ಮಕ್ಕಳ ಸುರಕ್ಷತೆ ಗಮನದಲ್ಲಿರಿಸಿ ಮೇಲ್ಸೇತುವೆ ನಿರ್ಮಿಸಿ


Team Udayavani, Nov 30, 2018, 3:15 PM IST

30-november-13.gif

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯ ವೇಳೆ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಮುಖ್ಯವಾಗಿ ಗಮನದಲ್ಲಿರಿಸಬೇಕು. ಹೆದ್ದಾರಿ ವಿಸ್ತರಣೆ ವೇಳೆ ಮೇಲ್ಸೇತುವೆಯನ್ನು ಶಾಲಾ ಮಕ್ಕಳ ಸುರಕ್ಷತೆಗೆ ಅನುಗುಣವಾಗಿ ನಿರ್ಮಿಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ ಘಟನೆ ಉಪ್ಪಿನಂಗಡಿ ಗ್ರಾಮ ಪಂಚಾಯತ್‌ನ ಮಕ್ಕಳ ಗ್ರಾಮ ಸಭೆಯಲ್ಲಿ ನಡೆದಿದೆ.

ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷ ಕೆ. ಅಬ್ದುಲ್‌ ರಹಿಮಾನ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಮಕ್ಕಳ ಗ್ರಾಮಸಭೆಯಲ್ಲಿ ಸೈಂಟ್‌ ಮೇರೀಸ್‌ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಗುರುಪ್ರಸಾದ್‌, ಹೆದ್ದಾರಿ ವಿಸ್ತರಣೆ ಕಾಮಗಾರಿಯ ವೇಳೆ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮೇಲ್ಸೇತುವೆಯ ನಿರ್ಮಾಣ ಕಾರ್ಯ ನಡೆಯಬೇಕಾಗಿದೆ ಎಂದು ಆಗ್ರಹಿಸಿದರು. ಈ ಬೇಡಿಕೆಗೆ ವಿದ್ಯಾರ್ಥಿ ಸಮೂಹದ ಒಕ್ಕೊರಲ ಬೆಂಬಲ ವ್ಯಕ್ತವಾದಾಗ ಪ್ರತಿಕ್ರಿಯಿಸಿದ ಅಧ್ಯಕ್ಷರು, ಈ ಬಗ್ಗೆ ಹೆದ್ದಾರಿ ಇಲಾಖೆ ಪ್ರಾಧಿಕಾರಕ್ಕೆ ವಿನಂತಿಸಲಾಗುವುದೆಂದು ಭರವಸೆ ನೀಡಿದರು.

ಮಕ್ಕಳ ಸಹಾಯವಾಣಿ ವಿಭಾಗದ ಯೋಗೀಶ್‌ ಮಲ್ಲಿಗೆಮಾಡು ಮಾತನಾಡಿ, ಸುರಕ್ಷಿತ ಬದುಕು, ಅಭಿವೃದ್ಧಿ ಹಾಗೂ ಇತರ ಹಕ್ಕುಗಳ ಬಗ್ಗೆ ವಿವರ ನೀಡಿದರು. ಗ್ರಾ.ಪಂ. ಉಪಾಧ್ಯಕ್ಷೆ ಹೇಮಲತಾ ಶೆಟ್ಟಿ, ಸದಸ್ಯರಾದ ಚಂದ್ರಶೇಖರ್‌ ಮಡಿವಾಳ, ಭಾರತಿ ಪುಷ್ಪಕುಂಜ, ಚಂದ್ರಾವತಿ ಹೆಗ್ಡೆ, ಸುಶೀಲಾ, ಇಬ್ರಾಹಿಂ, ಶಿಕ್ಷಕರಾದ ಗುಡ್ಡಪ್ಪ ಬಲ್ಯ, ದೇವಕಿ ಭಾಗವಹಿಸಿದ್ದರು. ಪಿಡಿಒ ಅಬ್ದುಲ್‌ ಅಸಫ್ ಕಾರ್ಯಕ್ರಮ ನಿರೂಪಿಸಿದರು.

ಪ್ರಾಯೋಗಿಕ ವರದಿ ಮಂಡನೆ 
ಇಂದ್ರಪ್ರಸ್ಥ ವಿದ್ಯಾರ್ಥಿಗಳಾದ ಅನಿಕೇತ್‌ ಕುಮಾರ್‌ ಹಾಗೂ ಸಾತ್ವಿಕ್‌ ತ್ಯಾಜ್ಯ ನಿರ್ಮೂಲನೆಯಲ್ಲಿ ನೈಸರ್ಗಿಕ ವಸ್ತುಗಳ ಬಳಕೆಯ ಸಾಧ್ಯತೆ ಎಂಬ ವಿಚಾರದಲ್ಲಿ ಪ್ರಾಯೋಗಿಕ ವರದಿಯನ್ನು ಮಂಡಿಸಿದರು. ಯು. ಋತ್ವಿಕ್‌ ಪೈ, ಸಮರ್ಥ್ ಮತ್ತಿತರ ವಿದ್ಯಾರ್ಥಿಗಳು ನೈಸರ್ಗಿಕ ವಸ್ತುಗಳಿಂದಾಗಿ ದಿನನಿತ್ಯದ ಕಾರ್ಯ ಚಟುವಟಿಕೆಗಳಲ್ಲಿ ನೀರಿನ ಮಿತಬಳಕೆ ಸಾಧ್ಯ ಎಂಬ ವಿಷಯದಲ್ಲೂ ಅಧ್ಯಯನ ವರದಿಯ ಮಂಡನೆ ಮಾಡಿ, ಪರಿಸರ ಸ್ವಚ್ಛತೆ ಹಾಗೂ ರಕ್ಷಣೆಗೆ ಎಲ್ಲರೂ ಕೈ ಜೋಡಿಸಬೇಕೆಂದು ವಿನಂತಿಸಿದರು.

ವಿಷಕಾರಿ ಆಹಾರದಿಂದ ಮಕ್ಕಳನ್ನು ರಕ್ಷಿಸಿ
ಹೆದ್ದಾರಿ ಹಾಗೂ ರಸ್ತೆ ಬದಿಗಳಲ್ಲಿ ಫಾಸ್ಟ್‌ ಫ‌ುಡ್‌ಗಳ ಹಾವಳಿ ಮೇರೆ ಮೀರಿದ್ದು, ನೂರಾರು ವಿದ್ಯಾರ್ಥಿಗಳು ಇಂತಹ ಆಹಾರಗಳಿಂದ ಆಕರ್ಷಿತರಾಗಿ ಆರೋಗ್ಯವನ್ನು ಕೆಡಿಸಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಅಸುರಕ್ಷಿತ ಸ್ಥಳಗಳಲ್ಲಿ ಆಹಾರ ವಸ್ತುಗಳ ಮಾರಾಟಕ್ಕೆ ತಡೆಯೊಡ್ಡಬೇಕು. ಆಹಾರ ವಸ್ತುಗಳಿಗೆ ವಿಷಕಾರಿ ರಾಸಾಯನಿಕಗಳನ್ನು ಬೆರೆಸುವುದನ್ನು ತಡೆಗಟ್ಟಬೇಕು. ಈ ಕುರಿತು ಅಗತ್ಯ ಕ್ರಮಗಳನ್ನು ಕೈಗೊಂಡು ವಿಷಕಾರಿ ಆಹಾರ ಪದಾರ್ಥಗಳಿಂದ ಮಕ್ಕಳನ್ನು ರಕ್ಷಿಸಿ ಎಂದು ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿ ಸೈಫ‌ುದ್ದೀನ್‌ ಅಗ್ರಹಿಸಿದರು. ಮಕ್ಕಳ ಗ್ರಾಮ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯವೂ ಆಗಬೇಕೆಂದು ಆಗ್ರಹಿಸಿದರು. ಪ್ರತಿಕ್ರಿಯಿಸಿದ ಗ್ರಾ.ಪಂ. ಅಧ್ಯಕ್ಷರು, ಆಹಾರ ಮತ್ತು ನಾಗರಿಕ ಪೂರೈಕೆ ವಿಭಾಗದ ಅಧಿಕಾರಿಗಳ ಗಮನ ಸೆಳೆಯುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.