ಜಾನಪದ ವಿದ್ವಾಂಸ ಕುಂಡಂತಾಯರಿಗೆ ಸಮ್ಮಾನ 


Team Udayavani, Nov 30, 2018, 1:55 AM IST

kundanthaya-29-11.jpg

ಪಡುಬಿದ್ರಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಕಾಪು ತಾ| ಘಟಕದ ಸಹಭಾಗಿತ್ವದಲ್ಲಿ ಸಂಪದ 2018 ‘ತಿಂಗಳ ಸಡಗರ’ ಕಾರ್ಯಕ್ರಮದಲ್ಲಿ ‘ಹಿರಿಯರೆಡೆಗೆ ನಮ್ಮ ನಡಿಗೆ’ ಕಾರ್ಯಕ್ರಮದನ್ವಯ ಹಿರಿಯ ಪತ್ರಕರ್ತ, ಸಾಹಿತಿ, ಜಾನಪದ ವಿದ್ವಾಂಸ ಕುಂಜೂರು ಲಕ್ಷ್ಮೀನಾರಾಯಣ ಕುಂಡಂತಾಯ ಅವರ ನಿವಾಸದಲ್ಲಿ ಸಾಹಿತ್ಯ ಪರಿಷತ್‌ ವತಿಯಿಂದ ಕುಂಡಂತಾಯ ದಂಪತಿಗೆ ಗೌರವ ಸಮರ್ಪಣೆ ನಡೆಸಿ ಸಂವಾದ ನಡೆಸಲಾಯಿತು. ಕಾಪು ತಾ| ಕನ್ನಡ ಸಾಹಿತ್ಯ ಪರಿಷತ್‌ಅಧ್ಯಕ್ಷ ಬಿ. ಪುಂಡಲೀಕ ಮರಾಠೆ ಅಧ್ಯಕ್ಷತೆ ವಹಿಸಿ ಪ್ರಸ್ತಾವಿಸಿ ಮಾತನಾಡಿ ಕುಂಡಂತಾಯರ ಸಾಹಿತ್ಯ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಸಂಘಟನ  ಕಾರ್ಯದರ್ಶಿ ಆರೂರು ತಿಮ್ಮಪ್ಪ ಶೆಟ್ಟಿ  ಮಾತನಾಡಿದರು.

ಮನಕೆ ಮುದ ನೀಡುವುದು ಸಾಹಿತ್ಯ
ಗೌರವ ಸ್ವೀಕರಿಸಿ ಮಾತನಾಡಿದ ಜಾನಪದ ವಿದ್ವಾಂಸ ಕೆ. ಎಲ್‌. ಕುಂಡಂತಾಯ ಅವರು , ಮನಸ್ಸಿಗೆ ಮುದ ನೀಡುವುದೇ ಸಾಹಿತ್ಯದ ಮೊದಲ ಉದ್ದೇಶ. ಆದರೆ ಇಂದಿನ ಸಾಹಿತ್ಯಕ್ಕೆ ಆ ಗುಣ ಇದೆಯೇ ಎಂಬ ಬಗ್ಗೆ ಯೋಚಿಸುವ ಅಗತ್ಯವಿದೆ. ಆದರೆ ಸಾಹಿತ್ಯ ಕ್ಷೇತ್ರದಲ್ಲಿ ಹಿಂದೆ ಆಗಿ ಹೋದ ನೂರಾರು ಸಾಹಿತಿಗಳು ವಿಪುಲವಾಗಿ ಮನಕ್ಕೆ ಆಹ್ಲಾದತೆಯನ್ನು ನೀಡುವ ಇಂತಹ ಸಾಹಿತ್ಯವನ್ನು ಸೃಷ್ಟಿಸಿದ್ದಾರೆ. ಪ್ರಸ್ತುತ ಇಂತಹ ಹಿರಿಯರ ಸಾಹಿತ್ಯಿಕ ಕೃಷಿಯು ಓದುವ ವಾತಾವರಣ ಸೃಷ್ಟಿ ಮಾಡುವ ಅಗತ್ಯವಿದೆ. ಜನಪದವು ನೈಜ ಸಾಹಿತ್ಯವಾಗಿದೆ. ಇದರಲ್ಲಿ ಕೃತಕತೆಯಿಲ್ಲ. ಸರಳವೂ ಮುಗ್ಧವೂ ಆದ ಜನಪದ ಹೃದಯದಿಂದ ಹೊಮ್ಮಿದ ಹೊಳಪುಗಳೇ ಜನಪದ ಸಾಹಿತ್ಯದ ಆತ್ಮ. ಇಂತಹ ನೈಜತೆಯೇ ಸಾಹಿತ್ಯದ ಆಂತರ್ಯವಾಗಬೇಕು ಎಂದರು. 

ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಕಸಾಪ ಬ್ರಹ್ಮಾವರ ತಾ| ಅಧ್ಯಕ್ಷ ಸೂರಾಲು ನಾರಾಯಣ ಮಡಿ, ಕಾಪು ತಾ|  ಕ. ಸಾ. ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಕುತ್ಯಾರು ಪ್ರಸಾದ್‌ ಶೆಟ್ಟಿ, ನಿವೃತ್ತ ಉಪನ್ಯಾಸಕ ಏಕನಾಥ ಡೋಂಗ್ರೆ, ಪುಷ್ಪಾ ಎಲ್‌. ಕುಂಡಂತಾಯ, ಕಸಾಪ ಕಾಪು ತಾ|  ಗೌರವ ಕೋಶಾಧಿಕಾರಿ ಎಸ್‌. ಎಸ್‌. ಪ್ರಸಾದ್‌, ಸದಸ್ಯರಾದ ಹರೀಶ್‌ ಕಟಾ³ಡಿ, ಪ್ರಜ್ಞಾ ಮಾರ್ಪಳ್ಳಿ, ದೆಂದೂರು ದಯಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ತಾಲೂಕು  ಘಟಕದ ಗೌರವ ಕಾರ್ಯದರ್ಶಿ ವಿದ್ಯಾ ಅಮಣ್ಣಾಯ ವಂದಿಸಿದರು.

ಟಾಪ್ ನ್ಯೂಸ್

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

7

Mangaluru: ಪಿ.ಎಂ. ರಾವ್‌ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.