ಗುರುನಾನಕ್‌ ಜನ್ಮೋತ್ಸವ: ವೈಭವದ ಮೆರವಣಿಗ

Team Udayavani, Nov 24, 2018, 10:32 AM IST

gul-1.jpg

ಬೀದರ: ಸಿಖ್‌ ಧರ್ಮಗುರು ಗುರುನಾನಕ್‌ ದೇವ ಮಹಾರಾಜರ 549ನೇ ಜನ್ಮೋತ್ಸವವನ್ನು ಶುಕ್ರವಾರ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಪಟಾಕಿಗಳ ಬೆಳಕಿನ ಚಿತ್ತಾರ ನೋಡುಗರ ಗಮನ ಸೆಳೆಯಿತು. ನೀಲಿ ಮತ್ತು ಹಳದಿ ಧ್ವಜಗಳನ್ನು ಹಿಡಿದುಕೊಂಡು ಪ್ರದರ್ಶಿಸಿದ ಪಾರಂಪರಿಕ ಕಲಾ ಪ್ರದರ್ಶನಗಳು ನೋಡುಗರ ಗಮನ ಸೆಳೆದವು. “ಬೋಲೆ ಸೋನಿಹಾಲ್‌, ಸಶ್ರೀ ಅಕಾಲ್‌’ ಎನ್ನುವ ಜಯಘೋಷಗಳು ಮೆರವಣಿಗೆಯಲ್ಲಿ ಕೇಳಿಬಂದವು. ಜಯಂತಿ ನಿಮಿತ್ತ ನಡೆದ ಮೆರವಣಿಗೆಯ ಅಭೂತಪೂರ್ವ ಕ್ಷಣಕ್ಕೆ ದೇಶ-ವಿದೇಶದಿಂದ ಆಗಮಿಸಿದ ಸಾವಿರಾರು ಸಿಖ್‌ ಧರ್ಮೀಯರು ಸಾಕ್ಷಿಯಾದರು.

ಸಂಜೆ 4 ಗಂಟೆಗೆ ಆರಂಭವಾದ ಮೆರವಣಿಗೆ ಸಂಜೆ 7ರ ವರೆಗೆ ನಡೆಯಿತು. ಸಿಖ್‌ ಧಾರ್ಮಿಕ ಮುಖಂಡರು ನಿಶಾನೆ ಸಾಹೇಬ್‌ ಗಳೆಂಬ ನೀಲಿ ಮತ್ತು ಹಳದಿ ಧ್ವಜ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ವಿಶೇಷ ಅಲಂಕೃತ ವಾಹನದಲ್ಲಿ ಗುರುನಾನಕರ ಭಾವಚಿತ್ರ ಕಣ್ಮನ ಸೆಳೆಯಿತು. ಸಿಖ್‌ ಧರ್ಮಿಯರು ಭಕ್ತಿ-ಭಾವದಿಂದ ಭಾಗಿಯಾಗಿ ಹಾಡಿ, ಕುಣಿದು ಸಂಭ್ರಮಿಸಿದರಲ್ಲದೇ ಧಾರ್ಮಿಕ ಗ್ರಂಥ ಪಠಣ ಮಾಡಿದರು. 

ಮೆರವಣಿಗೆ ಮಾರ್ಗದುದ್ದಕ್ಕೂ ಜಯ ಘೋಷಣೆಗಳು ಮುಗಿಲು ಮುಟ್ಟಿದವು. ಅಲಂಕೃತ ಕುದುರೆಗಳ ಮೇಲೆ ಸಿಖ್‌ ಧರ್ಮೀಯರು ಪಾರಂಪರಿಕ ತಲವಾರ್‌ ಮತ್ತು ಚಕ್ರ ತಿರುಗಿಸುವುದು, ಕೈಯಲ್ಲಿ ತಲವಾರ್‌ ಹಿಡಿದು ಓಡುವುದು ನೋಡುಗರನ್ನು ಸೆಳೆಯಿತು. ಬಾಲಕ ಮತ್ತು ಬಾಲಕಿಯರು ತಲವಾರ್‌ ತಿರುಗಿಸಿ ಸೈ ಎನಿಸಿಕೊಂಡರು.

ಐತಿಹಾಸಿಕ ಗುರುದ್ವಾರದಿಂದ ಆರಂಭವಾದ ಮೆರವಣಿಗೆ ಮಡಿವಾಳ ವೃತ್ತ, ಕರಿಯಪ್ಪ ವೃತ್ತ, ಅಂಬೇಡ್ಕರ್‌ ವೃತ್ತ, ಶಿವಾಜಿ ವೃತ್ತ, ಹರಳಯ್ಯ ವೃತ್ತದ ಮೂಲಕ ಸಾಗಿ ಪುನಃ ಗುರುನಾನಕ ದೇವಸ್ಥಾನಕ್ಕೆ ಆಗಮಿಸಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಿಖ್‌ ಬಾಂಧವರಿಗಾಗಿ ವಿವಿಧ ಸಂಘಟನೆಗಳಿಂದ ರಸ್ತೆಯುದ್ದಕ್ಕೂ ಕುಡಿಯುವ ನೀರು, ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.

ಜಯಂತಿ ನಿಮಿತ್ತ ಗುರುದ್ವಾರದಲ್ಲಿ ರಾತ್ರಿಯಿಡಿ ಗುರುನಾನಕ ದೇವ ಪ್ರಬಂಧಕ ಕಮಿಟಿ ವತಿಯಿಂದ ವಿವಿಧ ಧಾರ್ಮಿಕ ಚಟುವಟಿಕೆಗಳು ನಡೆದವು. ವಿಶೇಷ ಗ್ರಂಥ ಪಠಣ, ಭಜನೆ ಮತ್ತು ಕೀರ್ತನೆಗಳು ಜರುಗಿದವು. ಧಾರ್ಮಿಕ ಮುಖಂಡರು ವಿಧ್ಯುಕ್ತ ಚಾಲನೆ ನೀಡಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಬೆಂಗಳೂರು, ನಾಂದೇಡ್‌, ಉದಗೀರ, ಲಾತೂರ, ಪುಣೆ, ಹೈದ್ರಾಬಾದ ಸೇರಿದಂತೆ ವಿದೇಶದಿಂದಲೂ ಸಿಖ್‌ರು ಆಗಮಿಸಿದ್ದರು. ಜಯಂತಿ ನಿಮಿತ್ತ ಗುರುದ್ವಾರದಲ್ಲಿ ಸಾವಿರಾರು ಸಂಖ್ಯೆಯ ಭಕ್ತರು ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದರು. ಗುರುದ್ವಾರ ಪ್ರಬಂಧಕ ಕಮಿಟಿ ಅಧ್ಯಕ್ಷ ಬಲಬೀರಸಿಂಗ್‌, ಪ್ರಮುಖರಾದ ಮನಪ್ರಿತಸಿಂಗ್‌ ಬಂಟಿ, ದರ್ಬಾಸಿಂಗ್‌, ಪ್ರದೀಪಸಿಂಗ್‌, ತೇಜಪಾಲಸಿಂಗ್‌, ದರ್ಶನಸಿಂಗ್‌, ಗುರುಪ್ರಿತಸಿಂಗ್‌ ಮತ್ತಿತರ ಮುಖಂಡರು  ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.