ತೊಂದರೆಯನ್ನು ಅನುಭವಿಸುತ್ತಿವೆ. ಕೆಲ ಕುಟುಂಬಗಳು ಜೀವನ ನಿರ್ವಹಣೆ ಮಾಡಲಾಗದೇ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಭೂ ಹಕ್ಕುದಾರ ವೇದಿಕೆ ಜಿಲ್ಲಾಧ್ಯಕ್ಷ ರವೀದ್ರಗೌಡ ಪಾಟೀಲ ಮಾತನಾಡಿ, ಬಗರ ಹುಕುಂ ರೈತರ ಸಮಸ್ಯೆಗಳನ್ನು ಬಗೆಹರಿಸಬೇಕು. ಅರ್ಜಿ ಕೊಟ್ಟ ಫಲಾನುಭವಿಗಳಿಗೆ ಪಟ್ಟಾ ವಿತರಣೆ ಮಾಡಬೇಕು. ಈಗಾಗಲೇ ಪಟ್ಟಾ ಪಡೆದಿರುವ ರೈತರಿಗೆ ಪಹಣಿ ಪತ್ರಿಕೆ ನೀಡಬೇಕು. ಸರ್ಕಾರಿ ಸಾಲ ಮತ್ತು ಬ್ಯಾಂಕ್‌ ಸಾಲ ಸೌಲಭ್ಯ ಸಿಗುವಂತೆ ಮಾಡಬೇಕು. ಬಗರ್‌ಹುಕುಂ ಸಾಗುವಳಿ ಭೂಮಿಯನ್ನು ಸರ್ವೇ ಇಲಾಖೆಯಿಂದ ಹದ್ದುಬಸ್ತ್ ಮಾಡಬೇಕು. ಬಗರ್‌ಹುಕುಂ ರೈತರನ್ನು ಒಳಗೊಂಡ ಭೂ ಮಾಪಕ ಅಧಿಕಾರಿಗಳು ಹಾಗೂ ತಾಲೂಕು ತಹಸೀಲ್ದಾರ ಹಾಗೂ ಶಾಸಕರ ಅಧ್ಯಕ್ಷತೆಯಲ್ಲಿ ಬಗರ್‌ ಹುಕುಂ ಸಮಿತಿ ರಚಿಸಬೇಕು, ತಾಲೂಕು ಮಟ್ಟದಲ್ಲಿ ಸಭೆ ಕರೆಯಬೇಕು ಎಂದು ಒತ್ತಾಯಿಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಎಚ್‌.ಎಫ್‌. ಅಕ್ಕಿ, ಎಂ. ಕರಿಬಸಪ್ಪ, ಖಂಡೆಪ್ಪ ನೆಗಳೂರು, ಬಸವರಾಜ ಕನ್ನಮ್ಮನವರ, ರಾಜಪ್ಪ.ಡಿ, ಹಾಲಪ್ಪ ಎಚ್‌., ರಾಜು ಗುಂಜಾಳ, ನಿಲಪ್ಪ ಹರಿಜನ, ತಿಮ್ಮಣ್ಣ ಸವಣೂರ, ಹೇಮಣ್ಣ ಸಾಲಿ, ನಾಗಪ್ಪ ನರೇಗಲ್ಲ, ಹನುಮಂತ ಸಾಲಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.