ಶೀಘ್ರವೇ ನಿಮ್ಮ ಕಸ ನಿಮ್ಮ ಜವಾಬ್ದಾರಿ ಕಾನೂನು

Team Udayavani, Nov 24, 2018, 11:58 AM IST

m5-shigra.jpg

ಮೈಸೂರು: ದೇಶದ ಸ್ವತ್ಛನಗರಿ ಎಂಬ ಹೆಗ್ಗಳಿಕೆ ಪಡೆದಿರುವ ಸಾಂಸ್ಕೃತಿಕ ನಗರಿ ಮೈಸೂರಿನ ಸ್ವತ್ಛತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮೈಸೂರು ಮಹಾನಗರ ಪಾಲಿಕೆ “ನಿಮ್ಮ ಕಸ ನಿಮ್ಮ ಜವಾಬ್ದಾರಿ’ ಕಾನೂನು ಜಾರಿಗೆ ತರಲು ಮುಂದಾಗಿದೆ. ಆ ಮೂಲಕ ದೊಡ್ಡ ಪ್ರಮಾಣದಲ್ಲಿ ತ್ಯಾಜ್ಯ ಉತ್ಪಾದನೆ ಮಾಡುವವರು ಮುಂದಿನ ದಿನಗಳಲ್ಲಿ ತಾವೇ ತ್ಯಾಜ್ಯ ಸಂಸ್ಕರಣೆ ಮಾಡುವ ಜವಾಬ್ದಾರಿ ವಹಿಸಿಕೊಳ್ಳಬೇಕಿದೆ. 

ನಿತ್ಯ 400 ಟನ್‌ ತ್ಯಾಜ್ಯ: ನಗರದ ಸ್ವತ್ಛತೆ ಕಾಪಾಡುವಲ್ಲಿ ನಗರ ಪಾಲಿಕೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದರೂ, ನಗರದ ಹಲವು ಕಡೆಗಳಲ್ಲಿ ಇಂದಿಗೂ ಕಸದ ಸಮಸ್ಯೆ ಇದೆ. ಪ್ರಸ್ತುತ ಮೈಸೂರಿನಲ್ಲಿ ಪ್ರತಿದಿನ 400 ಟನ್‌ ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, ಇದರಲ್ಲಿ ಕೇವಲ 200 ಟನ್‌ ತ್ಯಾಜ್ಯವನ್ನು ಮಾತ್ರ ಸಂಸ್ಕರಣೆ ಮಾಡಲಾಗುತ್ತಿದೆ.  ಬಾಕಿ ಉಳಿಯುವ 200 ಟನ್‌ ತ್ಯಾಜ್ಯವನ್ನು ಸೂಯೇಜ್‌ಫಾರಂನಲ್ಲಿ ಸಂಗ್ರಹಿಸಲಾಗುತ್ತಿದೆ.

ಇದರಿಂದ ಸುಯೇಜ್‌ ಫಾರಂನಲ್ಲಿ ಕಸದರಾಶಿ ಬೆಟ್ಟದಂತೆ ಬೆಳೆಯುತ್ತಿದೆ. ಇದು ಸೂಯೇಜ್‌ ಫಾರಂ ಸುತ್ತಮುತ್ತಲ ಬಡಾವಣೆಗಳಲ್ಲಿ ವಾಸ ಮಾಡುತ್ತಿರುವ ಜನರ ನೆಮ್ಮದಿಯನ್ನು ಕೆಡಿಸುವ ಜತೆಗೆ ನಗರದ ಅಂದವನ್ನು ಹಾಳು ಮಾಡುತ್ತಿದೆ. ಈ ಎಲ್ಲಾ ಕಾರಣದಿಂದ ಸೂಯೇಜ್‌ ಫಾರಂಗೆ ಬರುತ್ತಿರುವ ತ್ಯಾಜ್ಯದ ಪ್ರಮಾಣವನ್ನು ಕಡಿಮೆ ಮಾಡಿ ನಗರದಲ್ಲಿ ಸ್ವತ್ಛತಾ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲು ಪಾಲಿಕೆ ಮುಂದಾಗಿದೆ.

ಇದಕ್ಕಾಗಿ ನಗರದಲ್ಲಿ ದೊಡ್ಡ ಪ್ರಮಾಣದಲ್ಲಿ ತ್ಯಾಜ್ಯ ಉತ್ಪಾದನೆ ಮಾಡುವವರು ತಾವು ಉತ್ಪಾದಿಸುವ ತ್ಯಾಜ್ಯವನ್ನು ತಾವೇ ಸಂಸ್ಕರಣೆ ಮಾಡಿಕೊಳ್ಳಬೇಕೆಂಬ ಕಾನೂನು ಜಾರಿಗೆ ತರಲು ನಿರ್ಧರಿಸಲಾಗಿದೆ. ಸುಪ್ರೀಂ ಕೋರ್ಟ್‌ ನಿರ್ದೇಶನ ಪ್ರಕಾರ ಇಂಥದೊಂದು ಹೊಸ ಕಾನೂನು ಜಾರಿಗೊಳಿಸಲು ನಗರ ಪಾಲಿಕೆ ತಯಾರಿ ಮಾಡಿಕೊಂಡಿದೆ. ಈ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆ ಹಾಗೂ ಸಲಹೆ ಸೂಚನೆಗಳನ್ನು ಆಹ್ವಾನಿಸಿ, ಕೌನ್ಸಿಲ್‌ ಸಭೆಯ ಅನುಮೋದನೆ ಪಡೆದ ಬಳಿಕ ಮೈಸೂರು ಮಹಾನಗರ ಪಾಲಿಕೆಯ ಬೈಲಾದಲ್ಲಿ ಹೊಸ ಕಾನೂನನ್ನು ಅಳವಡಿಸಲಾಗುವುದು.

100 ಕೆ.ಜಿ. ಮೇಲ್ಪಟ್ಟು: ಪಾಲಿಕೆ ಜಾರಿಗೊಳಿಸಲು ಮುಂದಾಗಿರುವ ಹೊಸ ಕಾನೂನಿನ ಪ್ರಕಾರ ಪ್ರತಿದಿನ 100 ಕೆ.ಜಿ. ಮೇಲ್ಪಟ್ಟು ತ್ಯಾಜ್ಯ ಉತ್ಪಾದನೆ ಮಾಡುವವರನ್ನು ದೊಡ್ಡ ಪ್ರಮಾಣದ ತ್ಯಾಜ್ಯ ಉತ್ಪಾದಕರೆಂದು ಪರಿಗಣಿಸಲಾಗುತ್ತದೆ. ಪ್ರಮುಖವಾಗಿ ನಗರದ ಹೋಟೆಲ್‌ಗ‌ಳು, ರೆಸಾರ್ಟ್‌ಗಳು, ಬೃಹತ್‌ ಮಾಲ್‌ಗ‌ಳು, ಕಲ್ಯಾಣ ಮಂಟಪಗಳಲ್ಲಿ ದೊಡ್ಡ ಪ್ರಮಾಣದಲ್ಲಿ ತ್ಯಾಜ್ಯ ಉತ್ಪಾದನೆಯ ವ್ಯಾಪ್ತಿಗೆ ಸೇರಲಿವೆ.

ಇವರುಗಳು ಮುಂದಿನ ದಿನಗಳಲ್ಲಿ ತಮ್ಮ ಉದ್ದಿಮೆಯಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ತಾವೇ ವಿಲೇವಾರಿ ಮಾಡಬೇಕಿದೆ. ಇವರು ನಿತ್ಯವೂ ಸಂಗ್ರಹವಾಗುವ ತ್ಯಾಜ್ಯವನ್ನು ಸಂಗ್ರಹಿಸಿ ತಮ್ಮದೇ ಸ್ಥಳದಲ್ಲಿ ಗೊಬ್ಬರ ಅಥವಾ ಗೋಬರ್‌ ಗ್ಯಾಸ್‌ ತಯಾರಿಕಾ ಘಟಕವನ್ನು ಅಳವಡಿಸಿಕೊಳ್ಳಬೇಕಿದೆ. 

ಕಾನೂನು ಕ್ರಮ: ಪಾಲಿಕೆ ನಿರ್ಧಾರದಂತೆ ನಗರದಲ್ಲಿ ಹೊಸ ಕಾನೂನು ಜಾರಿಯಾದರೆ, ಕಾನೂನು ಅನುಷ್ಠಾನಗೊಂಡ ಬಳಿಕ ಪಾಲಿಕೆ ಅಧಿಕಾರಿಗಳು ದೊಡ್ಡ ಪ್ರಮಾಣದಲ್ಲಿ ತ್ಯಾಜ್ಯ ಉತ್ಪಾದಿಸುವವರ ಬಳಿ ತೆರಳಿ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಅಳವಡಿಸಿಕೊಳ್ಳುವಂತೆ ಮನವಿ ಮಾಡಿ, ಇದಕ್ಕಾಗಿ ಇಂತಿಷ್ಟು ಕಾಲಾವಕಾಶ ನೀಡಲಾಗುತ್ತದೆ.

ಆದರೂ ದೊಡ್ಡ ಪ್ರಮಾಣದಲ್ಲಿ ತ್ಯಾಜ್ಯ ಉತ್ಪಾದಕರು ಪಾಲಿಕೆ ಅಧಿಕಾರಿಗಳ ಮನವಿಗೆ ಪೂರಕವಾಗಿ ಸ್ಪಂದಿಸದಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲು ಪಾಲಿಕೆ ನಿರ್ಧರಿಸಿದೆ. ಆದ್ದರಿಂದ ಇನ್ನು ಮುಂದೆ ದೊಡ್ಡ ಪ್ರಮಾಣದ ತ್ಯಾಜ್ಯ ಉತ್ಪಾದಕರು ತಾಜ್ಯ ವಿಲೇವಾರಿ ಜವಾಬ್ದಾರಿಯನ್ನು ಪಾಲಿಕೆ ಹೆಗಲಿಗೆ ಹಾಕಲು ಅವಕಾಶಗಳಿರುವುದಿಲ್ಲ. 

ನಗರದಲ್ಲಿ ತ್ಯಾಜ್ಯ ನಿರ್ವಹಣೆಗಾಗಿ ಸಾಕಷ್ಟು ಸುಧಾರಣೆಗಳನ್ನು ತರಲಾಗುತ್ತಿದೆ. ಇದೀಗ ತ್ಯಾಜ್ಯ ನಿರ್ವಹಣೆಗೆ ಹೊಸ ಕಾನೂನು ಜಾರಿಗೆ ತರಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಶೀಘ್ರವೇ ಸಾರ್ವಜನಿಕರಿಗೆ ಮಾಹಿತಿ ನೀಡಿ, ಆಕ್ಷೇಪಣೆಗಳನ್ನು ಸ್ವೀಕರಿಸಿದ ನಂತರ ಕೌನ್ಸಿಲ್‌ ಸಭೆಯಲ್ಲಿ ಅನುಮೋದನೆ ಪಡೆದ ಬಳಿಕ, ಒಂದು ತಿಂಗಳಲ್ಲಿ ಹೊಸ ಕಾನೂನು ಜಾರಿಯಾಗಲಿದೆ. 
-ಡಾ.ನಾಗರಾಜ್‌, ನಗರ ಪಾಲಿಕೆ ಆರೋಗ್ಯಾಧಿಕಾರಿ.

* ಸಿ. ದಿನೇಶ್‌

ಟಾಪ್ ನ್ಯೂಸ್

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.