ಯೋಗದಿಂದ ರೋಗ ದೂರ: ಗೌರಮ್ಮ
Team Udayavani, Nov 27, 2018, 4:00 PM IST
ಕೂಡ್ಲಿಗಿ: ಯೋಗದ ಮೂಲಕ ರೋಗಗಳನ್ನು ದೂರವಿಡಬಹುದು. ಯೋಗದಿಂದ ಮಾನಸಿಕ ನೆಮ್ಮದಿ, ಉತ್ತಮ ಆರೋಗ್ಯ, ಶಾಂತಿಯನ್ನು ಪಡೆಯಬಹುದಾಗಿದೆ ಎಂದು ಪತಂಜಲಿ ಯೋಗ ಸಮಿತಿಯ ಜಿಲ್ಲಾ ಮಹಿಳಾ ಪ್ರಭಾರಿ ಬಿ.ಗೌರಮ್ಮ ಕರೆ ನೀಡಿದರು.
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪತಂಜಲಿ ಯೋಗ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಆಯೋಜಿಸಿದ್ದ ಯೋಗ ಮ್ಯಾರಥಾನ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದಿನ ಒತ್ತಡದ ಜೀವನದಲ್ಲಿ ನೂರೆಂಟು ಕಾಯಿಲೆಗಳಿಗೆ ಗುರಿಯಾಗುತ್ತಿರುವ ಜನತೆ ಯೋಗದ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಇಂದಿನ ಜೀವನ ಪದ್ಧತಿಯಿಂದ ಶಾಂತಿ, ನೆಮ್ಮದಿ ಇಲ್ಲದಂತಾಗಿದ್ದು, ಇದರಿಂದ ಮನುಷ್ಯನ ಬದುಕು ಅಧೋಗತಿಯತ್ತ ಸಾಗುತ್ತಿದೆ. ಇಂತಹ ಸಂದರ್ಭದಲ್ಲಿ ಯೋಗ ನೆಮ್ಮದಿಯ ಬದುಕಿಗೆ ಸಂಜೀವಿನ ಇದ್ದ ಹಾಗೇ. ಇದನ್ನು ಎಲ್ಲರೂ ಅರಿತು ನಿತ್ಯ ಜೀವನದಲ್ಲಿ ಯೋಗಕ್ಕೆ ಅಲ್ಪ ಸಮಯ ಮೀಸಲಿಡುವುದರ ಮೂಲಕ ಆರೋಗ್ಯವಂತಾಗಬೇಕಿದೆ ಎಂದು ತಿಳಿಸಿದರು.
ಪತಂಜಲಿ ಆರೋಗ್ಯ ಕೇಂದ್ರದ ಚನ್ನಣ್ಣ ಮಾತನಾಡಿ, ಯೋಗದಿಂದ ಇಂದು ಮನುಷ್ಯ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬಹುದಾಗಿದೆ. ಯೋಗದಿಂದ ನೂರಾರು ಪ್ರಯೋಜನಗಳನ್ನು ಪಡೆಯಬಹುದಾಗಿದೆ. ದೇಶದ ಯೋಗವನ್ನು ಇಂದು ಇಡೀ ಜಗತ್ತೇ ಅನುಸರಿಸುತ್ತಿದ್ದು,
ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನದಿಂದ ಮನುಷ್ಯ ತನ್ನ ವ್ಯಕ್ತಿತ್ವ, ನೆಮ್ಮದಿಯ ಬದುಕನ್ನೇ ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಇಡೀ ಜಗತ್ತೇ ಇಂದು ಯೋಗಕ್ಕೆ ಮಹತ್ವ ನೀಡುತ್ತಿದೆ. ಹೀಗಾಗಿ ಯೋಗದ ಮೂಲಕ ರೋಗಗಳನ್ನು ದೂರವಿಟ್ಟು ಸ್ವತ್ಛಂದದ ಬದುಕನ್ನು ತಮ್ಮದಾಗಿಸಿಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೂಡ್ಲಿಗಿ ಪಿ.ಎಸ್.ಐ. ಹಾಲೇಶ್ ಧ್ವಜವನ್ನು ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪತಂಜಲಿ ಯೋಗಿ ಸಮಿತಿ ಅಧ್ಯಕ್ಷ ರಾಮಣ್ಣ, ಜೆಸಿಐ ರಾಷ್ಟ್ರೀಯ ಉಪಾಧ್ಯಕ್ಷ ಪ್ರಕಾಶ್, ಸಂದೀಪ್ ರಾಯಸಂ, ಮೈದಾನ ಗೆಳೆಯರ ಬಳಗದ ಮಹಾಂತೇಶ್, ಕಲ್ಲಪ್ಪ, ಚನ್ನಬಸವನಗೌಡ, ವಿವೇಕ್, ಸಚಿನ್, ಉಪನ್ಯಾಸಕ ಕೆ.ನಾಗರಾಜ, ನಿವೃತ್ತ ಶಿಕ್ಷಕ ಎ.ಎಂ. ವೀರಯ್ಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
MUST WATCH
ಹೊಸ ಸೇರ್ಪಡೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.