ನಾಗರಿಕರ ಕಾಡಿದ ಚಳಿಗಾಳಿ ಸಹಿತ ಮಳೆ
Team Udayavani, Nov 24, 2018, 11:40 AM IST
ಬೆಂಗಳೂರು: ಬಂಗಾಳಕೊಲ್ಲಿ ಹಾಗೂ ತಮಿಳುನಾಡು ಕಾರವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಶುಕ್ರವಾರವಿಡಿ ಚಳಿಗಾಳಿಯೊಂದಿಗೆ ಸುರಿದ ತುಂತುರು ಮಳೆ ಸುರಿದ್ದು, ಕೆಲವು ಕಡೆಗಳಲ್ಲಿ ಮರಗಳು ಧರೆಗುರುಳಿವೆ.
ಗೆಳೆಯರ ಬಳಗದ ರಾಜ್‌ಕುಮಾರ್ ಸಭಾಂಗಣದ ಸಮೀಪ, ಸಂಜಯನಗರ ಹಾಗೂ ಜೆ.ಪಿ.ನಗರ, ಮಹದೇವಪುರ ಸೇರಿದಂತೆ ಕೆಲವು ಕಡೆಗಳಲ್ಲಿ ಮರಗಳು ಧರೆಗುರುಳಿವೆ. ಇದರಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸದಿದ್ದರೂ, ರಸ್ತೆಯಲ್ಲಿ ಬಿದ್ದಿದ್ದರಿಂದ ಕೆಲಕಾಲ ತೀವ್ರ ಸಂಚಾರ ದಟ್ಟಣೆ ಉಂಟಾಗಿತ್ತು. ದೂರುಗಳು ಬಂದ ಕೂಡಲೇ ಸ್ಥಳಕ್ಕೆ ಧಾವಿಸಿದ ಪಾಲಿಕೆಯ ಸಿಬ್ಬಂದಿ ಮರಗಳನ್ನು ತೆರವುಗೊಳಿಸಿದ್ದಾರೆ.
ವಾಯುಭಾರ ಕುಸಿತದ ಪರಿಣಾಮ ನಗರದಲ್ಲಿ ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಹಗಲಿನಲ್ಲಿ ಬಹುತೇಕ ಅವಧಿ ಮೋಡ ಕವಿದ ವಾತಾವರಣವಿರುತ್ತಿದೆ. ಮೋಡ ಕವಿದ ವಾತಾವರಣದಿಂದಾಗಿ ನಗರದಲ್ಲಿ ಉಷ್ಣಾಂಶ ಕಡಿಮೆಯಾಗುತ್ತಿದ್ದು, ಕೆಲವು ಭಾಗಗಳಲ್ಲಿ ತೀವ್ರ ಚಳಿಇಯ ಅನುಭವವಾಗುತ್ತಿದೆ.
ನಗರದಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಮುಂದುವರಿದರೆ ಮಧ್ಯಾಹ್ನ ವೇಳೆಗೆ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಮಳೆಯೊಂದಿಗೆ ಬೀಸಿದ ಚಳಿಗಾಳಿಗೆ ನಡುಗುವಂತಾಗಿತ್ತು. ಸಾಮಾನ್ಯ ದಿನಗಳಲ್ಲಿ ಬೆಂಗಳೂರಿನಲ್ಲಿ 28-29 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತದೆ. ಆದರೆ, ಕಳೆದ ಮೂರು ದಿನಗಳಿಂದ ನಗರದಲ್ಲಿ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಹೊಸ ಸೇರ್ಪಡೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.