ಸಂವಿಧಾನ ಪಾಲಿಸದಿದ್ದರೆ ಅಸಮಾಧಾನದ ಹೊಗೆ
Team Udayavani, Nov 27, 2018, 6:00 AM IST
ಹೊಸದಿಲ್ಲಿ: ಸಂವಿಧಾನ ಸೂಚಿಸುವ ಮಾರ್ಗ ಸೂಚಿಗಳನ್ನು ಎಲ್ಲರೂ ತಪ್ಪದೇ ಪಾಲಿಸಬೇಕು. ಇಲ್ಲವಾದಲ್ಲಿ ಅದು ಗಂಭೀರ ಅಸಮಾಧಾನಗಳಿಗೆ ಕಾರಣವಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಕಿವಿಮಾತು ಹೇಳಿದ್ದಾರೆ.
ಸಂವಿಧಾನ ದಿನಾಚರಣೆಯ ಅಂಗವಾಗಿ ಸೋಮವಾರ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಸಂವಿಧಾನವು ಬಡವರ ಹಾಗೂ ಬಲ್ಲಿದರ ಪಾಲಿನ ದೀವಿಗೆಯಾಗಿದ್ದು, ಸಂದಿಗ್ಧ ಪರಿಸ್ಥಿತಿಗಳಲ್ಲಿ ಹಾಗೂ ಅರಾಜಕತೆಯ ಸನ್ನಿವೇಶಗಳಲ್ಲಿ ಸರಿಯಾದ ಹಾದಿ ತೋರುವ ದಾರಿದೀಪವಾಗಿದೆ. ಹಾಗಾಗಿ, ಎಲ್ಲರೂ ಸಂವಿಧಾನಕ್ಕೆ ಬದ್ಧರಾಗಿರಬೇಕು ಎಂದು ಆಶಿಸಿದರು.
ರಾಷ್ಟ್ರಪತಿ ಅಸಮಾಧಾನ: ಇದೇ ವೇಳೆ, ವಿಪಕ್ಷಗಳ ಗದ್ದಲಗಳಿಂದ ಸಂಸತ್ತಿನ ಕಲಾಪಗಳಿಗೆ ತೊಂದರೆಯಾಗುವುದು ಹಾಗೂ ಸಾಕ್ಷ್ಯಾಧಾರಗಳ ಕೊರತೆಯಿಂದ ನ್ಯಾಯಾಲಯ ಗಳಲ್ಲಿ ಕಲಾಪಗಳು ಪದೇ ಪದೆ ಮುಂದೂಡಲ್ಪಡುವುದರ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂವಿಧಾನ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮತದಾರರು ತಮ್ಮ ಹಕ್ಕನ್ನು ಸಮರ್ಥವಾಗಿ ಚಲಾಯಿಸಿದರೆ ಮಾತ್ರ ರಾಜಕೀಯ ರಂಗದಲ್ಲಿ ಸುಧಾರಣೆ ಸಾಧ್ಯವಾಗುವುದಿಲ್ಲ. ಇವುಗಳ ಜತೆಗೆ, ಆಡಳಿತದಲ್ಲಿ ಪಾರದರ್ಶಕತೆ ಕಾಯ್ದುಕೊಂಡಲ್ಲಿ ಮಾತ್ರ ಇದು ಸಾಧ್ಯವಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.