ಕರ್ನಾಟಕಕ್ಕೆ ಕನ್ನಡ ಶಾಲೆಗಳು ಆತ್ಮವಿದ್ದಂತೆ: ಸ್ವಾಮೀಜಿ
Team Udayavani, Nov 26, 2018, 4:39 PM IST
ನರಗುಂದ: ಕರ್ನಾಟಕ್ಕೆ ಕನ್ನಡ ಶಾಲೆಗಳು ಆತ್ಮವಿದ್ದಂತೆ. ಆದರೆ ರಾಜ್ಯದಲ್ಲಿ ಕನ್ನಡ ಶಾಲೆಗಳನ್ನು ಮುಚ್ಚುವ ಸ್ಥಿತಿ ಇಂದು ನಿರ್ಮಾಣವಾಗುತ್ತಿದೆ. ಹೀಗಾಗಿ ನಿತ್ಯ ಆತಂಕ ಎದುರಿಸುತ್ತಿರುವ ಹಳ್ಳಿಗಳ ಕನ್ನಡ ಶಾಲೆಗಳಿಗೆ ಅನಾಥ ಪ್ರಜ್ಞೆ ಕಾಡುತ್ತಿದೆ ಎಂದು ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
ತಾಲೂಕಿನ ಭೈರನಹಟ್ಟಿ ಸರಕಾರಿ ಪ್ರೌಢಶಾಲೆಯಲ್ಲಿ 8ನೇ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಕನ್ನಡ ಶಾಲೆಗಳ ಸಬಲೀಕರಣ ಪ್ರಯತ್ನ ಇಂದು ಗೌನವಾಗುತ್ತಿದೆ ಎಂದರು.
ಆರು ವರ್ಷಗಳ ಹಿಂದೆ ಸರ್ವೋಚ್ಛ ನ್ಯಾಯಾಲಯವು ಪಾಲಕರ ಅಭಿಪ್ರಾಯ ಮೇರೆಗೆ ಮಕ್ಕಳಿಗೆ ಮಾಧ್ಯಮ ಶಿಕ್ಷಣ ಸಿಗಬೇಕು ಎಂದು ತೀರ್ಪು ನೀಡಿದ್ದು ಕನ್ನಡಿಗರ ಪಾಲಿಗೆ ಕೊಡಲಿ ಪೆಟ್ಟಾಗಿ ಪರಿವರ್ತನೆಗೊಂಡಿತು. ಇದು ದಕ್ಷಿಣ ಭಾರತದ ಹಲವಾರು ರಾಜ್ಯಗಳಿಗೆ ಬಿಸಿ ತುಪ್ಪವಾಗಿ ಪರಿಣಮಿಸಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಭಾಷಾ ಮಾಧ್ಯಮ ಯಾರ ಮೇಲೂ ಹೊರೆ ಕೂಡಿಸಲಾಗದ ಸ್ಥಿತಿಗೆ ಒರಗಿಕೊಂಡಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಭಾಷಾ ಮಾಧ್ಯಮ ನೀತಿಯನ್ನು ಜಾರಿಗೆ ತರಲು ಸುಗ್ರೀವಾಜ್ಞೆ ಹೊರಡಿಸಬೇಕು. ಇದರಿಂದಾಗಿ ಆಯಾ ರಾಜ್ಯದಲ್ಲಿ ಮಾತೃಭಾಷೆ ಮೂಲಕವೇ ಶಿಕ್ಷಣ ಪಡೆಯುವ ಕಾರ್ಯ ಸಾಗುವಂತಾಗುತ್ತದೆ ಎಂದು ಶಾಂತಲಿಂಗ ಸ್ವಾಮಿಗಳು ಆಗ್ರಹಿಸಿದರು.
ಶಿಕ್ಷಣವೆಂಬ ತೇರು: ಶಿಕ್ಷಣವೆಂಬ ತೇರಿಗೆ ವಿದ್ಯಾರ್ಥಿಗಳು, ಶಿಕ್ಷಕರು, ಪಾಲಕರು, ಪೋಷಕರು ನಾಲ್ಕು ಚಕ್ರಗಳಿದ್ದಂತೆ. ಎಲ್ಲ ಚಕ್ರಗಳು ಸಮನಾಗಿ ತನ್ನ ಪ್ರಯತ್ನ ನಡೆಸಿದಾಗ ತೇರು ಸುಗಮವಾಗಿ ಸಾಗಲು ಸಾಧ್ಯ. ಶಿಕ್ಷಣ ಇಲಾಖೆ ಪ್ರಗತಿಗೆ ಸಮುದಾಯದ ಸಹಕಾರ ಕೂಡ ದೊಡ್ಡದಾಗಿದೆ ಎಂದರು. ಮುಖ್ಯಶಿಕ್ಷಕಿ ವಿನೋದಾ ತಾರಕೇರಾ ಹಾಗೂ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ, ವಿಜಯ ಸದಲಗಿ ಮಾತನಾಡಿದರು. ಶಾಲೆಗೆ ದೇಣಿಗೆ ನೀಡಿದ ರುದ್ರಪ್ಪ ಐನಾಪೂರ, ರಾಘವೇಂದ್ರ ಬಡಿಗೇರ ಅವರನ್ನು ಶಾಲೆ ವತಿಯಿಂದ ಎಸ್‌ಡಿಎಂಸಿ ಅಧ್ಯಕ್ಷ ನಾಗೇಶ ನರಸಾಪುರ ಸನ್ಮಾನಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್ ಮತ್ತು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ನಾಗೇಶ ನರಸಾಪುರ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ನಿರ್ಮಲಾ ಗಂಗಣ್ಣವರ, ಮಲ್ಲಿಕಾರ್ಜುನ ಐನಾಪೂರ, ಧರ್ಮರಾಜಪ್ಪ ತೆಗ್ಗಿನಮನಿ, ಶಿವನಪ್ಪ ಮೊರಬದ, ವಿರುಪಾಕ್ಷಪ್ಪ ನರಸಾಪುರ, ಮೈಲಾರ ಹಾದಿಮನಿ, ಭೀಮಪ್ಪ ಐನಾಪೂರ, ಗ್ರಾಪಂ ಸದಸ್ಯ ಈರಪ್ಪ ಐನಾಪೂರ, ಹನಮಂತ ಸಂಗಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.