ರಾಜ್ ಸಮಾಧಿ ಬಳಿ ರೆಬೆಲ್ಸ್ಟಾರ್ ಸಮಾಧಿ;ಸಿಎಂ,ರಾಘಣ್ಣ ಹೇಳಿದ್ದೇನು?
Team Udayavani, Nov 25, 2018, 10:46 AM IST
ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಅವರ ಸಮಾಧಿ ಬಳಿಯಲ್ಲೇ ರೆಬೆಲ್ ಸ್ಟಾರ್ ಅಂಬರೀಶ್ ಅವರ ಅಂತಿಮ ವಿಧಿವಿಧಾನಗಳನ್ನು ನಡೆಸಿ ಸಮಾಧಿ ನಡೆಸಲು ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಬಗ್ಗೆ ಸ್ಪಷ್ಟ ನೆ ನೀಡಿದ್ದು, ರಾಜ್ ಕುಮಾರ್ ಅವರ ಸಮಾಧಿ ಎದುರುಗಡೆ ಇರುವ ಸರಕಾರಿ ಜಾಗದಲ್ಲಿ ಅಂಬರೀಶ್ ಅವರ ಸಮಾಧಿ ನಿರ್ಮಾಣ ಮಾಡುವುದಾಗಿ ತಿಳಿಸಿದ್ದಾರೆ.
ಎಡಭಾಗದಲ್ಲಿ ರಾಜ್ಕುಮಾರ ಅವರ ಸಮಾಧಿ ಇದ್ದರೆ , ಎದುರುಗಡೆ ಬಲಭಾಗದಲ್ಲಿ ರುವ ಒಂದುವರೆ ಎಕರೆ ಸರಕಾರಿ ಭೂಮಿಯಲ್ಲಿ ಅಂಬರೀಶ್ ಅವರ ಸಮಾಧಿ ನಿರ್ಮಾಣ ಮಾಡುತ್ತೇವೆ.ಇದರಿಂದ ರಾಜ್ ಸ್ಮಾರಕಕ್ಕೂ ಯಾವುದೇ ಅಡಚಣೆ ಆಗುವುದಿಲ್ಲ ಎಂದು ತಿಳಿಸಿದರು.
ತೀರ್ಮಾನ ಮಾಡಲು ನಾವ್ಯಾರು?
ರಾಘವೇಂದ್ರ ರಾಜ್ಕುಮಾರ್ ಅವರು ಅಂತಿಮ ದರ್ಶನಕ್ಕೆ ಆಗಮಿಸಿದ ವೇಳೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಇದೆಲ್ಲಾ ತೀರ್ಮಾನ ಮಾಡಲಿಕ್ಕೆ ನಾವು ಯಾರು ? ಸರಕಾರ, ಕಲಾವಿದರ ಸಂಘ ಏನು ತೀರ್ಮಾನ ಮಾಡುತ್ತದೆಯೋ ಅದಕ್ಕೆ ನಾವು ಬದ್ಧ ಎಂದಿದ್ದಾರೆ.
ಅಂಬರೀಶ್ ಅವರು ಚಿತ್ರರಂಗಕ್ಕೆ ತಂದೆಯ ಸಮಾನವಾಗಿದ್ದರು. ದಿನದ 24 ಗಂಟೆಯೂ ಚಿತ್ರ ರಂಗದ ಬಗ್ಗೆ ಯೋಚನೆ ಮಾಡುತ್ತಿದ್ದರು. ಅವರ ದೇಹ ಹೋಗಿರಬಹುದು ಆದರೆ ಆತ್ಮ ಸದಾ ನಮ್ಮೊಂದಿಗೆ ಇರುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.