ಪಟ್ಟಿಬಾವು ಸೇತುವೆ ಕಾಮಗಾರಿ : ಸಮಾಲೋಚನ ಸಭೆ


Team Udayavani, Dec 1, 2018, 1:15 AM IST

bridge-30-11.jpg

ಅಜೆಕಾರು: ಕುಕ್ಕುಜೆ ಪಟ್ಟಿಬಾವುನ ಸೇತುವೆ ಕಾಮಗಾರಿ ಕೆಲ ತಾಂತ್ರಿಕ ಸಮಸ್ಯೆಗಳಿಂದ ಕೆಲವು ತಿಂಗಳುಗಳ ಕಾಲ ಸ್ಥಗಿತಗೊಂಡಿತ್ತು. ಇದೀಗ ಸ್ಥಳೀಯಾಡಳಿತದ ಸತತ ಪ್ರಯತ್ನದ ಫ‌ಲವಾಗಿ ಮತ್ತೇ ಕಾಮಗಾರಿ ಪ್ರಾರಂಭಗೊಂಡಿದ್ದು 2019ರ ಫೆಬ್ರವರಿ ವೇಳೆಗೆ ಕಾಮಗಾರಿ ಪೂರ್ಣಗೊಳ್ಳುವ ಭರವಸೆ ಅಧಿಕಾರಿಗಳಿಂದ ದೊರಕಿದೆ. ಕುಕ್ಕುಜೆ, ಎರ್ಲಪಾಡಿ, ಶಿರೂರು ಗ್ರಾಮಸ್ಥರ ಬಹುಬೇಡಿಕೆಯ ಪಟ್ಟಿಬಾವು ಸೇತುವೆ ಕಾಮಗಾರಿ ಪ್ರಾರಂಭಗೊಂಡು 2 ವರ್ಷ ಪೂರ್ಣಗೊಂಡಿದ್ದು ಕಾಮಗಾರಿ ಕುಂಟುತ್ತಾ ಸಾಗಿ ಮಾತ್ರ ಸ್ಥಳೀಯರಲ್ಲಿ ನಿರಾಶೆ ಮೂಡಿಸಿತ್ತು.

ಕುಕ್ಕುಜೆ, ಎರ್ಲಪಾಡಿ ಹಾಗೂ ಶಿರೂರು ಗ್ರಾಮಗಳ ನಡುವೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸ್ಥಳೀಯರ ಬೇಡಿಕೆಯಂತೆ ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ಪಟ್ಟಿಬಾವು ಸೇತುವೆ ನಿರ್ಮಾಣಕ್ಕೆ ಪ್ರಯತ್ನಪಟ್ಟು ರಾಜ್ಯ ಸರಕಾರದಿಂದ ಅನುದಾನ ಮಂಜೂರುಗೊಳಿಸುವಲ್ಲಿ ಯಶಸ್ವಿಯಾಗಿದ್ದರು. ಕಡ್ತಲ ಗ್ರಾಮ ಪಂಚಾಯತು ವ್ಯಾಪ್ತಿಯ ಕುಕ್ಕುಜೆ ಹಾಗೂ ಎರ್ಲಪಾಡಿಯ ನಡುವೆ ಹರಿಯುತ್ತಿರುವ ಸುವರ್ಣ ನದಿಗೆ ಅಡ್ಡಲಾಗಿ ಅಣೆಕಟ್ಟು ಹಾಗೂ ಸೇತುವೆ ನಿರ್ಮಾಣಕ್ಕಾಗಿ ಸಣ್ಣ ನೀರಾವರಿ ಇಲಾಖೆುಂದ ರೂ. 3 ಕೋಟಿ ಅನುದಾನ ಮಂಜೂರುಗೊಂಡು ಈ ಕಾಮಗಾರಿಗೆ 2015-16ನೇ ಸಾಲಿನಲ್ಲಿ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿತ್ತು.

ಪಟ್ಟಿಬಾವು ಸೇತುವೆಯು ಸ್ಥಳೀಯ ಜನರ ಹಲವು ದಶಕಗಳ ಬೇಡಿಕೆಯಾಗಿದ್ದು ಈ ಸೇತುವೆ ನಿರ್ಮಾಣದಿಂದ ಕುಕ್ಕುಜೆ, ಶಿರೂರು ಪ್ರದೇಶದ ಜನತೆಗೆ ಬೈಲೂರು, ಕಾರ್ಕಳ ಸಂಪರ್ಕಿಸಲು ಹಾಗೂ ಬೈಲೂರು, ಎರ್ಲಪಾಡಿ ಭಾಗದ ಜನರಿಗೆ ಕುಕ್ಕುಜೆ, ಪೆರ್ಡೂರು, ಹೆಬ್ರಿ ಸಂಪರ್ಕಿಸಲು ಕೇವಲ 10ರಿಂದ 15ಕಿ.ಮೀ.ನಷ್ಟು ಹತ್ತಿರವಾಗಲಿದೆ. ಈಗ ಈ ಭಾಗದ ಸ್ಥಳೀಯರು ಕಾರ್ಕಳ, ಅಜೆಕಾರು ಸುತ್ತುಬಳಸಿ ಸುಮಾರು 30ರಿಂದ 35 ಕಿ.ಮೀ. ದೂರ ಪ್ರಯಾಣಿಸುತ್ತಿದ್ದಾರೆ. ಈ ಸಂಕಷ್ಟಕ್ಕೆ ಸೇತುವೆ ನಿರ್ಮಾಣದಿಂದ ಮುಕ್ತಿ ದೊರೆಯಲಿದೆ. 

ವಿಳಂಬಗೊಂಡ ಕಾಮಗಾರಿ: ಕಾಮಗಾರಿ ಮುಕ್ತಾಯದ ಅವಧಿಯು 2018ರ ಮಾರ್ಚ್‌ಗೆ ಅಂತಿಮಗೊಂಡಿದ್ದು ಅವಧಿ ಮುಗಿದು ಈಗಾಗಲೇ 8 ತಿಂಗಳು ಕಳೆದಿದೆ. ಕಡ್ತಲ, ಎರ್ಲಪಾಡಿ, ಭೈರಂಪಳ್ಳಿ ಸೇರಿದಂತೆ ಮೂರು ಗ್ರಾಮ ಪಂಚಾಯತ್‌ ಪ್ರದೇಶಗಳನ್ನು ಬೆಸೆಯುವ ನಿಟ್ಟಿನಲ್ಲಿ ಪಟ್ಟಿಬಾವು ಪ್ರದೇಶಕ್ಕೆ ಮಂಜೂರಾದ ಈ ಕಾಮಗಾರಿುಂದಾಗಿ ಸ್ಥಳೀಯ ಪರಿಸರದ ಜನರು ಸಂತಸಪಟ್ಟಿದ್ದರು. ಆದರೆ ಕಾಮಗಾರಿ ಪ್ರಾರಂಭಗೊಂಡು 2 ವರ್ಷ ಕಳೆದರೂ ಕಾಮಗಾರಿ ಅರ್ಧದಲ್ಲಿಯೇ ಸ್ಥಗಿತಗೊಂಡಿರುವ ಬಗ್ಗೆ ಕಳೆದ ಅಕ್ಟೋಬರ್‌ ತಿಂಗಳಿನಲ್ಲಿ ಸ್ಥಳೀಯರು ಪ್ರತಿಭಟನೆಯ ಹಾದಿ ಹಿಡಿದಿದ್ದರು. ಸ್ಥಳೀಯ ಗ್ರಾಮ ಪಂಚಾಯತು ಹಾಗೂ ಸ್ಥಳೀಯ ನಾಗರಿಕರ ನಿರಂತರ ಒತ್ತಡದ ಪರಿಣಾಮ ಇದೀಗ ಮತ್ತೇ ಸೇತುವೆ ಹಾಗೂ ಕಿಂಡಿ ಅಣೆಕಟ್ಟು ನಿರ್ಮಾಣದ ಕಾರ್ಯ ಭರದಿಂದ ಸಾಗುತ್ತಿದೆ. ಮತ್ತೆ ಪ್ರಾರಂಭಗೊಂಡ ಪಟ್ಟಿಬಾವು ಸೇತುವೆ ಹಾಗೂ ಕಿಂಡಿ ಅಣೆಕಟ್ಟಿನ ಕಾಮಗಾರಿ ಬಗ್ಗೆ ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದು ಕಾಮಗಾರಿ ಗುಣಮಟ್ಟದಿಂದ ನಡೆಯುವಂತೆ ಜನಪ್ರತಿನಿಧಿಗಳು ಹಾಗೂ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಮನವಿ ಕೊಡಲಿ
ಪಟ್ಟಿಬಾವು ಸೇತುವೆ 2018ರ ಮಾರ್ಚ್‌ ವೇಳೆಗೆ ಮುಗಿಯಬೇಕಿತ್ತು. ಆದರೆ ಕೆಲ ತಾಂತ್ರಿಕ ಸಮಸ್ಯೆಗಳಿಂದಾಗಿ ಕಾಮಗಾರಿ ವಿಳಂಬಗೊಂಡಿತ್ತು. ಇದೀಗ ಕಾಮಗಾರಿ ಮತ್ತೆ ಪ್ರಾರಂಭಗೊಂಡಿದ್ದು 2019ರ ಫೆಬ್ರವರಿ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಂಡು ಮಾರ್ಚ್‌ ಅಂತ್ಯಕ್ಕೆ ಸಾರ್ವಜನಿಕರಿಗೆ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುವುದು.
– ಎಸ್‌.ಪಾಲಣ್ಣ, ಸಹಾಯಕ ಎಂಜಿನಿಯರ್‌, ಸಣ್ಣ ನೀರಾವರಿ ಇಲಾಖೆ, ಉಡುಪಿ

ಸರ್ಕಲ್‌ ಅಗತ್ಯ
ಪಟ್ಟಿಬಾವು ಸೇತುವೆಯ ಕಾಮಗಾರಿ ಳಂಬವಾದ ಬಗ್ಗೆ ಸ್ಥಳೀಯ ಜನತೆ ಹಾಗೂ ಪಂಚಾಯತ್‌ ಆಡಳಿತ ನಿರಂತರ ಒತ್ತಡ ತಂದ ಪರಿಣಾಮ ಇದೀಗ ಮತ್ತೇ ಕಾಮಗಾರಿ ಪ್ರಾರಂಭಗೊಂಡಿದೆ. ಸೇತುವೆ ನಿರ್ಮಾಣದಿಂದಾಗಿ ಸ್ಥಳೀಯರ 7 ದಶಕಗಳ ಕನಸು 2019ರ ಪ್ರಾರಂಭದಲ್ಲಿಯೇ ನನಸಾಗಲಿದೆ.
– ಅರುಣ್‌ ಕುಮಾರ್‌ ಹೆಗ್ಡೆ, ಅಧ್ಯಕ್ಷರು, ಗ್ರಾಮ ಪಂಚಾಯತ್‌ ಕಡ್ತಲ

ಟಾಪ್ ನ್ಯೂಸ್

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Brahmavara: ಉದ್ಯೋಗ ಭರವಸೆ ನೀಡಿ ಹಣ ವಂಚನೆ

12

Manipal: ರೈಲಿನಲ್ಲಿ ಲಕ್ಷಾಂತರ ರೂ. ಒಡವೆ ಕಳ್ಳತನ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

6

Malpe ಬೀಚ್‌ ಸ್ವಚ್ಛತೆ: 3 ದಿನದಲ್ಲಿ 26 ಲೋಡ್‌ ಕಸ ಸಂಗ್ರಹ

5

Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Arrest

Mangaluru: ಮದ್ಯ ಅಕ್ರಮ ದಾಸ್ತಾನು: ಮನೆ ಮೇಲೆ ಅಬಕಾರಿ ದಾಳಿ; ಮದ್ಯ ಸಹಿತ ಇಬ್ಬರು ವಶಕ್ಕೆ

1

Brahmavara: ಉದ್ಯೋಗ ಭರವಸೆ ನೀಡಿ ಹಣ ವಂಚನೆ

12

Manipal: ರೈಲಿನಲ್ಲಿ ಲಕ್ಷಾಂತರ ರೂ. ಒಡವೆ ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.