ನಂಜನಗೂಡಿನಲ್ಲಿ ಇಂದಿರಾ ಕ್ಯಾಂಟೀನ್‌ಗೆ ಚಾಲನೆ
Team Udayavani, Nov 30, 2018, 12:04 PM IST
ನಂಜನಗೂಡು: ನಗರದ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಇಂದಿರಾ ಕ್ಯಾಂಟೀನ್‌ಗೆ ಸಂಸದ ಆರ್.ಧ್ರುವನಾರಾಯಣ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕ್ಯಾಂಟೀನ್‌ನಲ್ಲಿ 5 ರೂ.ಗೆ ತಿಂಡಿ ಹಾಗೂ 10 ರೂ.ಗೆ ಊಟ ದೊರೆಯಲಿದೆ. ಪ್ರತಿ ಅಹಾರ ಪದಾರ್ಥವನ್ನೂ ಶುಚಿ, ರುಚಿಯಾಗಿ ನೀಡುವಂತೆ ಗುತ್ತಿಗೆ ದಾರರಿಗೆ ಸೂಚಿಸಿದರು
ಇಂದಿರಾ ಕ್ಯಾಂಟೀನ್ ನಿರ್ವಹಣೆಯ ಉಸ್ತುವಾರಿ ನಗರಸಭೆಯದ್ದಾಗಿದ್ದು, ಆವರಣವನ್ನು ಶುಚಿಯಾಗಿಟ್ಟುಕೊಂಡು ಗುಣಮಟ್ಟದ ಉಪಾಹಾರ, ಊಟ ನೀಡಬೇಕು ಎಂದರು. ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕೊಳ್ಳೇಗಾಲ, ತಿ.ನರಸೀಪುರ ಹಾಗೂ ನಂಜನಗೂಡಿನಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭವಾಗಿದೆ. ಇದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಅನ್ನಭಾಗ್ಯ ಹಾಗೂ ಇಂದಿರಾ ಕ್ಯಾಂಟೀನ್‌ಗಳು ಬಡವರ ಹಸಿವನ್ನು ನೀಗಿಸಿವೆ ಎಂದರು.
ಶಾಸಕ ಬಿ.ಹರ್ಷವರ್ಧನ್ ಮಾತನಾಡಿ, ಬಡವರ ಪರ ಯೋಜನೆಗಳಲ್ಲಿ ಅಕ್ರಮಗಳು ನಡೆಯುತ್ತಿವೆ. 10 ಲಕ್ಷ ರೂ.ವೆಚ್ಚದಲ್ಲಿ ಪೂರ್ಣಗೊಳಿಸಬೇಕಾದ ಇಂದಿರಾ ಕ್ಯಾಂಟೀನ್ ಕಟ್ಟಡಕ್ಕೆ 25 ಲಕ್ಷ ರೂ. ವ್ಯಯಿಸಲಾಗಿದೆ ಎಂದು ದೂರಿದರು. ಈ ವೇಳೆ ವರುಣಾ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕ ಕಳಲೆ ಎನ್.ಕೇಶವಮೂರ್ತಿ, ನಗರಸಭೆ ಅಧ್ಯಕ್ಷೆ ಪುಷ್ಪಾಲತಾ, ಉಪಾಧ್ಯಕ್ಷ ಪ್ರದೀಪ್,
ತಾಪಂ ಅಧ್ಯಕ್ಷ ಮಹದೇವಪ್ಪ, ಉಪಾಧ್ಯಕ್ಷ ಗೋಂದರಾಜನ್, ಸ್ಥಾಯಿ ಸಮಿತಿ ಅಧ್ಯಕ್ಷ ಶಿವಣ್ಣ, ಬಿ.ಎಸ್.ರಾಮು, ಬಸವರಾಜು, ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ಜಿಪಂ ಸದಸ್ಯರಾದ ಲತಾ, ಪುಷ್ಪಾ, ನಗರಸಭೆ ಸದಸ್ಯರಾದ ಚಂದ್ರಶೇಖರ್, ಖಾಲಿದ್ ಅಹಮದ್, ಬಾಬು, ಡಿ.ಆರ್.ರಾಜು, ಸುಂದರ್‌ರಾಜು, ಚಲುವರಾಜು, ಮಂಜುನಾಥ್, ಸುಂದರ,
ರಾಮಕೃಷ್ಣ, ಎಚ್.ಎಸ್.ಮಹದೇವಸ್ವಾಮಿ, ಸುಧಾ, ದೊರೆಸ್ವಾಮಿ, ವಿಜಯಾಂಬಿಕ, ತಹಶೀಲ್ದಾರ್ ಎಂ.ದಯಾನಂದ್, ತಾಪಂ ಇಒ ಕೃಷ್ಣರಾಜೇಅರಸ್, ಆಯುಕ್ತರಾದ ವಿಜಯ, ಎಂಜಿನಿಯರ್ ಭಾಸ್ಕರ್, ಆರ್.ಒ. ವೆಂಕಟೇಶ್, ಯೋಜನಾಧಿಕಾರಿ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಎಸ್.ಮೂಗಶೆಟ್ಟಿ, ಗುರುಸ್ವಾಮಿ, ಪಿ.ಶ್ರೀನಿವಾಸ್ ಇತರರಿದ್ದರು.
ಯತೀಂದ್ರರನ್ನು ಪೆದ್ದ ಎನ್ನಬಾರದಿತ್ತು: ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಅವರನ್ನು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಪೆದ್ದ ಎಂಬುದಾಗಿ ಕರೆಯಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದ ಶಾಸಕ ಹರ್ಷವರ್ಧನ್ ಅವರು, ಯತೀಂದ್ರ ಹಾಗೂ ಅವರ ಸಹೋದರ ರಾಕೇಶ್ ತಾವು ಆತ್ಮೀಯ ಸ್ನೇಹಿತರಾಗಿದ್ದೇವೆ ಎಂದು ತಿಳಿಸಿದರು.
ಇತ್ತೀಚೆಗೆ ಮಾಜಿ ಸಚಿವ ಶ್ರೀನಿವಾಸ್‌ಪ್ರಸಾದ್ ನಂಜನಗೂಡಿನಲ್ಲಿ ಸುದ್ದಿಗೋಷ್ಠಿ ನಡೆಸಿ, “ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ತಮಗೆ ಅವರ ಪುತ್ರನಾದ ಪೆದ್ದ ಡಾ.ಯತೀಂದ್ರನನ್ನುಸೋಲಿಸುವುದು ಕಷ್ಟವಾಗಿರಲಿಲ್ಲ. ಆದರೆ, ಬಿಜೆಪಿ ಮುಖಂಡರು ತಮ್ಮ ಮಾತನ್ನು ಕೇಳಲಿಲ್ಲ’ ಎಂದು ತಿಳಿಸಿದರು.
ಪ್ರತಿಭಟನೆ: ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭದ ಪೋಸ್ಟರ್‌ನಲ್ಲಿ ಶಾಸಕ ಡಾ.ಯತೀಂದ್ರ ಹೆಸರಿಲ್ಲದ್ದಕ್ಕೆ ಅವರ ಬೆಂಬಲಿಗರು ಕೆಲ ಕಾಲ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.