ಮತ್ತೊಮ್ಮೆ ಸ್ಪರ್ಧೆಗೆ ಸಿದ್ಧವಾಗುತ್ತಿದೆ ಮಹಾನಗರ ಪಾಲಿಕೆ 


Team Udayavani, Nov 30, 2018, 10:35 AM IST

30-november-2.gif

ಮಹಾನಗರ: ಈ ಬಾರಿಯ ಸ್ವಚ್ಛ ಸರ್ವೇಕ್ಷಣಾ ಪಟ್ಟಿಯಲ್ಲಿ ದೇಶದಲ್ಲಿಯೇ ಘನತಾಜ್ಯ ನಿರ್ವಹಣೆಯಲ್ಲಿ ಅತ್ಯುತ್ತಮ ನಗರ ಎಂಬ ಮನ್ನಣೆ ಪಡೆದುಕೊಂಡು ಮೊದಲ ಸ್ಥಾನ ಗಳಿಸಿದ್ದ ಮಂಗಳೂರು ನಗರವು ಮುಂದಿನ ವರ್ಷದ ಸ್ಪರ್ಧೆಗೆ ಮತ್ತೆ ಅಣಿಯಾಗುತ್ತಿದೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಭಾರತ ಮಿಷನ್‌ ಅಡಿಯಲ್ಲಿ ದೇಶದ ಎಲ್ಲ ನಗರ, ಪಟ್ಟಣಗಳಲ್ಲಿ’ಸ್ವಚ್ಛ ಸರ್ವೇಕ್ಷಣ-2019′ ಅನ್ನು ಕೈಗೊಳ್ಳಲು ನಿರ್ಧರಿಸಿದ್ದು, ಅದರಂತೆ ಮಂಗಳೂರು ಮಹಾನಗರ ಪಾಲಿಕೆಯು ಈ ಸಮೀಕ್ಷೆಗೆ ಒಳಪಡಲಿದೆ. ಅದಕ್ಕಾಗಿ ಪಾಲಿಕೆ ಈಗಾಗಲೇ ಸಿದ್ಧತೆ ಆರಂಭಿಸಿದೆ. ಮುಂದಿನ ಬಾರಿಯೂ ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿ ದೇಶದ ಸ್ವಚ್ಛ ನಗರದ ಪಟ್ಟಿಯಲ್ಲಿ ಮಂಗಳೂರು ಅಗ್ರಸ್ಥಾನ ಪಡೆಯಬೇಕು ಎಂಬ ಆಶಯದೊಂದಿಗೆ ಪಾಲಿಕೆ ಹೆಜ್ಜೆ ಇಡುತ್ತಿದೆ.

ಸ್ವಚ್ಛ ಸರ್ವೇಕ್ಷಣ-2016ರಲ್ಲಿ 10 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆಯುಳ್ಳ ನಗರಗಳನ್ನು ಆಯ್ಕೆ ಮಾಡಲಾಗಿತ್ತು. 2017ರಲ್ಲಿ 1 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆಯುಳ್ಳ ನಗರಗಳನ್ನು ಆಯ್ಕೆ ಮಾಡಲಾಗಿತ್ತು. 2018ರಿಂದ ಭಾರತ ದೇಶದ ಎಲ್ಲ ನಗರಗಳನ್ನು ಆಯ್ಕೆ ಮಾಡಿಕೊಂಡಿದೆ. ನಗರಗಳ ಸಂಖ್ಯೆ ಹೆಚ್ಚಾಗುವುದರಿಂದ ಪೈಪೋಟಿ ಹೆಚ್ಚಿರಲಿದ್ದು, ಆ ನಿಟ್ಟಿನಲ್ಲಿ ಪಾಲಿಕೆ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ನಿಗಾವಹಿಸಿ ಕಾರ್ಯಚರಿಸುತ್ತಿದ್ದಾರೆ.

ಅಂಕಗಳಲ್ಲಿ ಬದಲಾವಣೆ
ಸ್ವಚ್ಛ ಸರ್ವೇಕ್ಷಣ-2019ರ ಅಂಗವಾಗಿ ಕೇಂದ್ರ ತಂಡ ಎಲ್ಲ ನಗರಗಳಲ್ಲಿ ಶೀಘ್ರದಲ್ಲೇ ಸಮೀಕ್ಷೆಯನ್ನು ನಡೆಸಲಿದೆ. ಇದಕ್ಕೆ ಸಂಬಂಧಿಸಿ 4 ಹಂತಗಳಲ್ಲಿ ಅಂಕಗಳನ್ನು ನಿಗದಿಪಡಿಸಲಾಗಿದೆ. ಒಟ್ಟು ಅಂಕಗಳು 5,000 ಇದ್ದು, ಇದರಲ್ಲಿ ಕೇಂದ್ರ ತಂಡದಿಂದ ನೇರ ಸಮೀಕ್ಷೆಯ 1250 ಅಂಕ, ಸಾರ್ವಜನಿಕ ಅಭಿಪ್ರಾಯ 1250 ಅಂಕ, ಸೇವಾ ಆಧಾರಿತ ಪ್ರಗತಿ 1,250 ಅಂಕ, ಹಾಗೂ ಸಟೀμಕೇಶನ್‌ಗೆ 12,500 ಅಂಕಗಳನ್ನು ನೀಡಲಾಗುತ್ತದೆ. 2018ರಲ್ಲಿ ಮೂರು ಹಂತಗಳಲ್ಲಿ ಒಟ್ಟು 4,000 ಅಂಕಗಳನ್ನು ನಿಗದಿಪಡಿಸಲಾಗಿತ್ತು.

ಹಸಿ ಕಸ-ಒಣ ಕಸ ಪ್ರತ್ಯೇಕಿಸಿ
ಮನಪಾ ಹಸಿ, ಒಣ ಕಸ ಸಂಗ್ರಹಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಿದೆ. ಸಾರ್ವಜನಿಕರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಬೇಕಾಗಿದೆ. ಈ ಬಗ್ಗೆ ಸಾರ್ವಜನಿಕರು ಅಷ್ಟು ಗಂಭೀರವಾಗಿ ಪರಿಗಣಿಸದೆ ಇರುವುದರಿಂದ ನಗರ ನೈರ್ಮಲ್ಯ ಮತ್ತು ತ್ಯಾಜ್ಯ ಸಂಗ್ರಹಣಾ ಕಾರ್ಯಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ. ಹೀಗಾಗಿ ಪಾಲಿಕೆಯಿಂದ ನಿಯೋಜಿಸಿದ ವಾಹನಗಳಿಗೆ ಹಸಿ ಹಾಗೂ ಒಣ ಕಸವನ್ನಾಗಿ ವಿಂಗಡಿಸಿ ಪ್ರತ್ಯೇಕವಾಗಿ ನೀಡಿ ಸಹಕರಿಸಿದರೆ ಸ್ವತ್ಛ ಮಂಗಳೂರು ಕಲ್ಪನೆ ಸಾಕಾರಗೊಳ್ಳಲಿದೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ಹಾಗೂ ನೈರ್ಮಲೀಕರಣಕ್ಕೆ ಸಂಬಂಧಿಸಿ ಸಾರ್ವಜನಿಕರ ದೂರುಗಳ ನಿರ್ವಹಣೆಗೆ ಮಹಾನಗರ ಪಾಲಿಕೆಯು ಸ್ವಚ್ಛತ ಆ್ಯಪ್‌ 2016ರಲ್ಲಿ ಬಿಡುಗಡೆಗೊಳಿಸಿತ್ತು. ಆದರೆ, ಈ ಅಪ್ಲಿಕೇಶನ್‌ ಡೌನ್‌ ಲೋಡ್‌ ಮತ್ತು ಉಪಯೋಗದಲ್ಲಿ ಬಹಳ ಹಿಂದೆ ಇದ್ದುದರಿಂದ ಮನಪಾವು ಅಂಕವನ್ನು ಕಳೆದುಕೊಂಡಿತ್ತು. ಆದ್ದರಿಂದ ಈ ಸ್ವಚ್ಛತ ಅಪ್ಲಿಕೇಶನ್‌ ಆ್ಯಂಡ್ರಾಯ್ಡ ಮತ್ತು ಐಒಎಸ್‌ ಆಧಾರಿತ ಮೊಬೈಲ್‌ಗ‌ಳಲ್ಲಿ ಡೌನ್‌ ಲೋಡ್‌ ಮಾಡಬಹುದಾಗಿದೆ. ಆದ್ದರಿಂದ ಸ್ವಚ್ಛತ ಆ್ಯಪ್‌ ಡೌನ್‌ಲೋಡ್‌ ಹಾಗೂ ಉಪಯೋಗದಿಂದ  ಹೆಚ್ಚು ಅಂಕ ಗಳಿಸಲು ಸಹಕಾರಿಯಾಗಬಹುದು.

ಸಾರ್ವಜನಿಕರ ಭಾಗವಹಿಸುವಿಕೆ ಅಗತ್ಯ
ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅತ್ಯಂತ ಮುಖ್ಯ. ಹೀಗಾಗಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಭಾರತ ಮಿಷನ್‌ ಅಡಿಯಲ್ಲಿ ಸಾರ್ವಜನಿಕರಿಗೆ ಕೇಳಲಾಗುವ ಅಥವಾ ಆನ್‌ಲೈನ್‌-ಆ್ಯಪ್‌ ಮುಖಾಂತರ ನಡೆಸಲಾಗುವ ಸಮೀಕ್ಷೆಯಲ್ಲಿ ಭಾಗವಹಿಸಬೇಕಾಗಿದೆ. ಸಾರ್ವಜನಿಕರ ಪಾಲ್ಗೊಳ್ಳುವಿಕೆಯ ಬಗ್ಗೆಯೂ ತಂಡ ಅಂಕಗಳನ್ನು ನಿಗದಿಪಡಿಸುತ್ತದೆ.

ಸಕಲ ಸಿದ್ಧತೆ
ಈ ಬಾರಿಯೂ ಸ್ವಚ್ಛತಾ ಸರ್ವೇಕ್ಷಣಾ ಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿರಲು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಅಧಿಕಾರಿಗಳಿಗೆ ಪಿಪಿಟಿ ಪ್ರಸ್ತುತಿಯ ಮೂಲಕ ಮಾಹಿತಿ ನೀಡಲಾಗಿದೆ. ಪಾಲಿಕೆಯೊಂದಿಗೆ ಸಾರ್ವಜನಿಕರು ಕೈ ಜೋಡಿಸಬೇಕು.
– ಕೆ. ಭಾಸ್ಕರ್‌, ಮೇಯರ್‌

‡ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

naa ninna bidalaare movie releasing on Nov 29

Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್‌ ಬಂತು: ನ.29ಕ್ಕೆ ಸಿನಿಮಾ ತೆರೆಗೆ

police-ban

Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

7

Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.