ಕಾಲೇಜುಗಳಲ್ಲಿ ಯೂನಿಯನ್‌ಗಳು ಬೇಡ
Team Udayavani, Dec 1, 2018, 12:33 PM IST
ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಯೂನಿಯನ್ ವ್ಯವಸ್ಥೆ ತರಬಾರದು ಎಂದು ಸ್ವಾತಂತ್ರ್ಯ ಹೋರಾಟಗಾರ ಡಾ.ಎಚ್.ಎಸ್.ದೊರೆಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ಗಾಂಧೀ ಸ್ಮಾರಕ ನಿಧಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ “ಬಾಪೂ 150: ಗಾಂಧಿ ಅಂಗಳದಲ್ಲಿ ಗಾಂಧಿ ಚಿಂತಕರು’ ಸಂವಾದದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿ ಹಂತದಲ್ಲಿ ಒಂದು ಪಕ್ಷಕ್ಕೆ ಮತ್ತು ಸಿದ್ಧಾಂತಕ್ಕೆ ಸೀಮಿತಗೊಳ್ಳಬಾರದು. ಕಾಲೇಜುಗಳಲ್ಲಿ ಯೂನಿಯನ್‌ಗಳನ್ನು ಮಾಡಲು ಮುಂದಾಗಿರುವುದು ಸೂಕ್ತವಲ್ಲ. ಇದರಿಂದ ಶಿಕ್ಷಣ ಸಂಸ್ಥೆಗಳಲ್ಲಿ ರಾಜಕೀಯ ನುಸುಳುತ್ತದೆ ಎಂದು ಹೇಳಿದರು.
ಗಾಂಧೀಜಿ ಎಂದಿಗೂ ದೇಶ ವಿಭಜನೆಯ ಬಗ್ಗೆ ಯೋಚಿಸಿರಲಿಲ್ಲ. ಭಾರತ ಇಬ್ಭಾಗವಾಗದಂತೆ ಮೊಹಮ್ಮದ್ ಅಲಿ ಜಿನ್ನಾ ಅವರ ಜತೆ ಗಾಂಧೀಜಿ ಚರ್ಚಿಸಿದರು. ಆದರೆ ಆ ಸಂದರ್ಭದಲ್ಲಿ ಪಾಕಿಸ್ತಾನದ ನೆಲದಲ್ಲಿ ವಾಸವಿದ್ದ ಹಿಂದೂಗಳು ಮತ್ತು ಸಿಖVರು ಹಿಂಸೆ ತಡೆಯಲಾರದೆ ಭಾರತಕ್ಕೆ ಬಂದರು.
ಹೀಗಾಗಿ, ಸರ್ದಾರ್ ವಲ್ಲಭಬಾಯಿ ಪಟೇಲ್ ಹಾಗೂ ಜವಾಹರಲಾಲ್ ನೆಹರು ಅವರು ದೇಶದಲ್ಲಿ ಶಾಂತಿ ಮೂಡಿಸುವ ಸಲುವಾಗಿ ಭಾರತವನ್ನು ವಿಭಜಿಸಲು ಮುಂದಾದರು. ಒಂದು ವೇಳೆ ಅಂದು ಪಾಕಿಸ್ತಾನ ದೇಶ ಉದಯಿಸಲು ಅವಕಾಶ ನೀಡದಿದ್ದರೆ ಮತ್ತಷ್ಟು ಸಾವು ನೋವು ಸಂಭವಿಸುತ್ತಿದ್ದವು ಎಂದು ತಿಳಿಸಿದರು.
ಪ್ರಪಂಚದಲ್ಲಿ ಪರಿಪೂರ್ಣ ವ್ಯಕ್ತಿಗಳೆಂದು ಯಾರೂ ಇರುವುದಿಲ್ಲ. ಎಲ್ಲರಿಂದಲೂ ತಪ್ಪಾಗುತ್ತವೆ. ತಪ್ಪುಗಳನ್ನು ಒಪ್ಪಿಕೊಂಡು ತಿದ್ದಿಕೊಂಡು ಬದುಕುವವರು ನಿಜವಾದ ಮನುಷ್ಯರಾಗುತ್ತಾರೆ ಎಂದ ಅವರು, ತಾತ್ವಿಕ ವಿಚಾರದಲ್ಲಿ ಅಂಬೇಡ್ಕರ್ ಹಾಗೂ ಗಾಂಧೀಜಿ ಅವರಲ್ಲಿ ಭಿನ್ನಾಭಿಪ್ರಾಯಗಳಿದ್ದವು. ಆದರೆ ಅವರಿಬ್ಬರ ನಡುವೆ ಹಗೆತನ ಇರಲಿಲ್ಲ ಎಂದು ಹೇಳಿದರು.
ಕರ್ನಾಟಕ ಗಾಂಧೀ ಸ್ಮಾರಕ ನಿಧಿಯ ಅಧ್ಯಕ್ಷ ವೂಡೇ ಪಿ.ಕೃಷ್ಣ, ಪರಿಸರವಾದಿ ನಾರಾಯಣ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.