ಜನತೆ, ಅಭಿಮಾನಿಗಳಿಗೆ ಎಚ್ಡಿಕೆ ಧನ್ಯವಾದ
Team Udayavani, Nov 27, 2018, 11:39 AM IST
ಬೆಂಗಳೂರು: ಕೇಂದ್ರದ ಮಾಜಿ ಸಚಿವರಾದ ಸಿ.ಕೆ.ಜಾಫರ್ ಷರೀಫ್ ಹಾಗೂ ಅಂಬರೀಶ್ ಅವರ ಅಂತ್ಯಕ್ರಿಯೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಯಾಗದಂತೆ ಸಹಕರಿಸಿದ್ದಕ್ಕಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಬ್ಬರೂ ನಾಯಕರ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಧನ್ಯವಾದ ತಿಳಿಸಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟರೂ ಆಗಿದ್ದ ಅಂಬರೀಶ್ ಅವರ ನಿಧನದಿಂದ ದುಃಖತಪ್ತರಾಗಿದ್ದ ಅವರ ಅಭಿಮಾನಿಗಳು ಅಂತ್ಯಕ್ರಿಯೆ ನಡೆಯುವವರೆಗೂ ಶಾಂತಿ ಕಾಪಾಡಿದ್ದು, ಜನತೆಯ ಸಹನಶೀಲತೆಗೆ ಸಾಕ್ಷಿಯಾಗಿದೆ. ಇದಕ್ಕಾಗಿ ಇಬ್ಬರೂ ನಾಯಕರ ಅಭಿಮಾನಿಗಳು ಹಾಗೂ ಅನುಯಾಯಿಗಳಿಗೆ ನಾನು ಆಭಾರಿಯಾಗಿದ್ದೇನೆ.
ಈ ಸಂದರ್ಭದಲ್ಲಿ ಹಗಲಿರುಳೆನ್ನದೇ ಶ್ರಮಿಸಿ, ಅಗಲಿದ ನಾಯಕರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸಹಕರಿಸಿದ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹಾಗೂ ಸಂಪುಟ ಸಹೋದ್ಯೋಗಿಗಳು, ಶಾಸಕರು, ಚಿತ್ರರಂಗದ ಗಣ್ಯರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮೂಲಕ ಹೃತ್ಪೂರ್ವಕ ಧನ್ಯವಾದ ಅರ್ಪಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.