ಲ್ಯಾನ್ಸ್‌ಡೌನ್ ಕಟ್ಟಡಕ್ಕೆ ಖಾದರ್ ಭೇಟಿ
Team Udayavani, Nov 30, 2018, 12:04 PM IST
ಮೈಸೂರು: ಲ್ಯಾನ್ಸ್‌ಡೌನ್ ಬಿಲ್ಡಿಂಗ್ ಪುನರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಜ್ಞರ ವರದಿ ಪರಿಶೀಲಿಸಿ, ಕಟ್ಟಡದ ಪಾರಂಪರಿಕತೆ ಉಳಿಸಿಕೊಂಡು ಶೀಘ್ರವೇ ಉತ್ತಮ ಕಟ್ಟಡ ನಿರ್ಮಾಣ ಮಾಡುವುದಾಗಿ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಹೇಳಿದರು.
ಕಳೆದ ಹಲವು ದಿನಗಳಿಂದ ಲ್ಯಾನ್ಸ್‌ಡೌನ್ ಕಟ್ಟಡ ಪುನರ್ ನಿರ್ಮಾಣ ಕಾಮಗಾರಿ ನೆನಗುದಿಗೆ ಬಿದ್ದಿರುವ ಹಿನ್ನೆಲೆಯಲ್ಲಿ ಗುರುವಾರ ಸ್ಥಳಕ್ಕೆ ಭೇಟಿ ನೀಡಿದ ಅವರು, ಲ್ಯಾನ್ಸ್‌ಡೌನ್ ಬಿಲ್ಡಿಂಗ್‌ನ ಸದ್ಯದ ಪರಿಸ್ಥಿತಿ ಹಾಗೂ ಕಟ್ಟಡದ ಗುಣಮಟ್ಟವನ್ನು ಪರಿಶೀಲಿಸಿದರು.
ಅರ್ಧಗಂಟೆಗೂ ಹೆಚ್ಚು ಕಾಲ ಸ್ಥಳದಲ್ಲಿದ್ದ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ನಂತರ ಮಾತನಾಡಿದ ಅವರು, ಲ್ಯಾನ್ಸ್‌ಡೌನ್ ಕಟ್ಟಡವನ್ನು ಸಂಪೂರ್ಣವಾಗಿ ವೀಕ್ಷಣೆ ಮಾಡಿದ್ದು, ಕಟ್ಟಡ ಗಟ್ಟಿಮುಟ್ಟಾಗಿದೆ. ಆದರೆ, ವ್ಯಾಪಾರದ ದೃಷ್ಟಿಯಿಂದ ಎಷ್ಟು ಸುರಕ್ಷಿತ ಎಂಬುದನ್ನು ಚರ್ಚಿಸಿ ಹಾಗೂ ಕಟ್ಟಡ ಪುನರ್ ನವೀಕರಣಕ್ಕೆ ಸಂಬಂಧಿಸಿದಂತೆ ಎರಡು ನುರಿತ ತಜ್ಞರ ತಂಡ ನೀಡಿರುವ ವರದಿ ಪರಿಶೀಲಿಸಿ ಶೀಘ್ರವೇ ಕ್ರಮಕೈಗೊಳ್ಳಲಾಗುವುದು.
ಕಟ್ಟಡದ ಪಾರಂಪರಿಕತೆ ಉಳಿಸಿಕೊಂಡು ಉತ್ತಮ ಕಟ್ಟಡ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡ, ಮೇಯರ್ ಪುಷ್ಪಲತಾ, ಮಾಜಿ ಮೇಯರ್ ಅಯೂಬ್ ಖಾನ್, ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.