ರಾಯಣ್ಣ ಪ್ರತಿಮೆ ಉದ್ಘಾಟನೆ ಎಂದು?

Team Udayavani, Nov 29, 2018, 5:07 PM IST

29-november-18.gif

ಬೈಲಹೊಂಗಲ: ಬ್ರಿಟಿಷರ ವಿರುದ್ಧ ಹೋರಾಡಿ ಮಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಪಟ್ಟಣದ ತೋಟಗಾರಿಕೆ ಇಲಾಖೆ ಬಳಿ ಸ್ಥಾಪಿಸಲಾದ ಸಂಗೊಳ್ಳಿ ರಾಯಣ್ಣ ಪ್ರತಿಮೆಯ ಮುಸುಕು ಬೆಳಗಾವಿ ಚಳಿಗಾಲ ಅಧಿವೇಶನದಂದು ಮುಕ್ತವಾಗಬಹುದೇ ಎನ್ನುವ ಆಶಾಭಾವ ರಾಯಣ್ಣ ಅಭಿಮಾನಿಗಳಲ್ಲಿ ಇದೆ.

ಬ್ರಿಟಿಷರ ವಿರುದ್ಧ ಹೋರಾಟದಲ್ಲಿ ಕ್ರಾಂತಿಯ ಕಿಡಿ ಹೊತ್ತಿಸಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹೆಸರು ಅಜರಾಮರವಾಗಿದೆ. ಕಿತ್ತೂರ ಸಂಸ್ಥಾನ ಪತನದ ನಂತರ ಕಿತ್ತೂರ ರಾಣಿ ಚೆನ್ನಮ್ಮನ ಬಲ ಕೈ, ಬಂಟ ಕಿತ್ತೂರಿನ ಸಂಸ್ಥಾನ ಪುನರ್‌ ನಿರ್ಮಾಣಕ್ಕೆ ನಡೆಸಿದ ಹೋರಾಟ ಅಗಾಧವಾದುದು.

ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರ ಪ್ರಾರಂಭಿಸಿ ಆತನ ಕುರುಹುಗಳನ್ನು ರಕ್ಷಿಸುವ ಕಾರ್ಯ ನಡೆಸಲಾಗುತ್ತಿದೆ. ಪಟ್ಟಣದಲ್ಲಿ ರಾಯಣ್ಣನ ಹೆಸರಿನ ಉದ್ಯಾನವನ, ವೃತ್ತವೂ ಇದೆ. ಆದರೆ ರಾಯಣ್ಣನ ಹೆಸರಿನ ಮೂರ್ತಿ ಇಲ್ಲದಿರುವುದರಿಂದ ಮೂರ್ತಿ ಸ್ಥಾಪನೆಗೆ ಬಹು ವರ್ಷಗಳಿಂದ ಬೇಡಿಕೆ ಇತ್ತು. ಇದಕ್ಕಾಗಿ ರಾಯಣ್ಣನ ಅಭಿಮಾನಿಗಳು, ಹೋರಾಟಗಾರರು ಹೋರಾಟ ನಡೆಸಿದ್ದರು.

ಉದ್ಘಾಟನೆ ಕಾಣದ ರಾಯಣ್ಣನ ಮೂರ್ತಿ: ಸಂಗೊಳ್ಳಿ ರಾಯಣ್ಣನ ಮೂರ್ತಿ ಸ್ಥಾಪನೆಗೆ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಅವಧಿಯಲ್ಲಿ ತೋಟಗಾರಿಕೆ ಇಲಾಖೆ ಮುಂಭಾಗದಲ್ಲಿ ಸ್ಥಳ ಗುರುತಿಸಿ ಮೂರ್ತಿ ನಿರ್ಮಾಣ ಕಾರ್ಯ ನಡೆದಿತ್ತು. 10.50 ಲಕ್ಷ ರೂ. ಸರಕಾರದ ಅನುದಾನದಲ್ಲಿ ಪ್ರತಿಮೆ ನಿರ್ಮಾಣ ಮಾಡಲಾಯಿತು. ಸಿದ್ಧವಾಗಿ ನಿಂತ ಮೂರ್ತಿ ಮುಸುಕುಧಾರಿಯಾಗಿ ನಿಂತಿದೆ. ಆದರೆ ಇಲ್ಲಿಯವರೆಗೆ ಉದ್ಘಾಟನೆ ಭಾಗ್ಯ ಕಂಡಿಲ್ಲ. ಕಿತ್ತೂರು ರಾಣಿ ಚೆನ್ನಮ್ಮನ ಉತ್ಸವದ ಸಂದರ್ಭದಲ್ಲಾದರೂ ರಾಯಣ್ಣನ ಮೂರ್ತಿ ಉದ್ಘಾಟನೆ ಮಾಡಬೇಕಾಗಿತ್ತು. ಆದರೆ ಕಿತ್ತೂರು ಉತ್ಸವ ಮುಗಿದು ಹೋದರೂ ಉದ್ಘಾಟನೆ ಬಗ್ಗೆ ಸುಳಿವು ಇಲ್ಲದಿರುವುದು ರಾಯಣ್ಣ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದಿಂದ ಸಿದ್ಧಗೊಂಡಿರುವ ರಾಯಣ್ಣನ ಪ್ರತಿಮೆ ಮೂಲೆಯಲ್ಲಿ ಕಳೆದ ಒಂದು ವರ್ಷಗಳಿಂದ ಅನಾಥವಾಗಿ ನಿಂತಿದ್ದರೂ ಅಧಿಕಾರಿಗಳು, ಜನಪ್ರತಿನಿ ಧಿಗಳು ಇದರತ್ತ ಗಮನಹರಿಸಿಲ್ಲ. ಈ ಕುರಿತು ರಾಯಣ್ಣನ ಅಭಿಮಾನಿಗಳು ಪ್ರಾಧಿಕಾರ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರೂ ಪ್ರಾಧಿಕಾರ ಸ್ಪಂದಿಸಿಲ್ಲ. ಶಾಸಕ ಮಹಾಂತೇಶ ಕೌಜಲಗಿ, ಬೈಲಹೊಂಗಲ ಉಪವಿಭಾಗಾಧಿಕಾರಿ, ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶಿವಾನಂದ ಭಜಂತ್ರಿ ಇತ್ತ ಗಮನ ಹರಿಸಿ ಕಿತ್ತೂರು ನಾಡಿನ ಜನತೆ ಹೋರಾಟಕ್ಕಿಳಿಯುವ ಮುಂಚೆ ಪ್ರತಿಮೆ ಅನಾವರಣಗೊಳಿಸಿ ವೀರರ ತ್ಯಾಗ, ಬಲಿದಾನವನ್ನು ಗೌರವಿಸಬೇಕಿದೆ.

ಸಂಗೊಳ್ಳಿ ರಾಯಣ್ಣನ ಮೂರ್ತಿ ಅನಾವರಣಕ್ಕೆ ದಿನ ನಿಗದಿ ಬಗ್ಗೆ ಹಲವು ಬಾರಿ ಚರ್ಚೆ ನಡೆಸಲಾಗಿದೆ. ಆದರೆ ಇನ್ನೂ ಕಾಲ ಕೂಡಿ ಬಂದಿಲ್ಲ. ಚಳಿಗಾಲ ವಿಧಾನಸಭೆ ಅಧಿವೇಶನದ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗಳನ್ನು ಅಹ್ವಾನಿಸಿ ಮೂರ್ತಿ ಉದ್ಘಾಟನೆ(ಅನಾವರಣಕ್ಕೆ) ಕ್ರಮ ಕೈಗೊಳ್ಳುವ ವಿಚಾರ ಹೊಂದಲಾಗಿದೆ.
. ಮಹಾಂತೇಶ ಕೌಜಲಗಿ, ಶಾಸಕರು ಬೈಲಹೊಂಗಲ.

ಸಂಗೊಳ್ಳಿ ರಾಯಣ್ಣನ ಮೂರ್ತಿ ಸ್ಥಾಪಿಸಿ ಬಹುದಿನಗಳು ಕಳೆದಿವೆ. ರಾಜಕಾರಣಿಗಳ ಇಚ್ಛಾಶಕ್ತಿ ಇಲ್ಲದಿರುವುದರಿಂದ ಮೂರ್ತಿ ಅನಾವರಣಗೊಂಡಿಲ್ಲ. ಇನ್ನಾದರೂ ಇತ್ತ ಜನಪ್ರತಿನಿಧಿಗಳು, ರಾಯಣ್ಣ ಅಭಿವೃದ್ಧಿ ಪ್ರಾಧಿಕಾರ ಗಮನ ಹರಿಸುವುದು ಅಗತ್ಯವಾಗಿದೆ.
.ಬಸವರಾಜ ಕಮತ,
ಇತಿಹಾಸ ತಜ್ಞ

„ಸಿ.ವೈ.ಮೆಣಶಿನಕಾಯಿ

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

President  ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.