ವೈದ್ಯರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ


Team Udayavani, Nov 26, 2018, 2:20 PM IST

gul-2.jpg

ಚಿಂಚೋಳಿ: ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಬೈಕ್‌ನಲ್ಲಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬನಿಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ಆತನ ಸಂಬಂಧಿಕರು ಕರ್ತವ್ಯ ನಿರತ ವೈದ್ಯರ ಅಂಗಿ ಹಿಡಿದು ಎಳೆದಾಡಿದ ಘಟನೆ ಖಂಡಿಸಿ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ಆಸ್ಪತ್ರೆ ಎದುರು ರವಿವಾರ ಪ್ರತಿಭಟನೆ ನಡೆಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ| ಮಹ್ಮದ್‌ ಗಫಾರ್‌ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಕುಡಿದ ಅಮಲಿನಲ್ಲಿ ಬಂದ ಗಾಯಾಳುವಿನ ಸಂಬಂಧಿಕರು ಮತ್ತು ಪೊಲೀಸ್‌ ಪೇದೆಯೊಬ್ಬರು ಹಲ್ಲೆ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಲವು ದಿನಗಳ ಹಿಂದೆ ಡಾ| ಜಾಕೀರ್‌ ಅನ್ಸಾರಿ, ಡಾ| ಸಂಜಯಗೋಳೆ,ಡಾ| ಸಂತೋಷ ಪಾಟೀಲ ಎನ್ನುವರ ಮೇಲೆ ಮೇಲೆ ಹಲ್ಲೆ ನಡೆದಿತ್ತು. ಒಂದು ತಿಂಗಳ ಹಿಂದೆಯಷ್ಟೆ ಸೇವೆಗೆ ಹಾಜರಾಗಿದ್ದ ಎಲುಬು ಮತ್ತು ಕೀಲು ರೋಗ ತಜ್ಞ ಡಾ| ಚಂದ್ರು ಅವರ ಮೇಲೆ ಈಗ ಹಲ್ಲೆ ನಡೆದಿರುವುದು ಖಂಡನೀಯವಾಗಿದೆ ಎಂದರು. 

ವೈದ್ಯರು ಭಯ-ಆತಂಕದ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸುವಂತೆ ಆಗಿದೆ. ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆ ಇರುವುದರಿಂದ ಲಭ್ಯವಿರುವ ಸಿಬ್ಬಂದಿಗಳಿಂದಲೇ ಒಳರೋಗಿ ಮತ್ತು ಹೊರ ರೋಗಿಗಳಿಗೆ ಉತ್ತಮ ಚಿಕತ್ಸೆ ನೀಡಲಾಗುತ್ತಿದೆ.

ದಿನನಿತ್ಯ 24 ಗಂಟೆಗಳ ಕಾಲವೂ ಸಾರ್ವಜನಿಕರ ಸೇವೆ ಸಲ್ಲಿಸಲು ನಾವು ಸಿದ್ಧರಿದ್ದೇವೆ. ಆದರೆ ವೈದ್ಯರು, ಸಿಬ್ಬಂದಿ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲಿ ಮಾಡುತ್ತಿರುವುದರಿಂದ ಸಿಬ್ಬಂದಿಗಳು ಬೇರೆಡೆ ವರ್ಗಾವಣೆ ಮಾಡಿಸಿಕೊಳ್ಳಲು ಆಸಕ್ತಿ ವಹಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಈ ಕುರಿತು ಪೊಲೀಸರಿಗೆ ಅನೇಕ ಸಲ ದೂರು ನೀಡಿದರೂ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶವ್ಯಕ್ರಪಡಿಸಿದರು. ಮಕ್ಕಳ ರಜ್ಞ ಡಾ| ಸಂತೋಷ ಪಾಟೀಲ ಮಾತನಾಡಿ, ಆಸ್ಪತ್ರೆ ಆವರಣದಲ್ಲಿ ಬೆಳೆದ ಗಾರ್ಡನ್‌ ದಲ್ಲಿ ಕೆಲವರು ಮದ್ಯಪಾನ ಮಾಡುತ್ತಿದ್ದರು. ಇದನ್ನು ತಡೆಯಲು ಹೋದ ಆಸ್ಪತ್ರೆ ಸಿಬ್ಬಂದಿ ಮೇಲೆ ಹಾಗೂ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ರಾತ್ರಿ ವೇಳೆ ಕುಡಿದ ಅಮಲಿನಲ್ಲಿರುವ ರೋಗಿಗಳೇ ಹೆಚ್ಚಾಗಿ ಬರುತ್ತಾರೆ. ಹಿಂದೆ ಬಂದವರು ವೈದ್ಯಕೀಯ ಪರೀಕ್ಷೆ ನಡೆಸಲು ಬಿಡುವುದಿಲ್ಲ. ನಮಗೆ ಪೊಲೀಸ್‌ ರಕ್ಷಣೆ ಅಗತ್ಯವಾಗಿದೆ ಎಂದು ಹೇಳಿದರು.

ಆಸ್ಪತ್ರೆ ಮುಖ್ಯ ಆಡಳಿತಾಧಿಕಾರಿ ಡಾ| ಸಂಜಯ ಗೋಳೆ ಮಾತನಾಡಿ, ಡಾ| ಚಂದ್ರು ಮತ್ತು ಶುಶ್ರೂಕಿಯರಾದ ಸತ್ಯಮ್ಮ, ನಾಗರತ್ನಮ ಎನ್ನುವರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಮಾಧವರಾವ್‌ ಪಾಟೀಲ, ತಹಶೀಲ್ದಾರ್‌ ಪಂಡಿತ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.

ಡಾ| ಜಗದೀಶ್ಚಂದ್ರ ಬುಳ್ಳ, ಡಾ| ಬೀರಪ್ಪ ಪೂಜಾರಿ, ಡಾ| ಲಕ್ಮಣ ಜಾಧವ್‌,ಡಾ| ದೀಪಾ ಪವಾರ, ಡಾ| ಪಲ್ಲವಿ, ಸರಕಾರಿ ನೌಕರ ಸಂಘದ ಅಧ್ಯಕ್ಷ ಶ್ರೀನಿವಾಸ ಪಾಟೀಲ, ಶಿವಕುಮಾರ ಕೊಳ್ಳೂರ, ಕೆ.ಎಂ, ಬಾರಿ, ಶೇಖ ಭಕ್ತಿಯಾರ , ಸಂತೋಷ ಗುತ್ತೇದಾರ, ಸಂಜೀವ ಪಾಟೀಲ ಸೇರಿದಂತೆ ಒಟ್ಟು 41 ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ವೈದ್ಯರು ನೀಡಿದ ದೂರಿನ ಮೇರೆಗೆ ಚಿಂಚೋಳಿ ಠಾಣೆ ಪಿಎಸ್‌ಐ ಮೌನೇಶ ದೊಡ್ಡಮನಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣ ದಾಖಲು
ವೈದ್ಯರ ಮೇಲೆ ಹಲ್ಲೆ ನಡೆಸಿದ ಮೀಸಲು ಪೊಲೀಸ್‌ ಪೇದೆ ಆನಂದ ನಾಗಪ್ಪ ನಿಮಾಹೊಸಳ್ಳಿ, ರೇವಣಸಿದ್ದಪ್ಪ
ರಾಮಣ್ಣ ಆನಂದಿ, ಚಾಂದಪಾಶಾ ಖಾಜಾಸಾಬ ಕರ್ಚಖೇಡ, ಸಾಬಣ್ಣ ಸುಬ್ಬಣ್ಣ ಎನ್ನುವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಮೀಸಲು ಪೊಲೀಸ್‌ ಪೇದೆ ಆನಂದ ನಾಗಪ್ಪ ಎನ್ನುವರನ್ನು ಸೇವೆಯಿಂದ ಅಮಾನತು ಮಾಡುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿಗೆ ವರದಿ ಸಲ್ಲಿಸಲಾಗುವುದು. ಎಲ್ಲರ ವಿರುದ್ಧ ರೌಡಿಶೀಟ್‌ ಪ್ರಕರಣ ದಾಖಲಿಸಲಾಗುವುದು.
 ಎಚ್‌.ಎಂ. ಇಂಗಳೇಶ್ವರ, ಸಿಪಿಐ

ಟಾಪ್ ನ್ಯೂಸ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.