ಕರ್ನಾಟಕ ಬೌಲಿಂಗ್‌ಗೆ ತತ್ತರಿಸಿದ ಮಹಾರಾಷ್ಟ್ರ


Team Udayavani, Nov 29, 2018, 6:55 AM IST

ban29111815medn.jpg

ಮೈಸೂರು: ಪ್ರಸಕ್ತ ರಣಜಿ ಋತುವಿನಲ್ಲಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿರುವ ಕರ್ನಾಟಕ ಈ ನಿಟ್ಟಿನಲ್ಲಿ ಯಶಸ್ವಿಯಾಗಿ ಮೊದಲ ಹೆಜ್ಜೆಯನ್ನಿಟ್ಟಿದೆ. ಪ್ರವಾಸಿ ಮಹಾರಾಷ್ಟ್ರ ವಿರುದ್ಧ ಆರಂಭವಾದ ಪಂದ್ಯದಲ್ಲಿ ಕರಾರುವಾಕ್‌ ಬೌಲಿಂಗ್‌ ಪ್ರದರ್ಶಿಸಿದ ಕರ್ನಾಟಕ ಎದುರಾಳಿ ತಂಡವನ್ನು 113 ರನ್‌ಗಳ ಅಲ್ಪಮೊತ್ತಕ್ಕೆ ಕಟ್ಟಿಹಾಕಿದೆ.

ಇಲ್ಲಿನ ಮಾನಸ ಗಂಗೋತ್ರಿಯ ನರಸಿಂಹರಾಜ ಒಡೆಯರ್‌ ಮೈದಾನದಲ್ಲಿ ಬುಧವಾರದಿಂದ ಆರಂಭಗೊಂಡ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಮಹಾರಾಷ್ಟ್ರ ಮೊದಲ ಇನಿಂಗ್ಸ್‌ನಲ್ಲಿ 113 ರನ್‌ಗಳಿಗೆ ಸರ್ವಪತನ ಕಂಡಿತು. 

ಎದುರಾಳಿ ತಂಡದ ಸಾಧಾರಣ ಮೊತ್ತದ ಎದುರು ಮೊದಲ ಇನಿಂಗ್ಸ್‌ ಆರಂಭಿಸಿರುವ ಕರ್ನಾಟಕ 3 ವಿಕೆಟ್‌ ನಷ್ಟಕ್ಕೆ 70 ರನ್‌ ಪೇರಿಸಿ ಉತ್ತಮ ಸ್ಥಿತಿಯಲ್ಲಿದೆ. ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ ಕರ್ನಾಟಕ ಮೊದಲ ದಿನದ ಗೌರವ ಸಂಪಾದಿಸಿದೆ. ಮೊದಲ ಇನಿಂಗ್ಸ್‌ ಆರಂಭಿಸಿರುವ ಕರ್ನಾಟಕ 40 ಓವರ್‌ಗೆ ದಿನದಾಟ ಅಂತ್ಯಗೊಳಸಿದೆ. ಆರಂಭಿಕ ಆಟಗಾರ ಡಿ.ನಿಶ್ಚಲ್‌ (32) ಹಾಗೂ ಜೆ.ಸುಚಿತ್‌ (2) ಅಜೇಯರಾಗಿ ಕಣದಲ್ಲಿದ್ದಾರೆ.

ಬೌಲರ್‌ಗಳ ನಿಖರ ಬೌಲಿಂಗ್‌: ಮಹಾರಾಷ್ಟ್ರ ಇನಿಂಗ್ಸ್‌ ಆರಂಭದಿಂದಲೇ ಶಿಸ್ತುಬದ್ಧ ಬೌಲಿಂಗ್‌ ಪ್ರದರ್ಶನ ನೀಡಿದ ರಾಜ್ಯದ ಬೌಲರ್‌ಗಳು ಎದುರಾಳಿ ತಂಡವನ್ನು 113 ರನ್‌ಗಳಿಗೆ ಆಲೌಟ್‌ ಮಾಡುವಲ್ಲಿ ಯಶಸ್ವಿಯಾದರು. ಬೆನ್ನುನೋವಿನ ಕಾರಣ ಕಳೆದ ಪಂದ್ಯದಿಂದ ಹೊರಗುಳಿದಿದ್ದ ನಾಯಕ ಆರ್‌. ವಿನಯ್‌ಕುಮಾರ್‌(19ಕ್ಕೆ 2) ಇನಿಂಗ್ಸ್‌ನ ಮೊದಲ ಓವರ್‌ನಲ್ಲೇ ವಿಕೆಟ್‌ ಪಡೆದು ಮಹಾರಾಷ್ಟ್ರ ತಂಡದ ಕುಸಿತಕ್ಕೆ ನಾಂದಿ ಹಾಡಿದರು. ಇವರಿಗೆ ಉತ್ತಮ ಸಾಥ್‌ ನೀಡಿದ ಅಭಿಮನ್ಯು ಮಿಥುನ್‌ (42ಕ್ಕೆ 2) ಹಾಗೂ ರೋನಿತ್‌ ಮೋರೆ (16ಕ್ಕೆ 2) ವಿಕೆಟ್‌ ಪಡೆದು ಎದುರಾಳಿ ತಂಡಕ್ಕೆ ಆಘಾತ ನೀಡಿದರು. ಪರಿಣಾಮ ಮಹಾರಾಷ್ಟ್ರ ತಂಡ ಕೇವಲ 50 ರನ್‌ಗಳಿಸುವ ಹೊತ್ತಿಗೆ ಪ್ರಮುಖ 5 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಸುಚಿತ್‌ ಸ್ಪಿನ್‌ ಮೋಡಿ: ಬ್ಯಾಟಿಂಗ್‌ ವೈಫ‌ಲ್ಯ ಅನುಭವಿಸಿದ ಮಹಾರಾಷ್ಟ್ರ ತಂಡಕ್ಕೆ ಗಾಯಕ್ವಾಡ್‌ (39) ಹಾಗೂ ವಿಕೆಟ್‌ ಕೀಪರ್‌ ಮೋಟ್ವಾನಿ (34) ಚೇತರಿಕೆ ನೀಡುವ ಯತ್ನ ನಡೆಸಿದರು. ಇವರಿಬ್ಬರಿಂದಲೇ ಆ ತಂಡದ ಮೊತ್ತ ನೂರರ ಗಡಿದಾಟಲು ಸಾಧ್ಯವಾಯಿತು. ಇಬ್ಬರೂ ಆಟಗಾರರು ಕರ್ನಾಟಕ ಬೌಲರ್‌ಗಳಿಗೆ ಸ್ವಲ್ಪಮಟ್ಟಿನ ಪ್ರತಿರೋಧ ನೀಡಿದ ಪರಿಣಾಮ ಭೋಜನ ವಿರಾಮದ ವೇಳೆಗೆ ಮಹಾರಾಷ್ಟ್ರ 5 ವಿಕೆಟ್‌ ನಷ್ಟಕ್ಕೆ 84 ರನ್‌ಗಳಿಸಿತ್ತು. ಈ ಹಂತದಲ್ಲಿ ಬೌಲಿಂಗ್‌ ದಾಳಿ ಆರಂಭಿಸಿದ ಸ್ಥಳೀಯ ಪ್ರತಿಭೆ ಜೆ.ಸುಚಿತ್‌(26ಕ್ಕೆ 4) ತಮ್ಮ ಸ್ಪಿನ್‌ ಕೈಚಳಕ ತೋರಿದರು.

ತಮ್ಮ ನಿಖರ ಎಡಗೈ ಆಫ್ಸ್ಪಿನ್‌ ಮೂಲಕ ಸುಚಿತ್‌ ಎದುರಾಳಿ ಬ್ಯಾಟ್ಸ್‌ಮನ್‌ಗಳನ್ನು ಕಕ್ಕಾಬಿಕ್ಕಿ ಮಾಡಿದರು. ಇದರ ಪರಿಣಾಮ ಉತ್ತಮವಾಗಿ ಆಡುತ್ತಿದ್ದ ಗಾಯಕ್ವಾಡ್‌ ಔಟಾಗಿ ಪೆವಿಲಿಯನ್‌ಗೆ ಮರಳಿದರು. ಕೆಳಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಸುಚಿತ್‌ ಬೌಲಿಂಗ್‌ನ ಮರ್ಮವನ್ನರಿಯದೇ ತತ್ತರಿಸಿದರು. ಇದು ಮಹಾರಾಷ್ಟ್ರ ಇನಿಂಗ್ಸ್‌ ಅತಿ ಶೀಘ್ರ ಮುಕ್ತಾಯಕ್ಕೆ ಕಾರಣವಾಯಿತು. ಈ ಬಾರಿ ರಣಜಿ ಋತುವಿನಲ್ಲಿ ಸುಚಿತ್‌ ಉತ್ತಮ ಫಾರ್ಮ್ನಲ್ಲಿದ್ದಾರೆ. ಹಿಂದಿನ ವಿದರ್ಭ ಹಾಗೂ ಮುಂಬೈ ವಿರುದ್ಧದ ಪಂದ್ಯದಲ್ಲೂ ಅವರು ತಮ್ಮ ಸ್ಪಿನ್‌ ಮೂಲಕ ಬ್ಯಾಟ್ಸ್‌ಮನ್‌ಗಳನ್ನು ಗಲಿಬಿಲಿ ಮಾಡಿದ್ದರು.

ಕಳಪೆ ಫಾರ್ಮ್: ಸ್ಟುವರ್ಟ್‌ ಬಿನ್ನಿಗೆ ಸ್ಥಾನವಿಲ್ಲ
ಹಿಂದಿನ ಎರಡೂ ಪಂದ್ಯಗಳಲ್ಲಿ ರಾಜ್ಯದ ಖ್ಯಾತ ಆಲ್‌ರೌಂಡರ್‌ ಸ್ಟುವರ್ಟ್‌ ಬಿನ್ನಿ ಕಳಪೆ ಆಟವಾಡಿದ್ದು ಅವರಿಗೆ ಮುಳುವಾಗಿದೆ. ಒಟ್ಟು ನಾಲ್ಕು ಇನಿಂಗ್ಸ್‌ಗಳಲ್ಲಿ ಕೇವಲ 53 ರನ್‌ ಒಗ್ಗೂಡಿಸಿರುವ ಅವರು, ಬೌಲಿಂಗ್‌ನಲ್ಲೂ ವಿಫ‌ಲರಾಗಿ ಒಂದೇ ಒಂದು ವಿಕೆಟ್‌ ತೆಗೆದುಕೊಂಡಿದ್ದರು. ಆದ್ದರಿಂದ ಅವರನ್ನು ಹೊರಗಿಡಲಾಗಿದೆ. ಇದರ ಜೊತೆಗೆ ಹಿಂದಿನ ಪಂದ್ಯದಲ್ಲಿ ಕುತ್ತಿಗೆ ನೋವಿನಿಂದ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದ ನಾಯಕ ವಿನಯ್‌ ಕುಮಾರ್‌, ಚೇತರಿಸಿಕೊಂಡಿದ್ದು ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

– ಸಿ. ದಿನೇಶ್‌

ಟಾಪ್ ನ್ಯೂಸ್

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

1-eqwewqe

Adelaide Test: ಭಾರತಕ್ಕೆ ಹಗಲು-ರಾತ್ರಿ ಅಭ್ಯಾಸ ಪಂದ್ಯ

K L RAhul

KL Rahul ಆರಂಭಿಕನಾಗಿಯೇ ಉಳಿಯಲಿ: ಪೂಜಾರ ಸಲಹೆ

1-kar

Syed Mushtaq Ali Trophy ಸಿಕ್ಕಿಂ ವಿರುದ್ಧ ಕರ್ನಾಟಕಕ್ಕೆ ಸುಲಭ ಜಯ

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.