8ರಿಂದ ಸೂರ್ಯ ನಗರಿಯಲ್ಲಿ ನುಡಿ ಜಾತ್ರೆ


Team Udayavani, Dec 1, 2018, 10:43 AM IST

gul-2.jpg

ಕಲಬುರಗಿ: ಸೂರ್ಯ ನಗರಿಯ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಡಿ.8 ಮತ್ತು 9ರಂದು ನಡೆಯಲಿದ್ದು, ಈ ಬಾರಿಯ ನುಡಿ ಜಾತ್ರೆ ಹೊಸದೊಂದು ಗರಿಮೆಯೊಂದಿಗೆ ನಡೆಯುತ್ತಿದೆ. ರಾಜ್ಯದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ಗಳ ಇತಿಹಾಸದಲ್ಲೇ 17 ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಸಂಘಟಿಸಿದ ಏಕೈಕ ಜಿಲ್ಲೆ ಎನ್ನುವ ಹೆಮ್ಮೆಯಿಂದ ಕನ್ನಡದ ತೇರು ಎಳೆಯಲು ಕಲಬುರಗಿ ಸಜ್ಜಾಗಿದೆ.

ನಗರದ ಕನ್ನಡ ಭವನದಲ್ಲಿ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ, ಇಲ್ಲಿನ ಬಾಪುಗೌಡ ದರ್ಶನಾಪುರ ರಂಗಮಂದಿರದಲ್ಲಿ 17ನೇ ಸಮ್ಮೇಳನ ಎರಡು ದಿನಗಳ ಕಾಲ ಹಿರಿಯ ಸಾಹಿತಿ, ಕನ್ನಡ ಪ್ರಾಧ್ಯಾಪಕಿ ಡಾ| ನಾಗಾಬಾಯಿ ಬುಳ್ಳಾ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ. ಇದುವರೆಗೂ ರಾಜ್ಯದ ಯಾವುದೇ ಜಿಲ್ಲಾ ಕನ್ನಡ ಪರಿಷತ್‌ಗಳು 17 ಸಮ್ಮೇಳನಗಳನ್ನು ನಡೆಸಿದ ಉದಾಹರಣೆಗಳು ಇಲ್ಲ. ಮೈಸೂರು ಮತ್ತಿತರ ಜಿಲ್ಲೆಗಳ 15 ಸಮ್ಮೇಳನಗಳನ್ನು ಮಾತ್ರ ಮಾಡಿವೆ. ಆದರೆ, ಸುವರ್ಣ ಮಹೋತ್ಸವದ ಆಚರಣೆಯಲ್ಲಿ ಕಲಬುರಗಿ 17ನೇ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಸಂಘಟಿಸಿದ ಏಕೈಕ ಜಿಲ್ಲೆಯಾಗಿದೆ ಎಂದರು.

ಡಿ.8ರಂದು ಬೆಳಗ್ಗೆ 11 ಗಂಟೆಗೆ ಸಮ್ಮೇಳನಕ್ಕೆ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಉದ್ಘಾಟಿಸುವರು. ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ ಸ್ಮರಣ ಸಂಚಿಕೆ, ಚಿಗುರೆಲೆ ಕವನ ಸಂಕಲನ ಬಿಡುಗಡೆ ಮತ್ತು ಮಳಿಗೆಗಳ ಉದ್ಘಾಟನೆ ನೆರವೇರಿಸುವರು. ಶಾಸಕರಾದ ದತ್ತಾತ್ರೇಯ ಪಾಟೀಲ
ರೇವೂರ, ಖನೀಜ್‌ ಫಾತಿಮಾ, ಡಾ| ಉಮೇಶ ಜಾಧವ, ಎಂ.ವೈ. ಪಾಟೀಲ, ಸುಭಾಷ ಗುತ್ತೇದಾರ, ಡಾ| ಅಜಯ್‌
ಸಿಂಗ್‌, ಬಸವರಾಜ ಮತ್ತಿಮಡು, ರಾಜಕುಮಾರ ಪಾಟೀಲ ತೇಲ್ಕೂರ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷ ಡಾ| ವೀರಣ್ಣಾ ದಂಡೆ ಹಾಜರಿರುವರು ಎಂದು ವಿವರಿಸಿದರು.

ಸರ್ವಾಧ್ಯಕ್ಷರ ಮೆರವಣಿಗೆ: ಡಿ.8 ರಂದು ಬೆಳಗ್ಗೆ 9 ಗಂಟೆಗೆ ನಗರದ ನೆಹರೂ ಗಂಜ್‌ನ ನಗರೇಶ್ವರ ಬಾಲ ಭವನದಿಂದ ಬಾಪುಗೌಡ ದರ್ಶನಾಪುರ ರಂಗಮಂದಿರದ ವರೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಜಿಲ್ಲಾ ಪಂಚಾಯಿತಿ ಅಧಕ್ಷೆ ಸುವರ್ಣಾ ಮಲಾಜಿ ಮೆರವಣೆಗೆಗೆ ಚಾಲನೆ ನೀಡುವರು. ಮಹಾನಗರ ಪಾಲಿಕೆ ಮೇಯರ್‌ ಮಲ್ಲಮ್ಮ ವಳಕೇರಿ ಅತಿಥಿಗಳಾಗಿ ಆಗಮಿಸುವರು. ಮೆರವಣಿಗೆಯಲ್ಲಿ 15ಕ್ಕೂ ಹೆಚ್ಚು ವಿವಿಧ ವೈವಿಧ್ಯಮಯ ಕಲಾ ತಂಡಗಳು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು, ಕನ್ನಡ ಪರ ಸಂಘಟನೆಗಳು, ಜಿಲ್ಲೆಯ ಗಣ್ಯರು, ಸಾಹಿತಿಗಳು ಪಾಲ್ಗೊಳ್ಳುವರು.

ಇದಕ್ಕೂ ಮುನ್ನ ಬೆಳಗ್ಗೆ 8:30ಕ್ಕೆ ರಾಷ್ಟ್ರ ಧ್ವಜಾರೋಹಣವನ್ನು ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಪರಿಷತ್‌ ಧ್ವಜಾರೋಹಣವನ್ನು ಕಸಾಪ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ ನೆರವೇರಿಸುವರು. 

 ವಿವಿಧ ಗೋಷ್ಠಿಗಳು: ಎರಡು ದಿನಗಳ ಅಕ್ಷರ ಜಾತ್ರೆಯಲ್ಲಿ ವಿಚಾರಗೋಷ್ಠಿ ಮತ್ತು ಕವಿ ಗೋಷ್ಠಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಕನ್ನಡ ಸಾಹಿತ್ಯಕ್ಕೆ ಸತ್ವ ತುಂಬಿದ ನೆಲೆಗಳು, ಜಿಲ್ಲೆಯ ಹೆಜ್ಜೆ ಗುರುತು, ಭಾಷಾಂತರ-ವಿಮರ್ಶೆ ಮತ್ತು ಸೌಲಭ್ಯ-ಸದುಪಯೋಗ-ಪ್ರಯತ್ನಶೀಲತೆ ವಿಷಯ ಕುರಿತು ನಾಲ್ಕು ಗೋಷ್ಠಿಗಳು ನಡೆಯಲಿವೆ ಎಂದರು. 

ಸಮ್ಮೇಳನಾಧ್ಯಕ್ಷರ ಬದುಕು-ಬರಹ ಕುರಿತು ವಿಶೇಷ ಉಪನ್ಯಾಸ, ಎರಡು ಕವಿಗೋಷ್ಠಿಗಳು, ಒಂದು ಬಹಿರಂಗ ಅಧಿವೇಶನ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಸಮಾರೋಪ: ಡಿ.9ರಂದು ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಹೆಸರಾಂತ ಕವಿ ಜರಗನಹಳ್ಳಿ ಶಿವಶಂಕರ ಸಮಾರೋಪ ಭಾಷಣ ಮಾಡುವರು. ವಿಧಾನ ಪರಿಷತ್‌ ಸದಸ್ಯರಾದ ಕೆ.ಬಿ. ಶರಣಪ್ಪ, ಇಕ್ಬಾಲ ಅಹ್ಮದ್‌ ಸರಡಗಿ, ಶರಣಪ್ಪ ಮಟ್ಟೂರ, ಬಿ.ಜಿ. ಪಾಟೀಲ, ಡಾ| ಚಂದ್ರಶೇಖರ ಪಾಟೀಲ ಅತಿಥಿಗಳಾಗಿ ಪಾಲ್ಗೊಳ್ಳುವರು. ಇದೇ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ವಿವರಿಸಿದರು. 

5,000 ಜನ ಪಾಲ್ಗೊಳ್ಳುವ ನಿರೀಕ್ಷೆ: ಎರಡು ದಿನಗಳ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಈಗಾಗಲೇ 1,000 ಪ್ರತಿನಿಧಿಗಳು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಇನ್ನು 300 ಜನರು ಡಿ.2ರೊಳಗೆ ಹೆಸರು ನೋಂದಾಯಿಸಿಕೊಳ್ಳುವ ಅವಕಾಶ ಇದ್ದು, ಒಟ್ಟಾರೆ ಐದು ಸಾವಿರ ಜನ ಕನ್ನಡಾಭಿಮಾನಿಗಳು ಸಮೇಳನದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಕಸಾಪ ಗೌರವ ಕಾರ್ಯದರ್ಶಿಗಳಾದ ಡಾ| ವಿಜಯಕುಮಾರ ಪರುತೆ, ಗೌರವ ಕೋಶಾಧ್ಯಕ್ಷ ದೌಲತ್‌ರಾಯ ಮಾಲಿಪಾಟೀಲ, ಸಿ.ಎಸ್‌. ಮಾಲಿ ಪಾಟೀಲ, ರಘೋಜಿ ಅಂಕಲಕರ್‌, ಎಸ್‌.ಕೆ. ಹತ್ತಿ, ಸೂರ್ಯಕಾಂತ ಪಾಟೀಲ ಮುಂತಾದವರು ಇದ್ದರು. 

ಟಾಪ್ ನ್ಯೂಸ್

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.