ಅಂಬಿ ಪಾರ್ಥಿವ ಶರೀರದ ಅಂತಿಮ ಯಾತ್ರೆ, ಪೊಲೀಸ್ ಬಂದೋಬಸ್ತ್; Watch
Team Udayavani, Nov 26, 2018, 1:05 PM IST
ಬೆಂಗಳೂರು: ಮಾಜಿ ಸಚಿವ, ರೆಬೆಲ್ ಸ್ಟಾರ್ ಅಂಬರೀಷ್ (66ವರ್ಷ) ಪಾರ್ಥಿವ ಶರೀರದ ಅಂತಿಮ ಯಾತ್ರೆಯು ಹೂವಿಗಳಿಂದ ಅಲಂಕೃತಗೊಂಡ ವಿಶೇಷ ವಾಹನದಲ್ಲಿ ಕಂಠೀರವ ಕ್ರೀಡಾಂಗಣದಿಂದ ಕಂಠೀರವ ಸ್ಟುಡಿಯೋದವರೆಗೆ ಮೆರವಣಿಗೆ ಆರಂಭಗೊಂಡಿದೆ.
ವಾಹನಕ್ಕೆ ಪೂಜೆ ಸಲ್ಲಿಸುವ ಮೂಲಕ ಅಂತಿಮ ಯಾತ್ರೆ ಶುರುವಾಗಿತ್ತು. ಯಾತ್ರೆ ಕ್ರೀಡಾಂಗಣ ದಾಟಿದ ಕೂಡಲೇ ನೆರೆದಿದ್ದ ಅಭಿಮಾನಿಗಳು ಅಂಬಿ ಎಂದು ಉದ್ಘೋಷ ಮಾಡಿದರು.
ಯಾತ್ರೆಯ ಹಿಂಭಾಗದಲ್ಲಿ ಸ್ಯಾಂಡಲ್ ವುಡ್, ಕಾಲಿವುಡ್, ಟಾಲಿವುಡ್ ನ ನಟ, ನಟಿಯರು ತೆರೆದ ವಾಹನದಲ್ಲಿ ಅಭಿಮಾನಿಗಳಿಗೆ ವಂದಿಸುತ್ತಾ ಸಾಗುತ್ತಿದ್ದಾರೆ. ಮೆರವಣಿಗೆ ವೇಳೆ ಅಪಾರ ಸಂಖ್ಯೆಯ ಅಭಿಮಾನಿಗಳು, ಸಾರ್ವಜನಿಕರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ವೀಕ್ಷಿಸುತ್ತಿದ್ದಾರೆ.
ಸಿಐಡಿ ಜಂಕ್ಷನ್, ಬಸವೇಶ್ವರ್ ಸರ್ಕಲ್, ಯಶವಂತಪುರ ಫ್ಲೈ ಓವರ್ ನಿಂದ ಗೋರಗುಂಟೆ ಪಾಳ್ಯ, ಆರ್ ಎಂಸಿ ಯಾರ್ಡ್ ಠಾಣೆ , ಎಫ್ ಟಿಐನಿಂದ ಕಂಠೀರವ ಸ್ಟುಡಿಯೋದವರೆಗೆ ಮೆರವಣಿಗೆ ಸಾಗಿ ಬರಲಿದೆ.
ಮುಂಜಾಗ್ರತಾ ಕ್ರಮವಾಗಿ ಮೆರವಣಿಗೆ ಸಾಗುವ ರಸ್ತೆ ಹಾಗೂ ಇತರೆಡೆ 4 ಹೆಚ್ಚುವರಿ ಪೊಲೀಸ್ ಆಯುಕ್ತರು,3 ಆರ್ ಎಎಫ್, 30 ಕೆಎಸ್ ಆರ್ ಪಿ ಸೇರಿದಂತೆ 5 ಡಿಸಿಪಿಗಳ ನೇತೃತ್ವದಲ್ಲಿ ಹನ್ನೊಂದು ಸಾವಿರ ಪೊಲೀಸರನ್ನು ಬಿಗಿ ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.
ಅಂತಿಮ ಯಾತ್ರೆಯಲ್ಲಿ ದರ್ಶನ್, ಅರ್ಜುನ್ ಸರ್ಜಾ, ರವಿಶಂಕರ್, ಧೃವ ಸರ್ಜಾ ಸೇರಿದಂತೆ ಹಲವು ನಟ, ನಟಿಯರು ಮೆರವಣಿಗೆಗೆ ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.