ಗಂಡೋರಿ ನಾಲಾ ನೀರು ಬೆಳೆಗೆ ಹರಿಸಲು ಒತ್ತಾಯ
Team Udayavani, Dec 1, 2018, 11:32 AM IST
ಕಲಬುರಗಿ: ಗಂಡೋರಿ ನಾಲಾ ನೀರನ್ನು ರೈತರ ಹೊಲಗಳಿಗೆ ಈಗಾಗಲೇ ಬಿಟ್ಟಿದ್ದು, ಬಿಡುಗಡೆ ಮಾಡಲಾದ ನೀರು ಕೆಲ ಗ್ರಾಮಗಳ ರೈತರಿಗೆ ತಲುಪುತ್ತಿಲ್ಲ, ಕೂಡಲೇ ಎಲ್ಲ ರೈತರ ಜಮೀನುಗಳಿಗೆ ಗಂಡೋರಿ ನಾಲೆ ನೀರು ಹರಿಸುವ ಮೂಲಕ ರೈತರ ಬೆಳೆಗಳ ರಕ್ಷಣೆಗೆ ಮುಂದಾಗಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಕರ್ನಾಟಕ ನೀರಾವರಿ ನಿಗಮದ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು.
ಈಗಾಗಲೇ ಮಳೆ ಕೊರತೆಯಿಂದ ಬರಗಾಲದ ಛಾಯೆ ಎದುರಿಸುತ್ತಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಹೇಳುವವರು, ಕೇಳುವವರಿಲ್ಲದಂತಾಗಿದೆ. ಮಳೆಯಿಲ್ಲದ ಕಾರಣ ಈಗಾಗಲೇ ತೊಗರಿ ಬೆಳೆ ಹಾನಿಯಾಗಿ ನಷ್ಟ ಅನುಭವಿಸುತ್ತಿದ್ದಾರೆ.
ಗಂಡೋರಿ ನಾಲಾದ ನೀರು ಕೆಲ ಜಮೀನುಗಳಿಗೆ ಬರುತ್ತಿದ್ದು, ಇನ್ನು ಕೆಲವರಿಗೆ ನೀರು ಮುಟ್ಟುತ್ತಿಲ್ಲ. ಇದು ಒಂದು ಕಣ್ಣಿಗೆ ಸುಣ್ಣ , ಇನ್ನೊಂದು ಕಣ್ಣಿಗೆ ಬೆಣ್ಣೆ ಎನ್ನುವಂತಾಗಿದೆ. ಕಾಲುವೆ ಮೂಲಕ ನೀರು ಹರಿಯುತ್ತಿದ್ದರೂ ಕೆಲ ಗ್ರಾಮಗಳ ಜಮೀನಿಗೆ
ತಲುಪುತ್ತಿಲ್ಲ.ಇದರಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ನಾಲೆಯ ಮೂಲಕ ವ್ಯರ್ಥವಾಗಿ ಹರಿಯುತ್ತಿರುವ ನೀರನ್ನು ತಡೆದು ರೈತರ ಜಮೀನಿಗೆ ಮುಟ್ಟಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಕಂದಗೋಳ, ಅರಣಕಲ್, ರೇವಗ್ಗಿ, ರಟಕಲ್ ಭಾಗಗಳ ರೈತರಿಗೆ ಗಂಡೋರಿ ನಾಲೆಯ ನೀರು ತಲುಪುತ್ತಿಲ್ಲ. ಕೂಡಲೇ ನೀರು ಹರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು. ಬೇಡಿಕೆಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟ ರೂಪಿಸಬೇಕಾಗುವುದು ಎಂದು ಎಚ್ಚರಿಸಿದರು. ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ರೇವಣಸಿದ್ದ ಬಡಾ, ರೇವಣಸಿದ್ದ ಅರಣಕಲ್, ಸಂಜು ಗೌಡರ್, ರಾಘವೇಂದ್ರ ಜಿ
ಹಾಗೂ ಇತರರು ಪಾಲ್ಗೊಂಡಿದ್ದರು.
ಕಾಲುವೆ ನೀರು ಸ್ಥಗಿತ
ಕಲಬುರಗಿ: ಗಂಡೋರಿನಾಲಾ ಜಲಾಶಯದಲ್ಲಿ ಸದ್ಯಕ್ಕೆ 1.320 ಟಿಎಂಸಿ ಅಡಿ ನೀರು ಲಭ್ಯವಿದೆ. ಈ ನೀರನ್ನು ಬೇಸಿಗೆ ವರೆಗೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಾಗಿದೆ. ಅಲ್ಲದೇ ಹಿಂಗಾರು ಮಳೆಯು ಬಾರದೆ ಸಂಪೂರ್ಣ ಕೈಕೊಟ್ಟಿರುವುದರಿಂದ ಅನಿವಾರ್ಯವಾಗಿ ಕಾಲುವೆ ನೀರನ್ನು ಡಿ. 1 ರಿಂದ ಸ್ಥಗಿತಗೊಳಿಸಲಾಗುತ್ತಿದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ ಐಪಿಸಿ ವಿಭಾಗ ನಂ. 1ರ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಪ್ರಸಕ್ತ ವರ್ಷ ಮಳೆ ಅಭಾವ ಇರುವುದರಿಂದ ಬೆಳೆ ಬೆಳೆಯಲು ಹಾಗೂ ದನಕರುಗಳಿಗೆ ನೀರಿನ ಅವಶ್ಯಕತೆಯಿದೆ. ಕಲಬುರಗಿ (ಗ್ರಾಮೀಣ) ಶಾಸಕ ಬಸವರಾಜ ಮತ್ತಿಮಡು ಅವರ ಕೋರಿಕೆ ಹಾಗೂ ರೈತರ ಬೇಡಿಕೆ ಮೇರೆಗೆ ಗಂಡೋರಿನಾಲಾ ಯೋಜನೆಯಿಂದ 2018ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆಗಳಿಗೆ ಕಾಲುವೆ ಜಾಲದಲ್ಲಿ ನಡೆಯುತ್ತಿರುವ ಆಧುನೀಕರಣ ಕಾಮಗಾರಿ ಸ್ಥಗಿತಗೊಳಿಸಿ ಮೇಲಾಧಿಕಾರಿಗಳ ಪರವಾನಗಿ ಪಡೆದು ನ. 7 ರಿಂದ ಕಾಲುವೆಯಲ್ಲಿ ನೀರು ಬಿಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.